ಗದಗ | ಜಿ.ಎಸ್ ಪಾಟೀಲ್‌ಗೆ ಮಂತ್ರಿಗಿರಿ ನೀಡದಿದ್ದರೆ ಸಾಮೂಹಿಕ ರಾಜೀನಾಮೆ

Date:

ವಿಧಾನಸಭೆ ಚುನಾವಣೆಗೆ ಬಳಿಕ ಕಾಂಗ್ರೆಸ್‌ ತಲೆನೋವಿನ ಭಾರ ಹೆಚ್ಚುತ್ತಿದೆ. ಸವಾಲಾಗಿದ್ದ ಮುಖ್ಯಮಂತ್ರಿ ಯಾರೆಂಬ ಪ್ರಶ್ನೆಗೆ ಉತ್ತರ ಕಂಡುಕೊಂಡ ಕಾಂಗ್ರೆಸ್‌ ಹೈಕಮಾಂಡ್‌ಗೆ ಈಗ ಸಚಿವ ಸಂಪುಟ ವಿಸ್ತರಣೆ ಮತ್ತೊಂದು ಸವಾಲಾಗಿದೆ. ಮಂತ್ರಿಗಿರಿಗಾಗಿ ಹಿರಿಯ ಕಾಂಗ್ರೆಸ್‌ ಶಾಸಕರಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಈ ನಡುವೆ ತಮ್ಮ ನಾಯಕರಿಗೆ ಮಂತ್ರಿಗಿರಿ ನೀಡದಿದ್ದರೆ, ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆಂದು ಶಾಸಕರ ಬೆಂಬಲಿಗರು ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾರೆ.

ಗದಗ ಜಿಲ್ಲೆಯ ರೋಣಶಾಸಕ ಜಿ.ಎಸ್ ಪಾಟೀಲ್‌ಗೆ ಸಚಿವ ಸ್ಥಾನ ನೀಡದಿದ್ದರೆ, ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ನೀಡಿ, ಪಕ್ಷ ತೊರೆಯುತ್ತೇವೆಂದು ಪಾಟೀಲ್‌ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

ಗದಗದಲ್ಲಿ ಸಭೆ ನಡೆಸಿದ ಕೈ ಮುಖಂಡರು ಮತ್ತು ಕಾರ್ಯಕರ್ತರು, “ಜಿ.ಎಸ್ ಪಾಟೀಲ್‌ಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ, ಪಕ್ಷದಲ್ಲಿ ತಾವು ಹೊಂದಿರುವ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡುತ್ತೇವೆ. ಮಾತ್ರವಲ್ಲದೆ, ಮಂಗಳವಾರ (ಮೇ.23) ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಅಧಿಕಾರ ಬಂದ ಸಂದರ್ಭದಲ್ಲಿ ಪ್ರತಿ ಬಾರಿಯೂ ರೋಣ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗುತ್ತದೆ. ಜಿ.ಎಸ್ ಪಾಟೀಲ್ ಅವರು ನಾಲ್ಕು ದಶಕಗಳಿಂದ ಕ್ಷೆತ್ರದಲ್ಲಿ ಪಕ್ಷ ಕಟ್ಟಿದ್ದಾರೆ. ಅಲ್ಲದೆ, ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಲೇಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ...

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ...