ಗದಗ | ಪ್ರಾಮಾಣಿಕತೆಗೆ ಸಾಕ್ಷಿಯಾದ ಬಾಲಕನ ಕುಟುಂಬಕ್ಕೆ ನೆರವು ನೀಡಲಾಗುವುದು: ಸಚಿವ ಎಚ್ ಕೆ ಪಾಟೀಲ್ ಭರವಸೆ

Date:

“ಸಿಕ್ಕ ನಿಧಿ ನಮ್ಮದಲ್ಲವೆಂದು ಸರಕಾರಕ್ಕೆ ನೀಡುವ ಪ್ರಜ್ವಲ್ ರಿತ್ತಿ ಹಾಗೂ ಅವರ ತಾಯಿ ಕಸ್ತೂರೆವ್ವಾ ರಿತ್ತಿ ಅವರ ಗುಣ ನಿಧಿಗಿಂತ ಹೆಚ್ಚು ಬೆಲೆ ಬಾಳುವಂತಹದ್ದು, ಅವರ ಪ್ರಾಮಾಣಿಕತೆಗೆ ಸಾಕ್ಷಿ ಆಗಿದ್ದು, ನಮ್ಮ ಗದಗ ಜಿಲ್ಲೆ ಕೀರ್ತಿಯನ್ನು ಹೆಚ್ಚಿಸಿದ್ದಾರೆ” ಎಂದು ಸಚಿವ ಎಚ್ ಕೆ ಪಾಟೀಲ್ ಶ್ಲಾಘಿಸಿದರು.

- Advertisement -

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಕಟ್ಟಲು ಅಡಿಪಾಯ ತಗೆಯುವಾಗ ಪತ್ತೆಯಾದ ನಿಧಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಎಚ್ ಕೆ ಪಾಟೀಲ್ ಭೇಟಿ ಪರಿಶೀಲಿಸಿ, ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

“ಈ ಗ್ರಾಮಸ್ಥರು, ಹಿರಿಯರು ‘ಈ ಕುಟುಂಬಕ್ಕೆ ಜಾಗ ಕೊಟ್ಟು ಮನೆ ಕಟ್ಟಿಸಿಕೊಡಬೇಕು. ಜೊತೆಗೆ ಬಾಲಕನ ತಾಯಿಗೆ ಉದ್ಯೋಗ ಕೊಡಬೇಕು’ ಎಂಬ ಬೇಡಿಕೆ ಮುಂದಿಟ್ಟಿದ್ದಾರೆ” ಎಂದು ಹೇಳಿದರು.

ಈ ವಿಚಾರಗಳ ಕುರಿತು ನಾಳೆ ಮಾನ್ಯ ಮುಖ್ಯಮಂತ್ರಿಗಳ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಕಾನೂನು ಪ್ರಕಾರ ಪ್ರಜ್ವಲ್ ರಿತ್ತಿ, ಹಾಗೂ ಅವರ ತಾಯಿ ಕಸ್ತೂರೆವ್ವಾ ರಿತ್ತಿ ಕುಟುಂಬಕ್ಕೆ ಯಾವ ರೀತಿಯ ಗೌರವ ಮತ್ತು ನೆರವು ನೀಡಬೇಕು ಎಂಬ ನಿರ್ಧಾರವನ್ನು ಸಂಜೆಯೊಳಗೆ ಪ್ರಸ್ತಾಪ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಎರಡು ದಿನಗಳ ಹಿಂದೆ ಲಕ್ಕುಂಡಿಯಲ್ಲಿ 466 ಗ್ರಾಂ ಚಿನ್ನಾಭರಣಗಳು ಮತ್ತು 634 ಗ್ರಾಂ ತಾಮ್ರದ ತಂಬಿಗೆಯೊಳಗೆ ಸಂಗ್ರಹಿತ ನಿಧಿ ಪತ್ತೆಯಾಗಿತ್ತು. ಪತ್ತೆಯಾದ ಈ ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕಾನೂನಿನ ಪ್ರಕಾರ ಪತ್ತೆಯಾದ ನಿಧಿಯನ್ನು ಯಾವ ಸ್ಥಳದಲ್ಲಿ ಇಡಬೇಕು ಎಂಬ ಬಗ್ಗೆ ಜಿಲ್ಲಾಡಳಿತ ಸೂಕ್ತ ತೀರ್ಮಾನ ಕೈಗೊಳ್ಳಲಿದೆ” ಎಂದು ಹೇಳಿದರು. 

ಈ ಸಂದರ್ಭದಲ್ಲಿ ಲಕ್ಕುಂಡಿ ಪ್ರಾಧಿಕಾರ ಸದಸ್ಯ ಸಿದ್ದಲಿಂಗೇಶ ಪಾಟೀಲ, ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿ ರಮೇಶ ಮೂಲಿಮನಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾದ್ಯಕ್ಷ ಬಿ ಬಿ ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್  ಜಗದೀಶ್, ಲಕ್ಕುಂಡಿ ಪ್ರಾಧಿಕಾರದ ಆಯುಕ್ತ ಶರಣು ಗೊಗೇರಿ ಹಾಗೂ ನಿಧಿ ಸಿಕ್ಕ ಸ್ಥಳದ ಮಾಲಕರು, ಗ್ರಾಮ ಪಂಚಾಯತ್ ಸದಸ್ಯರು, ಪುರಾತತ್ವ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಇಂಡಿ |‌ ಜೋಡೆತ್ತು ಕೃಷಿಕರ ಪ್ರತಿಭಟನೆ; ಅಹವಾಲು ಆಲಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಜೋಡೆತ್ತಿನ ಕೃಷಿಕರ ಬೇಡಿಕೆಗಳನ್ನು...