ಗದಗ | ಭೂ ನ್ಯಾಯಮಂಡಳಿಗೆ ಇಬ್ಬರು ಸದಸ್ಯರ ನೇಮಕ

Date:

Advertisements

ಹಿಂದಿನಿಂದಲೂ ಅನ್ಯಾಯದ ವಿರುದ್ಧ ಮತ್ತು ಬಡವರ, ದಿನ ದಲಿತರ ಪರವಾಗಿ ಹೋರಾಟ ಮಾಡುತ್ತಾ ಬಂದಿದ್ದೇನೆ. ಮುಂದೆಯೂ ಕೂಡ ನನ್ನ ಹೋರಾಟ ಅದೇ ರೀತಿಯಲ್ಲಿ ಮುಂದುವರೆತ್ತದೆ. ನಾವೆಲ್ಲರೂ ಸಂವಿಧಾನದಡಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡೋಣ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಸುರೇಶ ನಂದೆಣ್ಣವರ ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಭೂ ನ್ಯಾಯಮಂಡಳಿಯ ಸದಸ್ಯರಾಗಿ ನೇಮಕವಾದ ಬಳಿಕ ಮಾತನಾಡಿದರು.

ಇನ್ನೋರ್ವ ಭೂ ನ್ಯಾಯಮಂಡಳಿಯ ಸದಸ್ಯರಾಗಿರುವ ನಜೀರ್ ಅಹ್ಮದ್ ಗದಗ ಮಾತನಾಡಿ, “ಸಂವಿಧಾನವೇ ನಮಗೆ ರಕ್ಷಣಾ ಕವಚ ಇದ್ದಂತೆ. ಹಾಗಾಗಿ ನಾವು ಸಂವಿಧಾನದ ಅಡಿಯಲ್ಲಿ ಸಾಮಾಜಿಕ ಕೆಲಸ ಮಾಡುವುದರ ಜತೆಗೆ ಸಂವಿಧಾನವನ್ನು ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ” ಎಂದು ಹೇಳಿದರು.

Advertisements

“ಲಕ್ಷೇಶ್ವರದಲ್ಲಿ ಮುಸ್ಲಿಂ ಸಮುದಾಯ ಮತ್ತು ದಲಿತ ಸಮುದಾಯಗಳು ಸಹೋದರರ ಸಂಬಂಧವನ್ನು ಹೊಂದಿದ್ದು, ಅದು ಯಾವಾಗಲೂ ಹೀಗೆ ಮುಂದುವರೆಯಲಿ” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ, ಹಿರಿಯ ಹೋರಾಟಗಾರ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸುರೇಶ ನಂದೆಣ್ಣವರ ಮತ್ತು ಇನ್ನೋರ್ವ ಭೂ ನ್ಯಾಯ ಮಂಡಳಿಯ ಸದಸ್ಯ, ಕಾಂಗ್ರೆಸ್ ಪಕ್ಷದ ನಾಯಕ, ವಕೀಲರೂ ಆಗಿರುವ ನಜೀರ್ ಅಹ್ಮದ್ ಗದಗ ಅವರಿಗೆ ಲಕ್ಷ್ಮೇಶ್ವರ ಪ್ರವಾಸಿ ಮಂದಿರದಲ್ಲಿ ವಕೀಲ ಮೈಲಾರಪ್ಪ ಡಿ ಎಚ್ ಅವರ ಸಮ್ಮುಖದಲ್ಲಿ ಸನ್ಮಾನಿಸಿ ಶುಭ ಹಾರೈಸಿ ಸಿಹಿ ಹಂಚಿಕೊಂಡರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ವಾಧಿಕಾರಿ ಧೋರಣೆ ಅಂತ್ಯಗೊಳಿಸಲು ಮತದಾರರು ಮುಂದಾಗಬೇಕು: ಎಸ್ ಆರ್ ಹೀರೆಮಠ

ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಸದಾನಂದ ಸಂದೆಣ್ಣವರ, ಯುವ ನಾಯಕ ಅನಿಲ ನಂದೆಣ್ಣವರ, ಮಾರುತಿ ಗೋವನಕೊಪ್ಪ, ಮುತ್ತು ಸೂರಣಗಿ, ಬಸವರಾಜ ಸೂರಣಗಿ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X