ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಗದಗ ಜಿಲ್ಲೆಯಲ್ಲಿ ಅಕ್ರಮ ನಗದು, ಸಾಮಗ್ರಿ ತಡೆಗಾಗಿ ಜಿಲ್ಲಾಡಳಿತ ಜಿಲ್ಲೆಯಲ್ಲಿ 12 ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದು ಪ್ರತಿದಿನ ನಿರಂತರವಾಗಿ ವಾಹನಗಳ ತಪಾಸಣೆ ನಡೆಸುತ್ತಿದೆ.
ಮಂಗಳವಾರ ರೋಣ ತಾಲೂಕಿನ ಹಿರೇಹಾಳ ಚೆಕ್‌ಪೋಸ್ಟ್‌ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದರು.
ಚೆಕ್ ಪೋಸ್ಟ್‌ನಲ್ಲಿ ನಡೆಸಲಾಗುವ ತಪಾಸಣೆ ಕುರಿತು ಮಾಹಿತಿ ಪಡೆದ ಅವರು, “ದಾಖಲೆಗಳಿಲ್ಲದೆ ನಗದು, ಸಾಮಗ್ರಿ, ಚಿನ್ನಾಭರಣ, ಮಧ್ಯ ಮತ್ತು ವಾಣಿಜ್ಯ ಸರಕುಗಳನ್ನು ವಾಹನಗಳು ಸಾಗಾಟ ಮಾಡುವುದನ್ನು ಪರಿಶೀಲಿಸಬೇಕು. ದಾಖಲೆ ರಹಿತ ಸಾಮಗ್ರಿಗಳು, ನಗದು ದೊರೆತರೆ ನಿಯಮಾನುಸಾರ ಪ್ರಕರಣ ದಾಖಲಿಸಬೇಕು” ಎಂದು ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಸಿಬ್ಬಂದಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ: ಸಚಿವ ಕೆ.ಎನ್ ರಾಜಣ್ಣ
ರೋಣ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಎ ಎನ್, ಸಹಾಯಕ ನಿರ್ದೇಶಕ ರಿಯಾಜ಼್ ಖತೀಬ್, ಎಡಿಪಿಸಿ ಕಿರಣಕುಮಾರ ಸೇರಿದಂತೆ ಚೆಕ್ ಪೋಸ್ಟ್ ಅಧಿಕಾರಿಗಳು ಸಿಬ್ಬಂದಿ ಇದ್ದರು.
