ಗದಗ ಅಭಿವೃದ್ಧಿಗೆ ಹೊಸ ವೇಗ: ಶಾಸಕ ಎಚ್.ಕೆ. ಪಾಟೀಲ್

Date:

ಗದಗ ನಗರದಲ್ಲಿ ಸುಸಜ್ಜಿತ ವಸತಿ ವಿನ್ಯಾಸ ನಿರ್ಮಿಸಬೇಕೆಂಬ ಬಹುದಿನಗಳ ಕನಸು ಇಂದು ಸಾಕಾರಗೊಳ್ಳುತ್ತಿರುವುದು ಅತ್ಯಂತ ಸಂತಸ ತಂದಿದೆ. 18.19 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲು ₹19.69 ಕೋಟಿ ಅನುದಾನದ ಯೋಜನೆ ರೂಪಿಸಿ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ” ಎಂದು ಶಾಸಕ ಎಚ್.ಕೆ. ಪಾಟೀಲ ಮಾತನಾಡಿ

- Advertisement -

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬುಧವಾರ ನಗರದ ಕಬಾಡರ ಲೇಔಟ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅಂದಾಜು ₹27 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ ಅವು ಲಾಕ್‌ಹೀಡ್, ಬೋಯಿಂಗ್, ಜನರಲ್ ಡೈನಾಮಿಕ್ಸ್‌ನಂತಹ ಖಾಸಗಿ ಕಂಪನಿಗಳ ಸಿಇಒಗಳ ಸಂಪೂರ್ಣ ನಿಯಂತ್ರಣದಲ್ಲಿವೆ... ನಾನು ಬರವಣಿಗೆಯನ್ನೇ ವೃತ್ತಿಯಾಗಿಸಿಕೊಂಡವನು;...

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಕಚೇರಿ ಕಟ್ಟಡವನ್ನು ಅಂದಾಜು ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಭೂಮಿಪೂಜೆ ನೆರವೇರಿಸಲಾಗಿದೆ. ಅಲ್ಲದೆ, ಸುಮಾರು 18 ಉದ್ಯಾನವನಗಳನ್ನು ₹4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೂ ಚಾಲನೆ ನೀಡಲಾಗಿದೆ. ಈ ಎಲ್ಲ ಕಾಮಗಾರಿಗಳು ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಗದಗ ನಗರ ವೇಗವಾಗಿ ಬೆಳೆಯುತ್ತಿದ್ದು, ಅದರ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಬೇಕಿದೆ. ವೈಜ್ಞಾನಿಕ ಯೋಜನೆಗಳ ಮೂಲಕ ಸುಂದರ ಹಾಗೂ ಸುಸಜ್ಜಿತ ನಗರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಹಾಗೂ ಪ್ರದರ್ಶನ ಪ್ರಾಧಿಕಾರದ ಮೂಲಕ 32 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಗೃಹ ಮಂಡಳಿಯಿಂದಲೂ ಈ ಪ್ರದೇಶದ ಅಭಿವೃದ್ಧಿಗೆ ಪ್ರಯತ್ನಗಳು ನಡೆಯುತ್ತಿವೆ. ಈ ಜಾಗವನ್ನು ಸರ್ಕಾರದ ವಶಕ್ಕೆ ಪಡೆಯಲು ಸಹಕರಿಸಿದ ಅಧಿಕಾರಿಗಳನ್ನು ಅಭಿನಂದಿಸಿದರು.

2027ರ ಅಂತ್ಯದೊಳಗೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ

ಗದಗ ನಗರದ ಕುಡಿಯುವ ನೀರಿನ ಸಮಸ್ಯೆ ಬಹುದೊಡ್ಡ ಸವಾಲಾಗಿದೆ. ಪ್ರತಿದಿನ ಸುಮಾರು 34 ಲಕ್ಷ ಲೀಟರ್ ನೀರು ಲಭ್ಯವಾಗುತ್ತಿದ್ದರೂ ಸಮರ್ಪಕ ಹಂಚಿಕೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ. ಸಿಂಗಟಾಲೂರಿನಿಂದ ಪಾಪನಾಶಿವರೆಗೆ ನೀರು ಪೂರೈಸುವ ಪೈಪ್‌ಲೈನ್ ಪದೇಪದೆ ಒಡೆದುಹೋಗುತ್ತಿರುವುದರಿಂದ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಈ ಸಮಸ್ಯೆ ಪರಿಹರಿಸಲು ₹59 ಕೋಟಿ ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ.

ಓವರ್‌ಹೆಡ್ ಟ್ಯಾಂಕ್‌ಗಳು ಹಾಗೂ ಇತರ ಮೂಲಸೌಕರ್ಯ ನಿರ್ಮಾಣಕ್ಕೆ ₹29 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಪಾಪನಾಶಿ ಪ್ರದೇಶದಲ್ಲಿ ₹21 ಕೋಟಿ ವೆಚ್ಚದಲ್ಲಿ ನೀರು ಸಂಗ್ರಹಣಾ ಯೋಜನೆ ರೂಪಿಸಲಾಗಿದ್ದು, ಜನವರಿಯಲ್ಲಿ ಕಾಮಗಾರಿ ಆರಂಭವಾಗಲಿದೆ. ಈ ಎಲ್ಲ ಕಾಮಗಾರಿಗಳು ಪೂರ್ಣಗೊಂಡ ಬಳಿಕ 2027ರ ಅಂತ್ಯದ ವೇಳೆಗೆ ಗದಗ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದರು.

ಗದಗ ನಗರವನ್ನು ಮಾದರಿ ನಗರವನ್ನಾಗಿಸುವ ಉದ್ದೇಶದಿಂದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕುಮಾರವ್ಯಾಸನ ನೆನಪಿನೊಂದಿಗೆ ಪ್ರವಾಸಿಗರು ಗದಗಕ್ಕೆ ಆಗಮಿಸುವಂತಾಗಬೇಕು. ಐತಿಹಾಸಿಕ ಜುಮ್ಮಾ ಮಸೀದಿ ಹಾಗೂ ತ್ರಿಕೂಟೇಶ್ವರ ದೇವಸ್ಥಾನಗಳಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುವಂತೆ ನಗರದ ಪ್ರವಾಸೋದ್ಯಮ ಅಭಿವೃದ್ಧಿಗೂ ನಗರಾಭಿವೃದ್ಧಿ ಪ್ರಾಧಿಕಾರ ವಿಶೇಷ ಗಮನ ಹರಿಸಬೇಕು ಎಂದು ಹೇಳಿದರು.

ಪ್ರಾಧಿಕಾರದ ಆಯುಕ್ತ ಎಸ್.ಸಿ. ಬೇವೂರ ಸ್ವಾಗತಿಸಿದರು. ಪ್ರೊ.‌ಬಾಹುಬಲಿ ಜೈನರ್ ನಿರ್ವಹಿಸಿದರು.

ಮುಖ್ಯ ಅತಿಥಿಗಳಾಗಿ ಗದಗ ಬೆಟಗೇರಿ ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ , ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್ , ಜಿಲ್ಲಾ ಪೋಲಿಸವರಿಷ್ಟಾಧಿಕಾರಿ ಮಿಥುನ್, ಗದಗ ಬೆಟಗೇರಿ ನಗರಾಭಿವೃಧ್ದಿ ಪ್ರಾಧಿಕಾರದ ಸದಸ್ಯಗಳಾದ ಬಸವರಾಜ ಎಮ್. ಕಡೇಮನಿ, ಮಲ್ಲಿಕಾರ್ಜುನ ಸಿ.ಐಲಿ, ಬಸವರಾಜ. ಎನ್. ಯರನಾಳ, ಶ್ರೀಮತಿ ಜಾನಕಿ.ಎಸ್. ಮಲ್ಲಾಪೂರ, ಚಂದ್ರಶೇಖರ ತಡಸದ ಹಾಗೂ ಗದಗ ಬೆಟಗೇರಿ ನಗರಸಭೆ ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...