ಗದಗ | ಅಭಿವೃದ್ಧಿಗೆ ಮಾರಕವಾದ ಕೋಮುವಾದಿ ಆಡಳಿತ ಮುಕ್ತಗೊಳಿಸಿಬೇಕಿದೆ: ಎಸ್ ಸುಂದರೇಶ

Date:

“ಜಾತ್ಯಾತೀತ ಪ್ರಜಾಸತ್ತಾತ್ಮಕ ಭಾರತ ಇಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿದೆ. ಬಹುಸಂಖ್ಯಾತ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮಾರಕವಾದ ಕೋಮುವಾದಿ ಆಡಳಿತ ಮುಕ್ತಗೊಳಿಸಿಬೇಕಿದೆ” ಎಂದು ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಎಸ್ ಸುಂದರೇಶ ಹೇಳಿದರು. 

- Advertisement -

ಗದಗ ನಗರದ ಗಾಂಧಿ ವೃತ್ತದಲ್ಲಿ ಸಮತಾ ರಾಜ್ಯದ ಕನಸುಗಳೊಂದಿಗೆ ಶ್ರಮ ಶಕ್ತಿಯ ಸಂಘರ್ಷದ ಶತಮಾನದ ಪಯಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಭಾರತದ ಸಂವಿಧಾನಕ್ಕೆ ಪೂರಕವಾದ ಪ್ರಜಾಪ್ರಭುತ್ವ ಆಡಳಿತವನ್ನು ಪುನರ್‌ ಸ್ಥಾಪಿಸಲು ಜಾತ್ಯಾತೀತ ಶಕ್ತಿಗಳು ಇಂದು ಒಂದಾಗುವ ಕಾಲ ಸನ್ನಿತವಾಗಿದೆ. ದೇಶದ ಬಹುಸಂಖ್ಯಾತರ ಅಭಿವೃದ್ಧಿಗೆ ಮಾರಕವಾದ ಕೋಮುವಾದಿ ಸರಕಾರವನ್ನು ಕಿತ್ತೊಗೆಯಲು ನಾವೆಲ್ಲರೂ ಮತ್ತೊಮ್ಮೆ ೧೯೪೭ರ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು” ಎಂದು ಕರೆ ನೀಡಿದರು.

“ರಾಜ್ಯಾದ್ಯಂತ ಸಿಪಿಐ ಶತಮಾನೋತ್ಸವ ಜಾಥಾ ಸಂಚರಿಸುತ್ತಿದ್ದು ಇದೇ ತಿಂಗಳ ೨೩ಕ್ಕೆ ಜಾಥಾ ಬೆಂಗಳೂರನಲ್ಲಿ ಮುಕ್ತಾಯಗೊಳ್ಳಲಿದೆ. ರಾಜ್ಯಾದ್ಯಂತ ಜಾತ್ಯಾತೀತ, ಹಿಂದುಳಿದ, ಅಲ್ಪಸಂಖ್ಯಾತ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಸೇರಿ ಕೋಮುವಾದ ಹಿಮ್ಮೆಟ್ಟಿಸುವ ಶಪಥ ಮಾಡಿದ್ದಾರೆ” ಎಂದು ತಿಳಿಸಿದರು.

“ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ದಲಿತ ಮುಖಂಡರು ವೆಂಕಟೇಶಯ್ಯ ಮಾತನಾಡಿ, “ಆರ್.ಎಸ್.ಎಸ್. ಹುನ್ನಾರದ ವಿರುದ್ಧ ನಾವೆಲ್ಲ ಹೋರಾಡೋಣ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಲಿತ ಮುಖಂಡರು ಸತೀಶ ಹುಲಿ, ರಮೇಶ ಬಾಳಮ್ಮನವರ, ನಾರಾಯಣಸ್ವಾಮಿ, ಎಐಸಿಯುಟಿ ನವಲೂರ, ಸಿಪಿಐನ ಷಣ್ಮುಖಸ್ವಾಮಿ, ಸತೀಶ ಪಾಸಿ, ವಾಸುದೇವ ಹುಣಸಿಮರದ, ಬಸವರಾಜ ಪೂಜಾರ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ದಲಿತ ಕಲಾಮಂಡಳಿ ಹಾಗೂ ಸಿಪಿಐ ಕಲಾ ತಂಡದಿಂದ ಕ್ರಾಂತಿ ಗೀತೆ ಹಾಡುವ ಮೂಲಕ ಸಾರ್ವಜನಿಕರಿಗೆ ಕೋಮುವಾದಿಗಳ ಬಂಡವಾಳ ಏನೆಂದು ತಿಳಿಸಲಾಯಿತು.ಪ್ರಾರಂಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಪ್ರತಿಮೆಗೆ ಹೂವಿನ ಅರ್ಪನೆ ಮಾಡಲಾಯಿತು. ನಂತರ ಹಿರಿಯ ಸಾಹಿತಿ ಬಿ. ಬಾಬು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....