ಗದಗ | ವಿದ್ಯಾರ್ಥಿಗಳಿಗೆ ಮತೀಯವಾದ ಬಿತ್ತಲು ಪ್ರಯತ್ನ; ದಲಿತ ಮುಖಂಡರ ಆಕ್ರೋಶ

Date:

ರಾಜ್ಯದ ದಲಿತ, ಅಲ್ಪಸಂಖ್ಯಾತ, ಪ್ರಗತಿಪರ ಸಂಘಟನೆಗಳು ಯಾವು ಆಶಯಕ್ಕಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದವೋ, ಆ ಆಶಯದ ವಿರುದ್ಧ ಕಾಂಗ್ರೆಸ್‌ ನಡೆದುಕೊಳ್ಳುತ್ತಿದೆ. ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಮತೀಯವಾದ ಬಿತ್ತುವ ಪ್ರಯತ್ನ ನಡೆಯುತ್ತಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಗದಗ ಪ್ರವಾಸಿ ಮಂದಿರದಲ್ಲಿ ಸಚಿವರನ್ನು ಭೇಟಿ ಮಾಡಿದ ದಲಿತ ಮುಖಂಡರು, “ಗ್ರಾಮೀಣ ಅಭಿವೃದ್ದಿ ಪಂಚಾಯತ್ ರಾಜ್‌ ವಿಶ್ವವಿದ್ಯಾಲಯದಲ್ಲಿ ನಡೆದ ವಚನ ಸಂಭ್ರಮದಲ್ಲಿ ಒಂದು‌ ಧರ್ಮದ ಜನಾಂಗಕ್ಕೆ ಅವಕಾಶ ಕೊಟ್ಟು ವಿಧ್ಯಾರ್ಥಿಗಳಲ್ಲಿ‌ ಮತೀಯವಾದವನ್ನು‌ ಬಿತ್ತಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಬಳಿಕ, ವಿಶ್ವಿವಿದ್ಯಾಲಯದ ವಿಸಿ ವಿಷ್ಣುಕಾಂತ ಚಟಪಲ್ಲಿ ಕರೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಯಕ್ರಮದಲ್ಲಿ ಮತೀಯವಾದ ಬಿತ್ತುವ ಕುರಿತು ತರಾಟೆಗೆ ತೆಗೆದುಕೊಂಡಿದ್ದಾರೆ. ಮತೀಯವಾದಕ್ಕೆ ಅವಕಾಶ ಕೊಡದಂತೆ ತಾಕೀತು ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಅರಂತೋಡು ಪಟೇಲ್ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನಿಂದ ಎಕ್ಸಲೆನ್ಸ್ ಅವಾರ್ಡ್ ಕಾರ್ಯಕ್ರಮ

ಈ‌ ಸಂಧರ್ಭದಲ್ಲಿ ಬುದ್ಧನ ಪ್ರತಿಮೆ ಲಡಾಯಿ ಪ್ರಕಾಶನದ ವೈಚಾರಿಕ ವರ್ಷದ ಕಾಲೆಂಡರ್ ಮತ್ತು ವಾಣಿ ಪೆರಿಯೋಡಿಯವರು ಬರೆದ ಮಕ್ಕಳಿಗಾಗಿ ಸಂವಿಧಾನ ಪುಸ್ತಕವನ್ನು ಪ್ರಿಯಾಂಕ್ ಖರ್ಗೆಯವರಿಗೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

ಚಿತ್ರದುರ್ಗ | ಅಸಮಾನತೆ ಹೋಗಲಾಡಿಸುವುದೇ ಶೋಷಿತ ಸಮುದಾಯಗಳ ಏಳಿಗೆಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ...

ಉಡುಪಿ | ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳವಾಗುತ್ತಿದೆ. ಆಟೋರಿಕ್ಷಾ ಚಾಲಕರು ತಮ್ಮ...

ಬೀದರ್‌ | ಜೆಜೆಎಂ ಕಾಮಗಾರಿ ಅಪೂರ್ಣ: ಕೆಸರು ಗದ್ದೆಯಂತಾದ ರಸ್ತೆಗಳು

ಮಳೆಗೆ ಕೆಸರು ಗದ್ದೆಯಂತಾದ ರಸ್ತೆ, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ...