ಗದಗ | ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು: ಸಚಿವ ಡಾ.ಶರಣಪ್ರಕಾಶ ಪಾಟೀಲ

Date:

Advertisements

ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು. ಆಸ್ಪತ್ರೆಗೆ ನಿಯೋಜನೆಗೊಂಡ ವೈದ್ಯರು ಸಮಯಕ್ಕೆ ಸರಿಯಾಗಿ ಹಾಜರಾಗಿ ಚಿಕಿತ್ಸೆಗೆ ದಾಖಲಾಗುವ ಮಹಿಳೆಯರು ಮತ್ತು ಮಕ್ಕಳಿಗೆ ಉತ್ತಮ ಚಿಕಿತ್ಸೆ ಒದಗಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೂಚಿಸಿದರು.

ಗದಗ ಜಿಲ್ಲಾ ಆಸ್ಪತ್ರೆ ಹಾಗೂ ನಗರದ ದುಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು.

ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿನ ಒಳರೋಗಿಗಳ ಹಲವು ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, “ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳ ಬಗ್ಗೆ ಅಸಡ್ಡೆ ಭಾವನೆ ತೋರದೆ ಉತ್ತಮ ಚಿಕಿತ್ಸೆ ನೀಡಲು ಪ್ರತಿಯೊಬ್ಬ ವೈದ್ಯರೂ ಮುಂದಾಗಬೇಕು. ಆಸ್ಪತ್ರೆಗೆ ಆಗಮಿಸುವ ರೋಗಿಗಳನ್ನು ವಿನಾಕಾರಣ ಅಲೆದಾಡಿಸುವ ಕಾರ್ಯ ಮಾಡದೆ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಗುಣಮಟ್ಟದ ಚಿಕಿತ್ಸೆಗೆ ಆದ್ಯತೆ ನೀಡಬೇಕು” ಎಂದು ತಿಳಿಸಿದರು.

Advertisements

“450 ಹಾಸಿಗೆಗಳ ಹೊಸ ಕಟ್ಟಡ ಉತ್ತಮವಾಗಿ ನಿರ್ಮಾಣವಾಗಿದ್ದು, ರೋಗಿಗಳಿಗೆ ಪೂರ್ಣ ಪ್ರಮಾಣದ ಚಿಕಿತ್ಸೆಯನ್ನು ಇಲ್ಲಿಯೇ ದೊರಕಿಸಬೇಕು. ಅದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ಒದಗಿಸಲಾಗುವದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? 100 ದಿನಗಳ ಆಡಳಿತದಲ್ಲಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

“ಕಟ್ಟಡ ನಿರ್ವಹಣೆ ಉತ್ತಮ ರೀತಿಯಲ್ಲಿ ಆಗಬೇಕೆಂಬ ನೀರಿಕ್ಷೆ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಆಡಳಿತ ವೈದ್ಯಾಧಿಕಾರಿಗಳು ಗಮನಹರಿಸಬೇಕು” ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಜಿಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಕರಿಗೌಡರ, ಜಿಮ್ಸ್ ಹಣಕಾಸು ಅಧಿಕಾರಿ ಜೆ ಸಿ ಪ್ರಶಾಂತ, ಮಾಜಿ ಶಾಸಕ ಡಿ ಆರ್ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರಣ್ಣ ಬಳಗಾನೂರ ಸೇರಿದಂತೆ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು ಹಾಗೂ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X