ಗದಗ | ಕೇಂದ್ರ ಬರ ಅಧ್ಯಯನ ತಂಡ ಭೇಟಿ; ರೈತರಿಂದ ಮಾಹಿತಿ

Date:

Advertisements

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ರೈತರ ಜಮೀನುಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ವೀಕ್ಷಣೆ ಕೈಗೊಂಡು ರೈತರೊಂದಿಗೆ ಚರ್ಚೆ ನಡೆಸಿತು.

ದೊಡ್ಡೂರು ಗ್ರಾಮಕ್ಕೆ ಬೆಳಿಗ್ಗೆ 10-30ಕ್ಕೆ ಆಗಮಿಸಿದ ತಂಡ ಗ್ರಾಮದ ರೈತ ಟೋಪಣ್ಣ ಲಮಾಣಿ ಅವರ ಜಮೀನಿಗೆ ಭೇಟಿ ಶೇಂಗಾ ಬೆಳೆಯನ್ನು ವೀಕ್ಷಿಸಿ, ಒಂದು ಎಕರೆಗೆ ಎಷ್ಟು ಇಳುವರಿ ಬರುತ್ತದೆ. ಎಷ್ಟು ಹಣ ಖರ್ಚು ಮಾಡುತ್ತೀರಿ, ಎಷ್ಟು ವರ್ಷಗಳಿಂದ ಬರಗಾಲವಿದೆ, ನಮ್ಮಿಂದ ಏನು ಸಹಾಯ ಬೇಕು ಇತ್ಯಾದಿ ಪ್ರಶ್ನೆಗಳನ್ನು ಕೇಳಿದಾಗ, ರೈತ “1214 ಕ್ವಿಂಟಲ್‌ ಬೆಳೆಯಲು ಅಂದಾಜು ₹28,000 ಖರ್ಚಾಗುತ್ತದೆ. 10ರಿಂದ 15 ವರ್ಷಗಳಿಂದಲೂ ಬರಗಾಲವಿದೆ. ಈಗಲಾದರೂ ಬೆಳೆವಿಮೆ ಮಾಡಿಸಿಕೊಡಬೇಕು” ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಕೇಂದ್ರ ಬರ ಅಧ್ಯಯನ ತಂಡ ಪ್ರಶ್ನೆಗಳನ್ನು ಕೇಳುವುದರ ಮೂಲಕ ರೈತರಿಂದ ಮಾಹಿತಿ ಪಡೆಯಿತು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಸೋಲಾರ್ ಪಾರ್ಕ್ ಎರಡನೇ ಹಂತದ ವಿಸ್ತರಣೆ ಕಾರ್ಯ ಚುರುಕು

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ ಎಲ್‌ ವೈಶಾಲಿ, ಲಕ್ಷ್ಮೇಶ್ವರ ತಾಲೂಕು ದಂಡಾಧಿಕಾರಿ ಆನಂದ, ಕೃಷಿ ಇಲಾಖೆ ಅಧಿಕಾರಿಗಳದ ಚಂದ್ರಶೇಖರ, ನರಸಿಂಹ, ಗ್ರಾಮ ಲೆಕ್ಕಾಧಿಕಾರಿ ಸುಷ್ಮಾ ಹವಳದ, ಮಾಂತೇಶ ಉಮಚಗಿ, ದೊಡ್ಡೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಪ್ಪ ತೋಟದ, ಮಾಜಿ ಉಪಾಧ್ಯಕ್ಷ ಚಂದ್ರಶೇಖರ ಇ ಹಾಗೂ ಹಾಲಿ ಸದಸ್ಯರುಗಳಾದ ಚಂದ್ರಶೇಖರ ಈಳಿಗೇರ, ನಾನಪ್ಪ ಲಮಾಣಿ, ನಿಂಗಪ್ಪ ಬಂಕಾಪೂರ, ಊರಿನ ಹಿರಿಯರುಗಳಾದ ಎನ್ ಎಚ್ ಹಡಪದ, ದೇವಪ್ಪ ತೋಟದ, ಶಿವಣ್ಣ ಹೆಸರೂರ, ನಾಗರಾಜ ಹರವಿರವರು, ಗುಡ್ಡಪ್ಪ ಹಡಪದ, ರವಿ ಭಜಕ್ಕನವರ, ಗುರುರಾಜ ಬಾಗಲದ ಸೇರಿದಂತೆ ಇತರರು ಇದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X