ಗದಗ | ಮಾಜಿ ಪ್ರೇಮಿಯಿಂದ ಬ್ಲ್ಯಾಕ್‌ಮೇಲ್; ಬೇಸತ್ತ ದೈಹಿಕ ಶಿಕ್ಷಕಿ ಆತ್ಮಹತ್ಯೆಗೆ ಶರಣು

Date:

Advertisements

ಮಾಜಿ ಪ್ರೇಮಿಯ ಬ್ಲ್ಯಾಕ್‌ಮೇಲ್‌ಗೆ ಬೇಸತ್ತ ದೈಹಿಕ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸೈರಾಬಾನು ನದಾಫ್‌ (29) ಮೃತ ಶಿಕ್ಷಕಿ.

ಕಳೆದ 5 ವರ್ಷಗಳಿಂದ ಮೈಲಾರಿ ಎಂಬಾತನನ್ನು ಸೈರಾಬಾನು ಪ್ರೀತಿ ಮಾಡುತಿದ್ದರು. ಆದರೆ, ಕೆಲ ದಿನಗಳ ಹಿಂದೆ ಪ್ರೀತಿಯ ಸಂಬಂಧ ಮುರಿದು ಬಿದ್ದಿತ್ತು. ಬಳಿಕ ಪೋಷಕರ ಒತ್ತಾಯ ಮೇರೆಗೆ ಬೇರೆ ಮದುವೆಗೆ ಒಪ್ಪಿಗೆ ನೀಡಿದ್ದರು. ಇತ್ತ ಮಾಜಿ ಗೆಳತಿಯ ಮದುವೆ ತಯಾರಿ ನೋಡಿ ಮೈಲಾರಿ ಮೇಲಿಂದ ಮೇಲೆ ಮಾನಸಿಕವಾಗಿ ಹಿಂಸಿಸಲು ಶುರು ಮಾಡಿದ್ದಾನೆ. ಬೇರೆ ಮದುವೆ ಆದರೆ ಇಬ್ಬರ ಪೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕದ್ದಾನೆ. ಇದರಿಂದ ಮರ್ಯಾದೆಗೆ ಅಂಜಿ ಸೈರಾಬಾನು ಆತ್ಮಹತ್ಯೆ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಮದುವೆಗೆ 8 ದಿನ ಇದ್ದದ್ದರಿಂದ ಯುವತಿ ಪೋಷಕರು ಮದುವೆ ಸಾಮಗ್ರಿಗಳನ್ನು ತರಲು ಹೋಗಿದ್ದರು. ಪೋಷಕರು ಮರಳಿ ಬರುವಷ್ಟರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisements

ಸೈರಾಬಾನು ರಾಷ್ಟ್ರೀಯ ಮಟ್ಟದ ಕುಸ್ತಿಪಟು ಆಗಿದ್ದರು. ಹತ್ತಾರು ಮೆಡಲ್, ಕಪ್ ಗೆದ್ದು ಸಾಕಷ್ಟು ಹೆಸರು ಮಾಡಿದ್ದರು. ಆದರೀಗ ಮಾಜಿ ಪ್ರೇಮಿಯ ಮಾನಸಿಕ ಕಿರುಕುಳ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 02 10 at 2.03.18 PM 1 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X