ಪೌರಕಾರ್ಮಿಕರಿಗೆ ವಾಸ ಯೋಗ್ಯ ವಸತಿ ಸೌಲಭ್ಯ ಕಲ್ಪಿಸುವ ʼಪೌರಕಾರ್ಮಿಕ ಗೃಹಭಾಗ್ಯ ಯೋಜನೆ’ಯಡಿ ಮನೆಗಳನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಾದಿಮನಿ ಒತ್ತಾಯಿಸಿದರು.
ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಅವರು ನಗರಕ್ಕೆ ಆಗಮಿಸಿದ್ದ ವೇಳೆ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಕಾರ್ಯಕರ್ತರು ಮನವಿ ಸಲ್ಲಿಸಿ ಮಾತನಾಡಿದರು.
“ಗದಗ ಬೆಟಗೇರಿ ನಗರಸಭೆಯಲ್ಲಿ ಪೌರಕಾರ್ಮಿಕರು ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಕೆಲವು ಕಾರ್ಮಿಕರು ಅನಾರೋಗ್ಯ ದಿಂದ ಬಳಲುತ್ತಿದ್ದರೆ, ಕೆಲವರು ನಿವೃತ್ತಿ ಹೊಂದಿದ್ದಾರೆ. ಇವರಿಗೆ ನಿವೇಶನ ಹಾಗೂ ಮನೆಗಳಿರುವುದಿಲ್ಲ. ಸರ್ಕಾರದ ಯಾವುದೇ ಸೌಲಭ್ಯಗಳನ್ನೂ ಪಡೆದಿಲ್ಲ” ಎಂದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ
“ಗದಗ-ಬೇಟಗೇರಿ ನಗರಸಭೆ ಅಥವಾ ಜಿಲ್ಲಾಡಳಿತದಿಂದ “ಪೌರಕಾರ್ಮಿಕರ ಗೃಹಭಾಗ್ಯ ಯೋಜನೆ” ಅನುಷ್ಠಾನ ವಿಳಂಭವಾಗುತ್ತಿದ್ದು, ಇದರಿಂದ ಪೌರಕಾರ್ಮಿಕರು ವಸತಿ ವಂಚಿತರಾಗಿದ್ದಾರೆ. ಈ ಬಡ ಕುಟುಂಬದ ಪೌರಕಾರ್ಮಿಕರಿಗೆ ವಾಸ ಯೋಗ್ಯ ವಸತಿ ಸೌಲಭ್ಯ ಕಲ್ಪಿಸಬೇಕು” ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪೌರಕಾರ್ಮಿಕರು ಇದ್ದರು.