ಗದಗ | ಪೊಲೀಸರಿಂದಲೇ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ಪಿಎಸ್‌ಐ, ಕಾನ್ಸ್‌ಟೇಬಲ್ ಅಮಾನತು

Date:

ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಒಬ್ಬ ಕಾನ್ಸ್‌ಟೇಬಲ್‌ನನ್ನು ಅಮಾನತು ಮಾಡಲಾಗಿದೆ.

- Advertisement -

ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದು ಪಿಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಕಾಲ್‌ ಮಾಡುವುದು, ಅಶ್ಲೀಲವಾಗಿ ಮೆಸೇಜ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಆರೋಪಿ ಪೊಲೀಸ್‌ ಅಧಿಕಾರಿಗಳನ್ನು ಗದಗ ಎಸ್‌ಪಿ ಬಿ.ಎಸ್.ನೇಮಗೌಡ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಠಾಣೆಯ ಪಿಎಸ್‌ಐ ನಿಖಿಲ್ ಕಾಂಬ್ಳೆ ಮತ್ತು ಕಾನ್ಸ್‌ಟೇಬಲ್ ಶಂಕರ್ ನಾಲಕರ್ ಅಮಾನತುಗೊಂಡಿದ್ದಾರೆ. ಪಿಎಸ್‌ಐ ಮತ್ತು ಕಾನ್ಸ್‌ಟೇಬಲ್ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಆರೋಪ ಸಾಬೀತಾದರೆ, ಇಬ್ಬರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ ಎಂಧು ಎಸ್‌ಪಿ ನೇಮಗೌಡ ತಿಳಿಸಿದ್ದಾರೆ.

ಆದರೆ, ತಾವು ವಿದ್ಯಾರ್ಥಿನಿಗೆ ಕಿರುಕುಳ ನೀಡಿಲ್ಲವೆಂದು ಪಿಎಸ್‌ಐ ವಾದಿಸಿದ್ದಾರೆ. ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿದ್ದಾರೆ. “ನಾವು ವಿದ್ಯಾರ್ಥಿನಿಗೆ ಕರೆ ಮಾಡಿಲ್ಲ. ಮೆಸೇಜ್ ಮಾಡಿಲ್ಲ. ನಮ್ಮ ವಿರುದ್ಧ ಆರೋಪ ಯಾಕೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ವಿದ್ಯಾರ್ಥಿನಿಯ ಆರೋಪ ಸುಳ್ಳು” ಎಂದು ಪಿಎಸ್‌ಐ ನಿಖಿಲ್ ಕಾಂಬ್ಲೆ ಹೇಳಿದ್ದಾರೆ.

ನರೇಗಲ್‌ನ ವಿದ್ಯಾರ್ಥಿನಿ ಹುಬ್ಬಳ್ಳಿಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆ ನರೇಗಲ್‌ನಿಂದ ಹುಬ್ಬಳ್ಳಿಗೆ ಬಸ್‌ನಲ್ಲಿ ತೆರಳುತ್ತಿದ್ದರು. ಪೊಲೀಸ್‌ ಠಾಣೆಯ ಬಳಿ ಇರುವ ಬಸ್‌ ನಿಲ್ದಾಣದಲ್ಲಿ ದಿನನಿತ್ಯ ಆಕೆ ಬಸ್‌ ಹತ್ತುತ್ತಿದ್ದರು. ಈ ವೇಳೆ, “ಪಿಎಸ್‌ಐ ತನ್ನನ್ನು ಚುಡಾಯಿಸುತ್ತಿದ್ದರು. ತನ್ನ ಗೆಳತಿಯಿಂದ ನನ್ನ ಮೊಬೈಲ್ ನಂಬರ್ ಪಡೆದು, ಕಾಲ್‌ ಮಾಡುತ್ತಿದ್ದರು. ಕಾನ್ಸ್‌ಟೇಬಲ್‌ ಅಶ್ಲೀಲವಾಗಿ ಮೆಸೇಜ್ ಮಾಡುತ್ತಿದ್ದರು” ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...