ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾಡಳಿತ ಭವನದಿಂದ ಬೆಂಗಳೂರಿಗೆ ಸೆ.14ರಂದು ರವಿವಾರದಂದು ಬೈಕ್ ರ‌್ಯಾಲಿ ಏರ್ಪಡಿಸಿದ್ದರು.
ಈ ವೇಳೆ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಬೈಕ್ ರ‌್ಯಾಲಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸುದ್ಧಿ ಓದಿದ್ದೀರಾ? ಧಾರವಾಡ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಆರ್. ಪಾಟೀಲ್ ಚಾಲನೆ
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ ಸೇರಿದಂತೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.