ಗದಗ | ಕರ್ನಾಟಕ 50ರ ಸಂಭ್ರಮ; ಮಕ್ಕಳಿಗೆ ಗಾಳಿಪಟ ತಯಾರಿಸಿ-ಹಾರಿಸುವ ಸ್ಪರ್ಧೆ

Date:

ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಮೆಣಸಗಿ ಹಾಗೂ ಹೊಳೆಮಣ್ಣೂರು ಗ್ರಾಮ ಪಂಚಾಯತಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಗೆ ಗಾಳಿಪಟ ತಯಾರಿಸುವ ಹಾಗೂ ಹಾರಿಸುವ ಸ್ಪರ್ಧೆಯನ್ನು ಆಯೋಜಿಸಿತ್ತು. ಸ್ಪರ್ಧೆಯಲ್ಲಿ 500 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು, ಸ್ವತಃ ಗಾಳಿಪಟ ತಯಾರಿಸಿ, ಹಾರಿಸಿ ಸಂಭ್ರಮಿಸಿದ್ದಾರೆ.

ಈ ಎರಡೂ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸಿಬ್ಬಂದಿ ಕೆಂಪು ಮತ್ತು ಹಳದಿ ಬಣ್ಣದ ಹಾಳೆಗಳನ್ನು ಪೂರೈಸಿ, ಮಕ್ಕಳಿಗೆ ಗಾಳಿಪಟ ತಯಾರಿಸುವ ಕುರಿತು ತರಬೇತಿ ನೀಡಿದರು.

ಮಕ್ಕಳು ತಮ್ಮ ಸುತ್ತಮುತ್ತ ಸಿಕ್ಕ ಬಿದಿರು ಹಾಗೂ ತೆಂಗಿನ ಗರಿಗಳ ಕಡ್ಡಿಗಳಿಂದ ಗಾಳಿಪಟಗಳನ್ನು ತಯಾರಿಸಿ, ಸೂತ್ರ ಜೋಡಿಸಿ, ಬಾಲಂಗೋಚಿ ಕಟ್ಟಿ, ಒಬ್ಬರಿಗಿಂತ ಒಬ್ಬರು ಅಂದವಾದ ಗಾಳಿಪಟ ತಯಾರಿಸಿದ್ದರು. ಮಕ್ಕಳು ಗಾಳಿಪಟ ತಯಾರಿಸಿ ಹಾರಿಸುತ್ತಿರುವುದನ್ನು ಕಂಡು ಪೋಷಕರೂ ಸಹ ಮಕ್ಕಳಿಗೆ ಗಾಳಿಪಟ ತಯಾರಿಸುವಲ್ಲಿ ನೆರವಾದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಾಲೆಗಳ ಮುಖ್ಯೋಪಾಧ್ಯಾಯರ  ಉತ್ತಮವಾಗಿ ಗಾಳಿಪಟ ತಯಾರಿಸಿ, ಹಾರಿಸಿದ ವಿದ್ಯಾರ್ಥಿಗಳ ಪೈಕಿ ತರಗತಿವಾರು ಪ್ರಥಮ, ದ್ವಿತೀಯ ಹಾಗೂ ಸಮಾಧಾನಕರ ಬಹುಮಾನಕ್ಕೆ ಮಕ್ಕಳ ಹೆಸರು ಅಂತಿಮಗೊಳಿಸಿದರು.

ಹೊಳೆ ಮಣ್ಣೂರು  ಗ್ರಾಮ ಪಂಚಾಯತಿ ಅಧ್ಯಕ್ಷರಾಗಿರುವ ಸುಜಾತ ಮಠಪತಿ, ಗ್ರಾಮೀಣ ಕ್ರೀಡೆಗಳು ಮಹತ್ವ ಕಳೆದುಕೊಳ್ಳುತ್ತಿರುವ ಈ ದಿನಮಾನಗಳಲ್ಲಿ, ನಮ್ಮ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಮಕ್ಕಳಿಗೆ ಗಾಳಿಪಟ ತಯಾರಿಸುವ ತರಬೇತಿ ನೀಡಿ ಅಗತ್ಯ ಪರಿಕರಗಳನ್ನು ಒದಗಿಸುವ  ಮೂಲಕ ಮಕ್ಕಳು ವಿನೂತನವಾಗಿ ಯೋಚಿಸುವಂತೆ, ಸಂಭ್ರಮಿಸುವಂತೆ ಮಾಡಿರುವುದು ನಮಗೆ ಹೆಮ್ಮೆಯ ವಿಷಯ ಎಂದರು.

ಕರ್ನಾಟಕ 50ರ ಸಂಭ್ರಮದ ನಿಮಿತ್ಯ ನಮ್ಮ ಶಾಲೆಯ ಮಕ್ಕಳು ಗಾಳಿಪಟ ತಯಾರಿಸಿ ಹಾರಿಸಿ ಸಂಭ್ರಮಿಸುತ್ತಿರುವುದು ನಮಗೆ ಖುಷಿ ತಂದಿದೆ ಎಂದು ಮೆಣಸಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಈಶ್ವರಪ್ಪ ಮುದೇನೂರು ಅಭಿಪ್ರಾಯ ಹಂಚಿಕೊಂಡರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀಟ್ ಬೆನ್ನಲ್ಲೇ ನೆಟ್‌ ಅಕ್ರಮ ಆರೋಪ; ನ್ಯಾಯಾಂಗ ತನಿಖೆಗೆ ಎಐಡಿಎಸ್‌ಒ ಆಗ್ರಹ

ನೀಟ್‌ ಅವ್ಯವಹಾರ ನಡೆದ ಬೆನ್ನಲ್ಲೇ, ನೆಟ್‌ ಅವ್ಯವಹಾರವೂ ನಡೆದಿದೆ ಎಂಬ ಆರೋಪಗಳಿವೆ....

ಕಲಬುರಗಿ | ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರಾತಿಗೆ ಒತ್ತಾಯ: ಶಿವಕುಮಾರ್ ಗೋಲಾ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರು...

ಧಾರವಾಡ | ತೈಲ ಬೆಲೆ ವಿಚಾರದಲ್ಲಿ ಹೋರಾಟ ನಡೆಸುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕು: ಸಲೀಂ ಅಹ್ಮದ್

ಪೆಟ್ರೊಲ್ ಬೆಲೆ ಹೆಚ್ಚಳದ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ನಿರಂತವಾಗಿ ಬೆಲೆ...

ಬೀದರ್‌ | ನೀಟ್ ಪರೀಕ್ಷೆ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್‌ಎಸ್‌ಯುಐ ಆಗ್ರಹ

ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರೀ ಅಕ್ರಮ ನಡೆದಿರುವ ಸಾಧ್ಯತೆಯಿದೆ....