ಗದಗ | ಬಿಂಕದಕಟ್ಟಿ ಮೃಗಾಲದಲ್ಲಿ ಹುಲಿ ಮನೆ ನಿರ್ಮಾಣ; ಸಚಿವ ಎಚ್‌ ಕೆ ಪಾಟೀಲ್‌ ಉದ್ಘಾಟನೆ

Date:

Advertisements

ವಿಶ್ವದಲ್ಲಿ ಇರುವ ಹುಲಿಗಳ ಪ್ರಮಾಣದಲ್ಲಿ ಶೇ. 60 ರಷ್ಟು ಭಾರತ ದೇಶದಲ್ಲಿರುವುದು ಹೆಮ್ಮೆಯ ವಿಷಯ. ವಿಶ್ವದಲ್ಲಿ ಒಟ್ಟು 5,578 ನಾನಾ ಜಾತಿಯ ಹುಲಿಗಳ ಸಂತತಿ ಇದ್ದು, ಈ ಪೈಕಿ ನಮ್ಮ ರಾಜ್ಯದಲ್ಲಿ 435 ಹುಲಿಗಳು ಇರುವುದು ಸಂತಸ ತಂದಿದೆ ಎಂದು ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ್‌ ತಿಳಿಸಿದರು.

ಗದಗ ಜಿಲ್ಲೆಯ ಬಿಂಕದಕಟ್ಟಿಯ ಮೃಗಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಹುಲಿ ಮನೆ ಸೇರಿದಂತೆ ನಾನಾ ಪ್ರಾಣಿ ಮನೆಗಳನ್ನು ಉದ್ಘಾಟಿಸಿ ಮಾತನಾಡಿದರು.

“ಕರ್ನಾಟಕ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಹುಲಿಗಳ ಸಂತತಿ ಸಮ ಪ್ರಮಾಣದಲ್ಲಿದೆ. 1973ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹುಲಿ ಸಂರಕ್ಷಣೆಗೆ ಮುಂದಾಗಿ ಅನೇಕ ಕ್ರಮಗಳನ್ನು ಕೈಗೊಂಡಿದ್ದರ ಪರಿಣಾಮವಾಗಿ ಇಂದಿಗೂ ಹುಲಿ ಸಂತತಿ ದೇಶದಲ್ಲಿ ಜೀವಂತವಾಗಿದೆ” ಎಂದರು.

Advertisements

ಮೃಗಾಲಯಕ್ಕೆ ಜಿರಾಫೆ, ಝೀಬ್ರಾ ಆಗಮನ:

“ಬಿಂಕದಕಟ್ಟಿ ಮೃಗಾಲಯಕ್ಕೆ ಜನವರಿ 26ರಂದು ಹೊಸ ಅತಿಥಿಗಳಾಗಿ ಜಿರಾಫೆ ಮತ್ತು ಝೀಬ್ರಾಗಳು ಆಗಮಿಸಲಿವೆ. ಈ ಪ್ರಾಣಿಗಳು ಮೃಗಾಲಯಕ್ಕೆ ಬರುವ ವೀಕ್ಷಕರ ಸಂಖ್ಯೆಯನ್ನು ಇನ್ನೂ ಹೆಚ್ಚಿಸುವ ವಿಶ್ವಾಸವಿದೆ. ಮೃಗಾಲಯದಲ್ಲಿ ಈ ಅತಿಥಿಗಳ ಸ್ವಾಗತಕ್ಕಾಗಿ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗುತ್ತಿದೆ” ಎಂದರು.

ಮೃಗಾಲಯಕ್ಕೆ ಆನೆ ಆಗಮನ

“ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಗದಗ ಮೃಗಾಲಯದ ಕುರಿತು ಚರ್ಚಿಸಲಾಗಿದೆ. ಗದಗ ಮೃಗಾಲಯಕ್ಕೆ ಆನೆ ತರುವ ಬಗ್ಗೆ ಪ್ರಸ್ತಾಪಿಸಲಾಗಿದ್ದು, ಆನೆ ಜೊತೆಗೆ ಅಗತ್ಯ ನಿರ್ವಹಣಾ ಅನುದಾನವನ್ನೂ ನೀಡುವುದಾಗಿ ಸಚಿವ ಈಶ್ವರ ಖಂಡ್ರೆ ಅವರು ಸಮ್ಮತಿ ನೀಡಿದ್ದಾರೆ. ಶೀಘ್ರವೇ ಗದಗ ಮೃಗಾಲಯಕ್ಕೆ ಆನೆಯೂ ಅತಿಥಿಯಾಗಿ ಆಗಮಿಸಲಿದೆ” ಎಂದರು.

ಝೂ ಮಾಸ್ಟರ ಪ್ಲಾನ್

“ಗದಗ ಜಿಲ್ಲೆಯ ಬಿಂಕದಕಟ್ಟಿ ಮೃಗಾಲಯದ ಝೂ ಮಾಸ್ಟರ ಪ್ಲಾನ್ ಸಿದ್ಧವಾಗಿದ್ದು, 2024ರ ಆಗಸ್ಟ್ 15ರೊಳಗಾಗಿ ಝೂ ಮಾಸ್ಟರ್ ಪ್ಲಾನ್ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಗದಗ ಜಿಲ್ಲಾ ಪ್ರವಾಸೋದ್ಯಮ ಸಮಿತಿಯು ಗದಗ ಮೃಗಾಲಯದ ಅಭಿವೃದ್ಧಿಗೆ ಮುಂದಾಗಿದ್ದು‌, ಅಧ್ಯಯನ ನಡೆಸಿದೆ. ಗದಗ ಜಿಲ್ಲೆಯು ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ಬಿಂಕದಕಟ್ಟಿ ಮೃಗಾಲಯದ ಹತ್ತಿರದಲ್ಲಿಯೇ ಅತ್ಯಾಧುನಿಕ ಸೌಲಭ್ಯಗಳುಳ್ಳ ಉತ್ತಮ ಕ್ಯಾಂಟಿನ್ ಮಾಡಲಾಗುವುದು” ಎಂದರು.

ಪ್ರವಾಸೋದ್ಯಮ ವರದಿ

“ಹಿರಿಯ ಐಎಎಸ್ ಅಧಿಕಾರಿ ಮನೋಜ್ ಕುಮಾರ ಅವರ ನೇತೃತ್ವದಲ್ಲಿ ಗದಗ ಜಿಲ್ಲಾ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿ ಸಮತಿಯನ್ನು ರಚಿಸಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ಸಮಿತಿಯು ಅಗಸ್ಟ್‌ 8ರಂದು ಸರ್ಕಾರಕ್ಕೆ ಅಧ್ಯಯನದ ವರದಿ ಸಲ್ಲಿಸಲಿದೆ. ಈ ಮೂಲಕ ಗದಗ ಜಿಲ್ಲಾ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುಕೂಲ ಆಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಲಕ್ಕುಂಡಿಯಲ್ಲಿ ಹುದುಗಿರುವ ದೇವಸ್ಥಾನಗಳನ್ನು ಗುರುತಿಸುವುದರ ಮೂಲಕ ಅವುಗಳನ್ನು ಅಭಿವೃದ್ಧಿಪಡಿಸಿ ಲಕ್ಕುಂಡಿಯ ಗತ ವೈಭವವನ್ನು ಪ್ರವಾಸಿಗರಿಗೆ ಪರಿಚಯಿಸಬೇಕು. ಹಂಪಿಯಷ್ಟೇ ಲಕ್ಕುಂಡಿಯು ಸಮೃದ್ಧ ಪ್ರದೇಶವಾಗಿದೆ ಎಂಬುದನ್ನು ಪ್ರವಾಸಿಗರಿಗೆ ಪರಿಚಸಯಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಲಿಸಿದರು.

ಈ ಸುದ್ದಿ ಓದಿದ್ದೀರಾ? ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚು ಹುಲಿಗಳು; ಕರ್ನಾಟಕಕ್ಕೆ ಎರಡನೇ ಸ್ಥಾನ

300 ಕೋಟಿ ಹೂಡಿಕೆ

“ಪ್ರವಾಸೋದ್ಯಮದಲ್ಲಿ 300 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಲಾಗಿದೆ. ಇದರಿಂದ ನೂರಾರು ಹೊಟೆಲ್ ಸೌಲಭ್ಯಗಳು ಸೃಷ್ಟಿಯಾಗಲಿವೆ. ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸಹಕಾರಿ. ಖಾಸಗಿ ಹೂಡಿಕೆಯಿಂದ ರಾಜ್ಯದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಇನ್ನಷ್ಟು ಅಭಿವೃದ್ಧಿ ಹೊಂದಲಿದ್ದು ಕೆಳವರ್ಗದ ಜನರೂ ಇದರ ಪ್ರಯೋಜನ ಪಡೆಯಲಿದ್ದಾರೆ. ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ ರಾಜ್ಯದಲ್ಲಿ ಪ್ರವಾಸೋದ್ಯಮವು ಅಭಿವೃದ್ಧಿಗೊಳ್ಳುತ್ತಿದೆ”‌ ಎಂದರು.

ಈ ಸಂದರ್ಭದಲ್ಲಿ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಬಿಂಕದಕಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ ಎಸ್ ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದಿಪೀಕಾ ಬಾಜಪೇಯಿ, ಉಪವಿಭಾಗಾಧಿಕಾರಿ ಗಂಗಪ್ಪ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಸೇರಿದಂತೆ ಗಣ್ಯರು, ಹಿರಿಯರು, ಸಾರ್ವಜನಿಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X