ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

Date:

Advertisements

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದ್ದು, ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಗದಗ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ ಎಸ್‌ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಗದಗದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು, “2014 ಮತ್ತು 2019 ಲೋಕಸಭಾ ಚುನಾವಣೆಗಳ ಸಂದರ್ಭಕ್ಕೂ, 2024ರ ಚುನಾವಣೆಗೂ ಬಹಳಷ್ಟು ವ್ಯತ್ಯಾಸಗಳಿವೆ. ಈ ನಡುವಿನಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಯಾವುದೇ ಪರಿಸ್ಥಿತಿಯಲ್ಲಿ ನಮ್ಮ ಅಭ್ಯರ್ಥಿ ಹೆಚ್ಚಿನ ಮತಗಳಿಂದ ಆಯ್ಕೆಯಾಗುವ ವಿಶ್ವಾಸವಿದೆ” ಎಂದು ಹೇಳಿದರು.

“ಹಾವೇರಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಭಾಗಕ್ಕೆ ಸಾಕಷ್ಟು ಕೆಲಸಗಳನ್ನು ಮಾಡುವ ಅವಕಾಶಗಳಿದ್ದವು. ಆದರೆ, ಅವರು ಅಧಿಕಾರದಲ್ಲಿದ್ದಾಗ ಏನೂ ಅಭಿವೃದ್ಧಿ ಕಾರ್ಯ ಮಾಡಲಿಲ್ಲ” ಎಂದು ಟೀಕಿಸಿದರು.

Advertisements

“ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಅವರು ರಕ್ತದಲ್ಲಿ ಪತ್ರ ಬರೆದು ಚಳವಳಿ ಮಾಡಿದ್ದರು. ಮಹದಾಯಿ ಯೋಜನೆಯನ್ನು ರಾಜಕಾರಣದ ಮೆಟ್ಟಿಲಾಗಿಸಿಕೊಂಡ ಅವರು ಬಳಿಕ ರಾಜ್ಯದ ಮುಖ್ಯಮಂತ್ರಿಯೂ ಆದರು. ಆದರೆ, ಆ ಯೋಜನೆಯನ್ನು ಪೂರ್ಣಗೊಳಿಸಲು ಬದ್ಧತೆ ಪ್ರದರ್ಶಿಸಲಿಲ್ಲ” ಎಂದು ದೂರಿದರು.

“ನಮ್ಮ ಸರ್ಕಾರ ಇದ್ದಾಗ ಶಿಂಗಟಾಲೂರು ಏತನೀರಾವರಿ ಯೋಜನೆ ಪ್ರಾರಂಭಿಸಿತು. ಹನಿ ನೀರಾವರಿಗೆ ಆವತ್ತಿನ ಸರ್ಕಾರ ₹5,600 ಕೋಟಿ ಹಣ ಮಂಜೂರು ಮಾಡಿತ್ತು, ಅದನ್ನೂ ಮುಂದುವರಿಸಲಿಲ್ಲ. ಐದು ವರ್ಷಗಳ ಹಿಂದೆ ಹೇಗಿತ್ತೋ, ಪರಿಸ್ಥಿತಿ ಈಗಲೂ ಅದೇರೀತಿ ಇದೆ. ಮಹತ್ತರವಾದ ಯಾವುದೇ ಅಭಿವೃದ್ಧಿ ಕೆಲಸಗಳ ಬಗ್ಗೆ ಆಸಕ್ತಿ ವಹಿಸದ ಮಾಜಿ ಮುಖ್ಯಮಂತ್ರಿ ಈ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಜನರು ಅರ್ಥಮಾಡಿಕೊಂಡು ಮತ ಚಲಾಯಿಸಬೇಕು” ಎಂದು ಮನವಿ ಮಾಡಿದರು.

“ಎರಡು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅವರು ರಾಜ್ಯದ ಜನರಿಗೆ ಒಂದು ಮನೆ ಕೊಡಲಿಲ್ಲ. ‘ಧಮ್‌’ ಇದೆ, ‘ತಾಕತ್‌’ ಇದೆ ಅಂತ ಹೋದಲ್ಲೆಲ್ಲಾ ಹೇಳಿಕೊಂಡೇ ಮುಖ್ಯಮಂತ್ರಿ ಅವಧಿ ಮುಗಿಸಿದರು. ಇನ್ನು ಸಂಸದರಾದರೆ ಅವರು ಈ ಕ್ಷೇತ್ರಕ್ಕೆ ಏನು ಕೊಡುಗೆ ಕೊಡುತ್ತಾರೆ. ಆದರ್ಶ ವಿಕಾಸ ಗ್ರಾಮ ಯೋಜನೆ ಅಡಿ ಕಳೆದ ಹತ್ತು ವರ್ಷಗಳಲ್ಲಿ ಎಷ್ಟು ಗ್ರಾಮಗಳನ್ನು ನಿರ್ಮಾಣ ಮಾಡಿದ್ದಾರೆ? ಎಷ್ಟು ಮಂದಿ ಯುವಕರಿಗೆ ಉದ್ಯೋಗ ಸಿಕ್ಕಿದೆ” ಎಂದು ಪ್ರಶ್ನಿಸಿದರು.

“ಹಿಂದಿನ ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ ಅವರಿಗೆ ಅಭಿವೃದ್ಧಿ ಕೆಲಸಗಳನ್ನು ಮಾಡುವ ಉತ್ಸಾಹ ಇದ್ದರೂ, ಮೋದಿ ಸರ್ಕಾರದಿಂದ ಪ್ರೋತ್ಸಾಹ, ಬೆಂಬಲ ಸಿಗಲಿಲ್ಲ. ಈ ಕಾರಣಕ್ಕೆ ಬೇಸತ್ತ ಅವರು ಚುನಾವಣೆಗೆ ನಿಲ್ಲುವುದಿಲ್ಲವೆಂದು ಘೋಷಣೆ ಮಾಡಿದ್ದಾರೆ” ಎಂದು ಹೇಳಿದರು.

“ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ನಿರ್ಮಾಣವಾಗಿದ್ದು, 26 ಪಕ್ಷಗಳು ಒಗ್ಗೂಡಿವೆ. ಇಂಡಿಯಾ ಒಕ್ಕೂಟಕ್ಕೆ ಒಳ್ಳೆ ವಾತಾವರಣ ನಿರ್ಮಾಣವಾಗಿದೆ. ತಮಿಳುನಾಡಿನಲ್ಲಿ ಮತದಾನ ಮುಗಿದಿದ್ದು, ಸಮೀಕ್ಷೆಯಲ್ಲಿ ಡಿಎಂಕೆ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅಂದಾಜು ಹೊರಬಿದ್ದಿದೆ. ಅದೇ ವಾತಾವರಣ ಇಡೀ ದಕ್ಷಿಣ ಭಾರತದಲ್ಲಿದೆ. ಯಾವುದೇ ಪರಿಸ್ಥಿತಿಯಲ್ಲಿ ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆ ಮಾಡಲಿದೆ” ಎಂಬ ವಿಶ್ವಾಸ ವ್ಯಕ್ತಪಡಿಸಿದರು.

“ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆಯಾದರೆ ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವುದು, ರೈತರ ಸಾಲಮನ್ನಾ, ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರತಿ ಮನೆಯ ಯಜಮಾನಿಗೆ ವರ್ಷಕ್ಕೆ ₹1 ಲಕ್ಷ, ಜಿಎಸ್‌ಟಿ ರದ್ದು, ಮನರೇಗಾ ಕೂಲಿ ಕಾರ್ಮಿಕರಿಗೆ ₹400 ದಿನಗೂಲಿ ಇಂತಹ ಹತ್ತು ಹಲವು ಬಡವರಿಗೆ ಪೂರಕವಾದ ಕಾರ್ಯಕ್ರಮ ಅನುಷ್ಠಾನಗೊಳಿಸಲಿದೆ” ಎಂದು ಭರವಸೆ ನೀಡಿದರು.

“ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳು ಪಕ್ಷದ ಗೆಲುವಿಗೆ ಪೂರಕವಾಗಿವೆ. ಮಹಿಳೆಯರೆಲ್ಲರೂ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕುವ ನಿರ್ಧಾರಕ್ಕೆ ಬಂದಿದ್ದಾರೆ. ಬೇರೆ ಪಕ್ಷಗಳ ಕಾರ್ಯಕರ್ತರು ಕೂಡಾ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಕೆ ಪಾಟೀಲ ಸೇರಿದಂತೆ ಎಲ್ಲ ನಾಯಕರ ಸಹಕಾರದಿಂದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಗೆಲ್ಲಿಸುತ್ತೇವೆ” ಎಂದು ಹೇಳಿದರು.

ಗಜೇಂದ್ರಗಡದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರಸಭೆ

“ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಪ್ರಚಾರಾರ್ಥವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಪ್ರಿಲ್‌ 25ರಂದು ಗುರುವಾರ ಮಧ್ಯಾಹ್ನ 2.45ಕ್ಕೆ ಗಜೇಂದ್ರಗಡ ಪಟ್ಟಣಕ್ಕೆ ಬರಲಿದ್ದಾರೆ” ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜಿ ಎಸ್‌ ಪಾಟೀಲ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

“ಗಜೇಂದ್ರಗಡದಲ್ಲಿ ನಡೆಯುವ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ 25 ಸಾವಿರಕ್ಕೂ ಅಧಿಕ ಮಂದಿ ಸೇರಲಿದ್ದಾರೆ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

ಗದಗ | ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಎಸ್. ವಿ. ಸಂಕನೂರು

"12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು....

ಶ್ರೀರಂಗಪಟ್ಟಣ | ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ...

Download Eedina App Android / iOS

X