“ಸಿಎಂ ಸಿದ್ದರಾಮಯ್ಯರವರು ಮಂಡಿಸಿರುವ ಮುಂಗಡ ಪತ್ರವು ಚೈತನ್ಯಶೀಲ ಅಭಿವೃದ್ಧಿಪರ ಮತ್ತು ಅರ್ಥವ್ಯವಸ್ಥೆಯನ್ನು ಏರುಗತಿಯಲ್ಲಿ ಕೊಂಡೊಯ್ಯುವ ಮುಂಗಡ ಪತ್ರ ಇದಾಗಿದೆ” ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವಕ್ತಾರ ಸಂಜಯ್ ದೊಡ್ಡಮನಿ ಅವರು ಬಜೆಟ್ ಕುರಿತು ಹೇಳಿದ್ದಾರೆ.
ಗದಗ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಡಿಸಿರುವ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿ ಮಾತನಾಡಿದರು.
“ಅಭಿವೃದ್ಧಿ, ಸಾಮಾಜಿಕ ನ್ಯಾಯ, ಸಮಾನ ಹಂಚಿಕೆ ಮತ್ತು ಪ್ರದೇಶವಾರು ಸಮತೋಲನ ಕಾಯ್ದುಕೊಳ್ಳುವ ಅಭಿವೃದ್ಧಿಶೀಲ ಮುಂಗಡ ಪತ್ರವನ್ನು ಸನ್ಮಾನ್ಯ ಸಿದ್ದರಾಮಯ್ಯರವರು ಮಂಡಿಸಿದ್ದಾರೆ. ಶಿಕ್ಷಣ, ಆರೋಗ್ಯ, ನೀರಾವರಿ, ಸಮಾಜ ಕಲ್ಯಾಣ ಮೂಲಸೌಕರ್ಯ ಅಭಿವೃದ್ಧಿಗೆ ಹಾಗೂ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ. ಪ್ರವಾಸೋದ್ಯಮ ಮೂಲಸೌಕರ್ಯವನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಲಾಗಿದೆ” ಎಂದರು.
“ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಕೃಷಿ, ರೇಷ್ಮೆ ವಲಯಗಳು ಆದ್ಯತಾ ವಲಯಗಳಾಗಿವೆ. ಕರ್ನಾಟಕ ರಾಜ್ಯದ ಮುಂಗಡ ಪತ್ರವು ಬರುವ ವರ್ಷ 5 ಲಕ್ಷ ಕೋಟಿ ದಾಟುವ ನಿರೀಕ್ಷೆಯಿದೆ. ಪ್ರಸ್ತುತ ವರ್ಷವೇ 4 ಲಕ್ಷ ಕೋಟಿಯನ್ನು ಮೀರಿದ ಬಜೆಟ್ ಮಂಡನೆಯಾಗಿದೆ. ಕರ್ನಾಟಕ ಅರ್ಥ ವ್ಯವಸ್ಥೆ ಅಭಿವೃದ್ಧಿಯತ್ತ ದಾಪುಗಾಲನ್ನಿಡುತ್ತಿದೆ. ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮದುವೆ ಖುಷಿಯಲ್ಲಿದ್ದ ಯುವಕನ ಕೊಲೆ
“ವಸತಿ ಅಭಿವೃದ್ಧಿಗೆ ಆದ್ಯ ಗಮನ ನೀಡಲಾಗಿದ್ದು, ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಕಾಲೋನಿಗಳ ಸಮಗ್ರ ಅಭಿವೃದ್ಧಿಯನ್ನು ಮೊಟ್ಟಮೊದಲ ಬಾರಿಗೆ ಪರಿಗಣಿಸಲಾಗಿದೆ. ರೂ.100.00 ಕೋಟಿಗಳ ವೆಚ್ಚ ಇಂತಹ ನಿರ್ಲಕ್ಷಿತ ವರ್ಗಕ್ಕೆ ನೀಡಿರುವುದಕ್ಕೆ ಸಿದ್ದರಾಮಯ್ಯ ರವರನ್ನು ಅಭಿನಂದಿಸುತ್ತೇನೆ” ಎಂದು ಸಂಜೀವ ದೊಡ್ಡಮನಿ ಹೇಳಿದ್ದಾರೆ.
