ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗದಗ ಜಿಲ್ಲಾ ಪ್ರವಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಬೆಳಿಗ್ಗೆ 11.30 ಗಂಟೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಹೊರಟು ಶಿರಗುಪ್ಪಿ, ಅಣ್ಣಿಗೇರಿ, ಹುಲಕೋಟಿ ಮಾರ್ಗವಾಗಿ ಮಧ್ಯಾಹ್ನ 12.15 ಗಂಟೆಗೆ ಗದುಗಿಗೆ ಆಗಮಿಸಿ, ಜವಳಗಲ್ಲಿಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಘಟಕ ವೀಕ್ಷಣೆ ಮಾಡುವರು. ನಂತರ 12.35 ಗಂಟೆಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿನ ಕಮಾಂಡ ಸೆಂಟರ್ ಗೆ ಭೇಟಿ ನೀಡುವರು.
ನಂತರ ಮಧ್ಯಾಹ್ನ 1 ಗಂಟೆಗೆ ಗದಗನ ಮುಳಗುಂದ ರಸ್ತೆಯಲ್ಲಿನ ಕನಕ ಭವನ ಶ್ರೀ ರಾಕೇಶ ಸಿದ್ದರಾಮಯ್ಯ ಸಭಾಂಗಣದಲ್ಲಿ ಗದಗ ತಾಲೂಕು ಕುರುಬರ ಸಂಘ (ರಿ) ಗದಗ ವತಿಯಿಂದ ಆಯೋಜಿಸಿರುವ “ ತಾಲೂಕು ಸಂಘದ ರಜತ ಮಹೋತ್ಸವ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ “ ರಾಜ್ಯ ಮಟ್ಟದ ಕನಕೋತ್ಸವ ಹಾಗೂ ಸಂಘ ಜೀವಿ ಶ್ರೀ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 3.30 ಗಂಟೆಗೆ ಗದಗನಿಂದ ರಸ್ತೆ ಮೂಲಕ ಹುಲಕೋಟಿ, ಅಣ್ಣಿಗೇರಿ, ಸಿರಗುಪ್ಪಿ ಮಾರ್ಗವಾಗಿ ಹುಬ್ಬಳ್ಳಿಗೆ ಪ್ರಯಾಣಿಸಿ, ನಂತರ ಬೆಂಗಳೂರಿಗೆ ಹೊರಡುವರು ಎಂದು ಪ್ರಕಟಣೆ ತಿಳಿಸಿದೆ.