ಗದಗ | ಕಾಮಗಾರಿ ನಾಮ ಫಲಕದಲ್ಲಿ ಸಂಪೂರ್ಣ ಮಾಹಿತಿ ದಾಖಲಿಸಬೇಕು: ಜಿ.ಪಂ ಸಿಇಒ

Date:

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (ಮನರೇಗಾ) ಕೈಗೊಳ್ಳುವ ಎಲ್ಲ ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ನಾಮ ಫಲಕದಲ್ಲಿ ಅಳವಡಿಸಬೇಕು. ಆ ಮೂಲಕ ಜನರಿಗೆ ಮಾಹಿತಿ ದೊರಕುವಂತೆ ಮಾಡುವುದು ಗ್ರಾಮ ಪಂಚಾಯತಿ ಹಂತದ ಸಿಬ್ಬಂದಿಗಳ ಕರ್ತವ್ಯ ಎಂದು ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ. ಸುಶೀಲಾ ಬಿ ಹೇಳಿದರು.

- Advertisement -

ರೋಣ ತಾಲೂಕಿನ ಮಲ್ಲಾಪುರ, ಮಾರನಬಸರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕೈಗೊಂಡ ರಸ್ತೆ ಕಾಮಗಾರಿ, ಸಿಸಿ ರಸ್ತೆಗಳ ಕಾಮಗಾರಿಗಳನ್ನು ಅವರು ಪರಿಶೀಲಿಸಿದರು. “ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ನಾಮಫಲಕದಲ್ಲಿ ಅಳವಡಿಸಿ, ಜನರಿಗೆ ಮಾಹಿತಿ ದೊರಕುವಂತೆ ಮಾಡುವುದು ಸಿಬ್ಬಂಗಿಳ ಕರ್ತವ್ಯ. ಯಾವುದೇ ರೀತಿಯಲ್ಲಿ ಅಪೂರ್ಣ ಮಾಹಿತಿ ಇದ್ದಲ್ಲಿ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

“ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಹೆಚ್ಚು ಆಸ್ತಿ ಸೃಜನೆ ಮಾಡುವ ಮೂಲಕ ಅವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗ (ಪಿಡಿಒ) ಕೆಲಸ ಮಾಡಬೇಕು. ಪಂಚಾಯತಿ ನಿರ್ಮಾಣ ಮಾಡುವ ಸಿಸಿ ರಸ್ತೆಗಳು ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದಲ್ಲಿ ಯಾವುದೇ ರೀತಿಯ ಲೋಪ ಆಗದಂತೆನಿಗಾವಹಿಸುವ ಮೂಲಕ ಕಾಮಗಾರಿ ಲಾಭ ಜನ ಸಾಮಾನ್ಯರಿಗೆ ತಲುಪಿಸಬೇಕು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಇಓ ಆಪ್ತ ಸಹಾಯಕ ಬಿ.ಎಸ್ ಕಪರದ, ಪಿಡಿಒ ಅಧಿಕಾರಿ ಲೋಹಿತ ಎಮ್.ಎಸ್, ಸಂಕನೂರ, ತಾಂತ್ರಿಕ ಸಹಾಯಕ ಪ್ರವೀಣ ಸೂಡಿ, ಐಇಸಿ ಮಂಜುನಾಥ, ತಾಂತ್ರಿಕ ಇಂಜಿನಿಯರ ಲಿಂಗರಾಜಗೌಡ ಮುದಿಗೌಡ್ರ, ಅಜಯ ಅಬ್ಬಿಗೇರಿ, ಬಿಎಫ್‌ಟಿ ಈರಣ್ಣ ಬೇಲೆರಿ, ಶಿವು ಯಲಿಗಾರ. ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ...