“ಬಂಜಾರ ಸಮುದಾಯವು ಅತ್ಯಂತ ಹಿಂದುಳಿದಿದ್ದು, ಶ್ರಮಜೀವಿಗಳ ಸಮಾಜವಾಗಿದೆ. ಬಂಜಾರ ಸಮುದಾಯದ ಶ್ರೀಮಂತ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ಮಾದರಿಯದಾಗಿದೆ. ಬಂಜಾರ ಸಾಹಿತ್ಯವನ್ನು ದಾಖಲೀಕರಣವಾಗಬೇಕು. ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವಾಗಬೇಕು” ಎಂದು ವಿಧಾನ ಪರಿಷತ್ ಸದಸ್ಯರಾದ ಪ್ರೊ. ಎಸ್. ವ್ಹಿ. ಸಂಕನೂರ ಹೇಳಿದರು.
ಗದಗ ಪಟ್ಟಣದ ಬೆಟಗೇರಿ ನಗರದಲ್ಲಿ ಭಾನುವಾರ ನಗರದ ಶ್ರೀರಾಮ ಬಂಜಾರ ಭವನದಲ್ಲಿ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ ಗದಗ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
“ಅಲೆಮಾರಿ ಸಮುದಾಯದವರಾದ ಬಂಜಾರ ಸಮಾಜ ಕರ್ನಾಟಕದಲ್ಲಿ ಮೊದಲ ಬಾರಿಗೆ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ಸ್ಥಾಪಿಸುತ್ತಿರುವುದು ಸಂತಸದ ಹೆಮ್ಮೆಯ ಸಂಗತಿ” ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಶಾಸಕರು ಡಾ. ಚಂದ್ರು ಲಮಾಣಿ ಮಾತನಾಡಿ, “ನಮ್ಮ ಬಂಜಾರ ಸಮಾಜದ ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿ ಅಮೂಲ್ಯವಾದದ್ದು. ಅಖಂಡ ಭಾರತದಲ್ಲಿ ಒಂದೇ ಭಾಷೆ ಸಂಸ್ಕೃತಿಯೊಂದಿಗೆ ವೈಶಿಷ್ಟತೆಯನ್ನು ಹೊಂದಿದೆ. ಸಮಾಜದಲ್ಲಿ ಅನೇಕ ಸಾಧಕ ಮಹನೀಯರಿದ್ದಾರೆ ಎನ್ನುವುದು ಹೆಮ್ಮೆಯ ಸಂಗತಿ. ಸಮಾಜದ ಇಂಥಹ ವಿಶೇಷ ಕಾರ್ಯಕ್ರಮಗಳಿಗೆ ತಾವು ಸದಾ ಸಹಕಾರ ನೀಡುವುದಾಗಿ” ಹೇಳಿದರು.
ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಸಂತಸೇವಾಲಾಲರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಿದ ಕರ್ನಾಟಕ ಬಂಜಾರ ಸಾಹಿತ್ಯ ರಾಜ್ಯ ಗೌರವಾಧ್ಯಕ್ಷ ಡಾ. ಪಿ. ಕೆ. ಖಂಡೋಭಾ ಅವರು ಮಾತನಾಡಿ, ನಾವೆಲ್ಲ ಸಮಾಜ ಬಾಂಧವರು ಒಂದಾಗಬೇಕು. ಈ ಸಾಹಿತ್ಯ ಪರಿಷತ್ತಿನ ಪ್ರತಿಯೊಂದು ಕಾರ್ಯಕ್ರಮಗಳು ದಾಖಲೀಕರಣವಾಗಬೇಕು. ನಮ್ಮವರನ್ನು ನಾವು ಗುರುತಿಸಿ ಗೌರವಿಸಬೇಕು. ಸಮಾಜದಲ್ಲಿರುವ ಇನ್ನೊಬ್ಬರನ್ನು ಬೆಳಸುವ ಮನೋಭಾವ ಹೊಂದಬೇಕು ಎಂದರು.
ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀಕಾಂತ ಜಾಧವ ಹಾಗೂ ಖಂಡೂ ಬಂಜಾರ ಇವರು ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ ಗದಗ ಜಿಲ್ಲಾ ಘಟಕದ ಪದಾಧಿಕಾರಿಗಳಿಗೆ ಪದಗ್ರಹಣ ನೆವೇರಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ : ಕರವಸ್ತ್ರ ಹಿಡಿಯಲು ಯತ್ನಿಸಿ ಫಾಲ್ಸ್ ನಲ್ಲಿ ಬಿದ್ದು ವ್ಯಕ್ತಿ ಸಾವು
ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ ಅಧ್ಯಕ್ಷರು ಶ್ರೀಕಾಂತ ಜಾಧವ, ಗದಗ ಜಿಲ್ಲಾ ಬಂಜಾರ ಅಭಿವೃದ್ಧಿ ವೇದಿಕೆ ಅಧ್ಯಕ್ಷರಾದ ಡಾ. ಭೀಮಸಿಂಗ್ ರಾಠೋಡ, ಕಾರ್ಯದರ್ಶಿ ಗದಗ ಜಿಲ್ಲಾ ಕಾಂಗ್ರೆಸ್ ಸಮೀತಿ ಎಸ್.ಸಿ ಘಟಕ ಸೋಮು ಲಮಾಣಿ, ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ. ಕೆ. ಲಮಾಣಿ, ಹಿರಿಯ ಕರ್ನಾಟಕ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಶ ಟಿ. ರಾಠೋಡ ಇವರು ಸಮಾರಂಭ ಉದ್ದೇಶಿಸಿ ಮಾತನಾಡಿದರು.
ವೇದಿಕೆ ಮೇಲೆ ಉಪಾಧ್ಯಕ್ಷರಾದ ಮಂಜಪ್ಪ ಎಲ್., ಕರ್ನಾಟಕ ರಾಜ್ಯ ಬಂಜಾರ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಡಿ. ಎಲ್. ನಾಯಕ, ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ಹಬ್ಬಳ್ಳಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಲ್. ಪಿ. ನಾಯ್ಕ ಕಠಾರಿ, ಸ್ಥಳೀಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ಹಿರಿಯ ಉಪ ನಿರ್ದೇಶಕರಾದ ಎಸ್. ವಾಯ್. ಲಮಾಣಿ, ಆರ್.ಡಿ.ಪಿ.ಆರ್. ಸಹಾಯಕ ನಿರ್ದೇಶಕರು ಕುಮಾರ ಎಲ್. ಪೂಜಾರ, ಬಂಜಾರ ಸಮಾಜದ ಹಿರಯ ಕಲಾವಿದರಾದ ಪಾಂಡಪ್ಪ ರಾಠೋಡ, ಜಾನು ಲಮಾಣಿ, ಥಾವು ಜಾಧವ ಮುಂತಾದವರು ಉಪಸ್ಥಿತರಿದ್ದರು.
