ಗದಗ | ನಿರಂತರ ಮಳೆ; ಪಂಚಾಯಿತಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಪರಿಸ್ಥಿತಿ ನಿಭಾಯಿಸುವಂತೆ ಸೂಚನೆ

Date:

ಗದಗ‌ ಜಿಲ್ಲೆಯಲ್ಲಿ ನಿಂರತರವಾಗಿ ಮಳೆ ಸುರಿಯುತ್ತಿರುವುದರಿಂದ ಉಂಟಾಗುವ ಪ್ರವಾಹ ಹಾಗೂ ಅತಿವೃಷ್ಟಿ ಪರಿಸ್ಥಿತಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚನೆ ನೀಡಿದರು.

- Advertisement -

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ‌ ಶುಕ್ರವಾರ ನಡೆಸಿದ ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

“ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿರುತ್ತದೆ. ತಗ್ಗು ಪ್ರದೇಶದಲ್ಲಿನ ಜನ, ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಂದರ್ಭಾನುಸಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳುವಳಿಕೆ ನೀಡಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಗುರುತಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನ ಒಲಿಸುವುದರ ಮೂಲಕ ಸಂಭವನೀಯ ಜೀವ ಹಾನಿ ತಡೆಗಟ್ಟಲು ಅಗತ್ಯವಿರುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ತಿಳಿಸಿದರು.

“ನಿರಂತರ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರುಡುವ ಸಂಭವವಿದ್ದು, ಜನ ಸಾಮಾನ್ಯರು ಶುದ್ಧ ಕುಡಿಯುವ ನೀರಿನ ಬಳಕೆ ಮಾಡುವಂತೆ ಅರಿವು ಮೂಡಿಸಬೇಕು. ಕುಡಿಯುವ ನೀರಿನ ಶುದ್ಧತೆ ಕುರಿತು ಅನುಮಾನವಿದ್ದಲ್ಲಿ ತಕ್ಷಣವೇ ನೀರನ್ನು ಪರೀಕ್ಷೆಗೊಳಪಡಿಸಬೇಕು. ಹಾಗೂ ಆರೋಗ್ಯ ಸುರಕ್ಷತೆಗಾಗಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.

“ಮಳೆ ನೀರು ಸರಾಗವಾಗಿ ಹರಿದು ಹೋಗಲು ಅನುಕೂಲವಾಗುವಂತೆ ಗ್ರಾಮಗಳಲ್ಲಿನ ಚರಂಡಿ, ಕಾಲುವೆಗಳನ್ನು ಸ್ವಚ್ಛಗೊಳಿಸಬೇಕು. ಅಲ್ಲದೇ ರೈತರು ತಮ್ಮ ಜಾನುವಾರುಗಳನ್ನು ವಿದ್ಯುತ್ ಕಂಬಳಿಗೆ ಕಟ್ಟದಂತೆ ಹಾಗೂ ಗ್ರಾಮಗಳಲ್ಲಿನ ಕೆರೆ, ನದಿ ದಡಕ್ಕೆ ಸಾರ್ವಜನಿಕರು, ಜಾನುವಾರುಗಳನ್ನು ಒಯ್ಯದಂತೆ ಜಾಗೃತಿ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

“ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಯೋಜನೆ ರೂಪಿಸಿಕೊಂಡು ಜನ, ಜಾನುವಾರು ಜೀವ ಹಾನಿಯಾಗದಂತೆ ಎಲ್ಲ ಇಲಾಖೆಗಳೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸಬೇಕು ಹಾಗೂ ಗ್ರಾಮಗಳ ಪ್ರವಾಹ ಪರಿಸ್ಥಿತಿ ಕುರಿತು ಮೇಲಾಧಿಕಾರಿಗಳಿಗೆ ಕಾಲ ಕಾಲಕ್ಕೆ ಮಾಹಿತಿ ಒದಗಿಸಬೇಕು” ಎಂದು ಜಿಲ್ಲಾಧಿಕಾರಿ ವೈಶಾಲಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ನಿರಂತರ ಮಳೆಯಿಂದ 192 ಮನೆಗಳು ಹಾನಿ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ‌ ಆರ್ ಮುಂಡರಗಿ, ಮುಖ್ಯ ಯೋಜನಾಧಿಕಾರಿ ವಾಗೀಶ, ಯೋಜನಾ ನಿರ್ದೇಶಕ ಎಂ ವಿ ಚಳಗೇರಿ ಸೇರಿದಂತೆ ತಾ ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...