ಗದಗ | ಕೇಂದ್ರ ಬರ ಅಧ್ಯಯನ ತಂಡ ವೀಕ್ಷಣೆ; ಸರಿಯಾಗಿ ಬರ ಪರಿಸ್ಥಿತಿ ವಿವರಿಸಲು ಸೂಚನೆ

Date:

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಹೊರತು ಪಡಿಸಿ ಉಳಿದ ಆರು ತಾಲೂಕುಗಳನ್ನು ಈಗಾಗಲೇ ರಾಜ್ಯ ಸರ್ಕಾರ ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಅಕ್ಟೋಬರ 6 ರಂದು ಗದಗ ಜಿಲ್ಲೆಗೆ ನಾಲ್ಕು ಸದಸ್ಯರನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಲಿದ್ದು, ಅವರಿಗೆ ಜಿಲ್ಲೆಯ ಬರ ಪರಿಸ್ಥತಿಯ ಕುರಿತು ಸರಿಯಾಗಿ ಮಾಹಿತಿ ಒದಗಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚಿಸಿದರು.

- Advertisement -

ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

“ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರಿಗೆ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮನವರಿಕೆ ಆಗುವಂತೆ ಸಂಬಂಧಿತ ಇಲಾಖೆ ಅಧಿಕಾರಿಗಳು ಸರಿಯಾಗಿ ವಿವರಣೆ ನೀಡಬೇಕು. ಯಾವುದೇ ಕಾರಣಕ್ಕೂ ಬರ ಅಧ್ಯಯನ ತಂಡದ ಸದಸ್ಯರು ಬಂದು ಹೋಗುವವರೆಗೆ ಶಿಷ್ಠಾಚಾರ ವ್ಯವಸ್ಥೆಯಲ್ಲಿ ಅವ್ಯವಸ್ಥೆ ಆಗದಂತೆ ನಿಗಾವಹಿಸಬೇಕು” ಎಂದು ನಿರ್ದೇಶನ ನೀಡಿದರು.

“ಜಿಲ್ಲೆಯ ಬರಪೀಡಿತ ತಾಲೂಕುಗಳ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡವು ಶುಕ್ರವಾರ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ತಂಡದ ಮುಖ್ಯಸ್ಥರಾಗಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಹೆಚ್ಚುವರಿ ಸಲಹೆಗಾರ ಡಿ.ರಾಜಶೇಖರ, ಸದಸ್ಯರುಗಳಾದ ಕೇಂದ್ರ ಪಶುಸಂಗೋಪನಾ ಇಲಾಖೆ ನಿರ್ದೇಶಕ ವಿ ಆರ್ ಠಾಕ್ರೆ, ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತ ಮೋತಿ ರಾಮ ಹಾಗೂ ಕಂದಾಯ ಇಲಾಖೆಯ ರಾಜ್ಯ ವಿಪತ್ತು ನಿರ್ವಹಣೆಯ ನಿರ್ದೇಶಕ ಕರೀಗೌಡ ಅವರುಗಳ ನಾಲ್ಕು ಜನರ ಅಧ್ಯಯನ ತಂಡವು ಜಿಲ್ಲೆಗೆ ಭೇಟಿ ನೀಡಲಿದೆ” ಎಂದರು.

“ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ನೈರುತ್ಯ ಮುಂಗಾರು ಮಳೆಯು ವಾಡಿಕೆ ಮಳೆ 372 ಮೀಮೀ ಆಗಬೇಕಿತ್ತು. ಆದರೆ ವಾಡಿಕೆ ಮಳೆ ಆಗದೇ ಇರುವದರಿಂದ ಬರಗಾಲ ಆವರಿಸಿದೆ. ಜಿಲ್ಲೆಯಲ್ಲಿ ಜೂನ್ ಮಾಹೆಯಲ್ಲಿ ಶೇ.54 ರಷ್ಟು ಹಾಗೂ ಅಗಸ್ಟ್‌ನಲ್ಲಿ ಶೇ.62 ರಷ್ಟು ಮಳೆ ಕೊರತೆಯಾಗಿದ್ದು ಬರಗಾಲ ಸಂಪೂರ್ಣವಾಗಿ ಆವರಿಸುವಂತಾಗಿದೆ. ಅಧಿಕಾರಿಗಳು ಕೇಂದ್ರ ಬರ ಅಧ್ಯಯನ ಅಧಿಕಾರಿಳಿಗೆ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ನಿಖರವಾದ ಅಂಕಿ ಸಂಖ್ಯೆಗಳನ್ನು ದಾಖಲೆಗಳೊಂದಿಗೆ ವಸ್ತು ಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಬೇಕು” ಎಂದು ತಿಳಿಸಿದರು.

ಬರ ಅಧ್ಯಯನ ತಂಡಕ್ಕೆ ಜಿಲ್ಲೆಯ ಕುಡಿಯುವ ನೀರಿನ ನಿರ್ವಹಣೆ, ಮೇವಿನ ಅಗತ್ಯತೆ, ಅಂತರ್ಜಲ ಮಟ್ಟ ಕುಸಿತದ ವಿವರ, ಬೆಳೆ ಹಾನಿ ವಿವರವನ್ನು ಅಂಕಿ ಸಂಖ್ಯೆ ಸಮೇತ ವಿವರಿಸುವ ಕುರಿತಂತೆ ಸಭೆಯಲ್ಲಿ ಚರ್ಚಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ; 1.30 ಕೋಟಿ ರೂ. ಪರಿಹಾರ

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ಪಂಚಾಯತ ರಾಜ್‌ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಶಿವಾನಂದ ಗೌಡರ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಹುಲಗನ್ನವರ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಮಿತ ಬಿದರಿ, ಆಹಾರ ಇಲಾಖೆ ಉಪನಿರ್ದೇಶಕ ಗಂಗಪ್ಪ.ಎಂ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ...

ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ...

ರಾಯಚೂರು | ಕಸದ ರಾಶಿಯಲ್ಲಿ ಆರೋಗ್ಯ ಇಲಾಖೆಯ ಔಷಧಿಗಳು ಪತ್ತೆ

ನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕೋಟೆಯ ಕಂದಕದ ಬಳಿ ಆರೋಗ್ಯ ಇಲಾಖೆಗೆ...

ಹಾವೇರಿ | ರೈತರ ಪ್ರತಿಭಟನೆ ಅಂತ್ಯ: ಬಂದ್ ಆಗಿದ್ದ ವಾಹನಗಳ ಸಂಚಾರ ಪುನಃ ಆರಂಭ

ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ...