ಗದಗ | ಶಿರಹಟ್ಟಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸಿಇಓ ಭರತ್ ಎಸ್ ಭೇಟಿ

Date:

“ಕಳೆದ ಮೂರು-ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಬಿಡುವಿಲ್ಲದ ಸಂಚಾರ ನಡೆಸಿರುವ ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್ ಸರ್ಕಾರದ ವಿವಿಧ ಕಾಮಗಾರಿಗಳು, ಯೋಜನೆಗಳ ಅನುಷ್ಟಾನ ಹಾಗೂ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಶಿರಹಟ್ಟಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಸಿಇಓ ಭರತ್ ಎಸ್ ಭೇಟಿ ನೀಡಿ ಪರಿಶೀಲನೆ ನೆಡೆಸಿದರು.

- Advertisement -

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ಮಜ್ಜುರ ಹಾಗೂ ಮಾಚೇನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಲ ಜೀವನ್‌ ಮಿಷನ್‌ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿ ನೆಡೆಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಹಿನ್ನೆಲೆಯಲ್ಲಿ ಮಜ್ಜುರ, ಶಿವಾಜಿ ತಾಂಡಾ,  ಮಾಚೇನಹಳ್ಳಿ, ತೆಗ್ಗಿನ ಭಾವನೂರ, ನವೆಭಾವನೂರ ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಜೆಜೆಎಂ ಕಾಮಗಾರಿಗಳು, ಸಂಪರ್ಕಗಳ ಗುಣಮಟ್ಟ, ಮೀಟರ್‌ ಅಳವಡಿಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಕಾರ್ಯ ನಿರ್ವಹಣೆ ಕುರಿತು ವಿವರವಾದ ಪರಿಶೀಲನೆ ನಡೆಸಿದರು. ಇದೆ ಸಂದರ್ಭದಲ್ಲಿ ಮನೆ ಮನೆಗಳಿಗೆ ಅಳವಡಿಸಲಾಗಿರುವ ನಳಗಳ ಸಂರ್ಪಕ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚೆ ಮಾಡಿದರು.

ಗ್ರಾಮಗಳ ಭೇಟಿ ವೇಳೆ , “ಗುಣಮಟ್ಟದ ಕಾಮಗಾರಿ ಕೈಗೊಳ್ಳುವಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜವಾಬ್ದಾರಿ ಎಷ್ಟಿದೆಯೋ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವುದು, ಸದುಪಯೋಗ ಪಡೆದುಕೊಳ್ಳುವ ಜವಾಬ್ದಾರಿ ಸಾರ್ವಜನಿಕರ ಮೇಲೂ ಇದೆ. ಹೀಗಾಗಿ ಸಾರ್ವಜನಿಕರು ಸರ್ಕಾರದ ಭಾಗವಾಗಿ ಜವಾಬ್ದಾರಿಗಳನ್ನು ನಿಭಾಯಿಸಬೇಕು ಕಾಮಗಾರಿಗಳು ಗುಣನುಟ್ಟದಿಂದ ಆಗುವಂತೆ ನೋಡಿಕೊಳ್ಳಬೇಕಲ್ಲದೇ ಪೂರ್ಣಗೊಂಡಿರುವ ಕಾಮಗಾರಿಗಳಿಂದ ಸದುಪಯೋಗ ಪಡೆದುಕೊಳ್ಳಬೇಕು” ಎಂದರು.

ಈ ವೇಳೆಯಲ್ಲಿ ಶಿರಹಟ್ಟಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ರಾಘವೇಂದ್ರ ದೊಡ್ಡಮನಿ, ಸಹಾಯಕ ಎಂಜಿನಿಯರ್‌ ಮಲ್ಲಿಕಾರ್ಜುನ ಪಾಟೀಲ, ವಿಭಾಗೀಯ ಅಧಿಕಾರಿ ಮುನ್ನಿ ಹರಕುನಿ, ಗ್ರಾಮ ಪಂಚಾಯತ್‌ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...