“12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು. ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಕೊಂಡು ಹೋದಾಗ ಸದೃಢ ಸಮಾಜವನ್ನು ಕಟ್ಟಲು ಸಾಧ್ಯವಾಗುತ್ತದೆ. ನಮ್ಮ ಬದುಕನ್ನು ಸುಂದರವಾಗಿ ನಡೆಯಲಿಕ್ಕೆ ಈ ಸಮ್ಮೇಳನ ಮುನ್ನುಡಿಯಾಗಲಿ” ಎಂದು ವಿಧಾನ ಪರಿಷತ್ ಸದಸ್ಯರು ಪ್ರೊ. ಎಸ್. ವಿ. ಸಂಕನೂರು ಹೇಳಿದರು.
ಗದಗ ಪಟ್ಟಣದಲ್ಲಿ ಇಂದು ತೊಂಟದ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದ ಶಿವಶರಣೆ ಮುಕ್ತಾಯಕ್ಕ ವೇದಿಕೆಯಲ್ಲಿ ಜಿಲ್ಲಾ ಕದಳಿ ಮಹಿಳಾ ಸಮ್ಮೇಳನದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.
“ಭಾರತಕ್ಕೆ ಸ್ವತಂತ್ರ ಸಿಕ್ಕ ನಂತರದಲ್ಲಿ ಡಾ. ಬಿ. ಆರ್. ಅಂಬೇಡ್ಕರ ಅವರು ಸಂವಿಧಾನ ಬರೆಯುವ ಸಂದರ್ಭದಲ್ಲಿ ಶರಣರ ತತ್ತ್ವಗಳನ್ನು ಅಳವಡಿಸಿಕೊಂಡು ರಚಿಸಿದ್ದಾರೆ. ಶರಣರ, ಬಸವಣ್ಣನವರ, ಅಂಬೇಡ್ಕರ್ ಅವರು ಕನಸು ಏನಾಗಿತ್ತು? ಸಮಾಜದಲ್ಲಿ ಸಮಾನತೆ ತರುವ ಕನಸಾಗಿತ್ತು. ಅವರುಗಳ ಕನಸು ಇಂದು ಈಡೇರಿದಿಯೇ ಮನನ ಮಾಡಿಕೊಳ್ಳಬೇಕು” ಎಂದರು.
“ಸಮಾಜದಲ್ಲಿ ಸಮಾನತೆ ತರಲು ಇವತ್ತಿಗೂ ಆಗಿಲ್ಲ. ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿವೆ. ಮಹಿಳೆಯರು ನೆಮ್ಮದಿಯಿಂದ ಬದುಕುಲು ಆಗಿದೆಯೇ? ಈ ಎಲ್ಲ ಪ್ರಶ್ನೆಗಳನ್ನು ನಾವೆಲ್ಲರೂ ಹಾಕಿಕೊಳ್ಳಬೇಕಾಗಿದೆ” ವಿಷಾದ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ನಿರಂತರ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾನಿ: ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ಸಂತ್ರಸ್ತ ರೈತರು
ಸಮ್ಮೇಳನದಲ್ಲಿ ದಿವ್ಯ ಸಾನಿಧ್ಯ ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು ಡಾ. ಸಿ. ಸೋಮಶೇಖರ, ಸಮ್ಮೇಳನದ ಸರ್ವಾಧ್ಯಕ್ಷರು ಶರಣೆ ಗಿರಿಜಕ್ಕ ಧರ್ಮರೆಡ್ಡಿ, ನಿಕಟಪೂರ್ವ ಸಮ್ಮೇಳನದ ಸರ್ವಾಧ್ಯಕ್ಷರು ಶಿವಶರಣೆ ಡಾ. ನಿಲ್ಲಮ್ಮತಾಯಿ ಅಸುಂಡಿ, ಕೆ. ಎ. ಬಳಿಗಾರ, ಸುಧಾ ಎಸ್. ಹುಚ್ಚಣ್ಣವರ, ಸುಶೀಲಾ ಸೋಮಶೇಖರ ಇನ್ನೂ ಅನೇಕರು ಉಪಸ್ಥಿತರಿದ್ದರು.