ಗದಗ | ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಡಿ.24ಕ್ಕೆ ಬಂದ್‌ಗೆ ಕರೆ

Date:

Advertisements

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಡಾ. ಬಿ ಆರ್ ಅಂಬೇಡ್ಕರ್ ಅಭಿಮಾನಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟವು ಡಿಸೆಂಬರ್ 24ರಂದು ಗದಗ ಬಂದ್‌ಗೆ ಕರೆ ನೀಡಿದೆ.

ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮುಖಂಡರು, ಡಿ. 24ರ ಮಂಗಳವಾರ ‘ಗದಗ ಬಂದ್’ ಕರೆ ನೀಡಲಾಗಿದೆ. ಇದಕ್ಕೆ ಎಲ್ಲ ಸಂಘಟನೆಗಳು ಕೈಜೋಡಿಸಿದ್ದು, ದೇಶದ ಮಟ್ಟದಲ್ಲಿ ಗಮನ ಸೆಳೆಯುವ ಹಾಗೆ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಹಾಗೂ ಆರ್.ಎಸ್.ಎಸ್ ಸಂವಿಧಾನ ಜಾರಿಗೆ ಬಂದಾಗಿನಿಂದಲೂ ಅವರು ಅಂಬೇಡ್ಕರ್ ಅವರಿಂದ ರಚಿತವಾದ ಸಂವಿಧಾನವನ್ನು ಒಪ್ಪಿಕೊಂಡಿಲ್ಲ.ಇಡೀ ದೇಶದಲ್ಲಿ ಮನುಸ್ಮೃತಿಯನ್ನು ಬಲವಂತವಾಗಿ ಹೇರಲು ಹೊರಟಿದ್ದಾರೆ. ಅಮಿತ್ ಶಾ ಅವರ ಅಂಬೇಡ್ಕರ್ ಕುರಿತ ಹೇಳಿಕೆ ಇಡೀ ದೇಶದ ದಲಿತರ ಹಾಗೂ ಪ್ರಗತಿಪರರ ಭಾವನೆಗಳಿಗೆ ಧಕ್ಕೆಯಾಗಿದೆ. ಇದನ್ನು ಖಂಡಿಸಿ ಮಂಗಳವಾರದಂದು ಗದಗ ಬಂದ್‌ಗೆ ಕರೆ ಕೊಟ್ಟಿದ್ದು, ಈ ಬಂದ್‌ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.

Advertisements

ಇದನ್ನು ಓದಿದ್ದೀರಾ? ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 6 ಲಕ್ಷಕ್ಕೂ ಅಧಿಕ ಮಂದಿಯ ಆಗಮನ: ಸಚಿವ ಚಲುವರಾಯಸ್ವಾಮಿ

ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡರಾದ ಅಯ್ಯಪ್ಪ ನಾಯ್ಕರ, ಬಸವರಾಜ ಕಡೇಮನಿ, ವಿಜಯ ಮುಳಗುಂದ, ಆನಂದ ಶಿಂಗಾಡಿ, ಶೇಕಣ್ಣ ಕವಳಿಕಾಯಿ, ಹನುಮಂತಪ್ಪ ಕಿನ್ನಾಳ, ಶಾಂತಣ್ಣ ಮಾಳವಾಡ.ಎಸ್.ಜಿ.ಕೊಪ್ಪಳ, ನಿಸ್ಸಾರ ಅಹ್ಮದ್ ಖಾಜಿ, ಭಾಷಾಸಾಭ್ ಮುಲ್ಲಸಮುದ್ರ, ಬಾಲರಾಜ್ ಅರಬರ, ನಾಗರಾಜ್ ಗೋಕಾವಿ, ಮಲ್ಲೇಶ್ ಹೊಸಮನಿ, ಬಸವರಾಜ ಬೇವಿನಮರದ, ಮೈಲಾರಪ್ಪ ಚಳ್ಳಮರದ, ಪರಮೇಶ್ ಕಾಳೆ, ರಾಘವೇಂದ್ರ ಪರಾಪೂರ, ಗಣೇಶ ಹುಬ್ಬಳ್ಳಿ ಅನೇಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X