ಗದಗ | ಸಿ.ಸಿ. ರಸ್ತೆ ಕಳಪೆ ಕಾಮಗಾರಿ: ಎಸ್ ಡಿ ಪಿ ಐ ಆರೋಪ

Date:

“ಇತ್ತೀಚೆಗೆ ನಿರ್ಮಾಣಗೊಂಡಿರುವ ಸಿ.ಸಿ. ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ  ನಡೆದಿರುವ ಬಗ್ಗೆ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಹಣದಲ್ಲಿ ಕೈಗೊಳ್ಳಲಾದ ಈ ಕಾಮಗಾರಿಯು ಕೆಲವು ದಿನಗಳಲ್ಲೇ ಹಾಳಾಗಿವ ಕಾಮಗಾರಿ ಆಗಿದ್ದು, ಕಾಮಗಾರಿ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ” ಎಂದು ಎಸ್.ಡಿ.ಪಿ.ಐ ಮುಖಂಡರು ಮುಖಂಡರು ಆರೋಪಿಸಿದ್ದಾರೆ.

- Advertisement -

ಶಿರಹಟ್ಟಿ ನಗರದ ಕಚೇರಿ ಪ್ಲಾಟ್ ಓಣಿಯ ವಾರ್ಡ್ ನಂ. 11ರಲ್ಲಿ ಸಿ. ಸಿ. ರಸ್ತೆ ಕಳಪೆ ಕಾಮಗಾರಿ ಆಗಿದ್ದು, ಕೂಡಲೇ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕೆಂದು ” ಎಸ್ ಡಿ ಪಿ ಐ ಮುಖಂಡರು ಗದಗ ಪಟ್ಟಣದ ಜಿಲ್ಲಾಡಳಿತದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷರು ಬಿಲಾಲ್ ಗೋಕಾವಿ ಮಾತನಾಡಿ, “ಸ್ಥಳೀಯ ನಿವಾಸಿಗಳ ಪ್ರಕಾರ, ರಸ್ತೆ ನಿರ್ಮಾಣ ವೇಳೆ ಕಡಿಮೆ ಗುಣಮಟ್ಟದ ಸಿಮೆಂಟ್ ಹಾಗೂ ಮರಳು ಬಳಸಲಾಗಿದ್ದು, ಅಳತೆ ಮತ್ತು ತಂತ್ರಜ್ಞಾನ ನಿಯಮಗಳನ್ನು ಪಾಲಿಸದೆ ಕಾಮಗಾರಿ ಮುಗಿಸಲಾಗಿದೆ. “ಜನರ ತೆರಿಗೆ ಹಣ ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಜವಾಬ್ದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಬೇಡಿಕೆ ಇಟ್ಟಿದ್ದಾರೆ” ಎಂದರು.

“ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಕಳಪೆ ಕಾಮಗಾರಿಯ ಕುರಿತು ತನಿಖೆ ನಡೆಸಿ ಗುತ್ತಿಗೆದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ನಾಗರಿಕರು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣ ಕ್ರಮ ಕೈಗೊಳ್ಳುವಂತೆ” ಮುಖಂಡರು ಆಗ್ರಹಿಸಿದರು.

ಮನವಿ ಸಂದರ್ಭದಲ್ಲಿ ಎಸ್ ಡಿ ಪಿ ಐ ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಪ್ರದಾನ ಕಾರ್ಯದರ್ಶಿ ಅಬ್ದುಲ್ ಕಾಗದಗಾರ, ಉಪಾಧ್ಯಕ್ಷರು ಮುಝಮ್ಮಿಲ್ ಮಕಾನ್ದಾರ್, ಮಿನಾಜ ಬಳಿಗೇರ, ದಾದಾಪೀರ ಡಾಲಾಯತ, ಮಾಬುಲಿ ಡಾಲಾಯತ, ರಪೀಕ ಮುಲ್ಲಾ, ಮುಸ್ತಾಕ ಕಾಗದಗಾರ, ಜಮಿರ ನಧಾಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...