ಗದಗ | ನ್ಯಾಯಾಲಯ ಐತಿಹಾಸಿಕ ತೀರ್ಪು ಸ್ವಾಗತ : ಹಣಮಂತ ಮಾದರ

Date:

“ರಾಜ್ಯದಲ್ಲಿ ಇರುವ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೆ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಕಾರ್ಮಿಕರು ವಿದ್ಯಾರ್ಥಿಗಳು ಈ ತೀರ್ಪುನ್ನು ಸ್ವಾಗತಿಸುತ್ತೇವೆ” ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರೋಣ ತಾಲೂಕು ಸಂಚಾಲಕರಾದ ಹಣಮಂತ ಮಾದರ ಹೇಳಿದರು.

- Advertisement -

ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೇಡರೇಷನ್  ವತಿಯಿಂದ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೆ ಬಿಡುಗಡೆ ಮಾಡಿ ಎಂಬ ತೀರ್ಪುನ್ನು ಸ್ವಾಗತಿಸಿ ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ವಿಜಯೋತ್ಸವ ಆಚರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಈ ಗೆಲುವಿಗೆ ಕಾರಣರಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಮಹಾಂತೇಶ್ ಕೆ ಅವರಿಗೆ ಮತ್ತು ರಾಜ್ಯ ಅಧ್ಯಕ್ಷರು ಕಾಮ್ರೆಡ್ ಬಾಲಕೃಷ್ಣ ಶೆಟ್ಟಿ ಅವರಿಗೆ ಹಾಗೂ ವಕೀಲರಾದ ಅಕ್ಷಿತಾ ಗೋಯಲ್ ಮತ್ತು ಆದಿತ್ಯ ಚಟರ್ಜಿ ಅವರಿಗೆ ಸಲ್ಲುತ್ತದೆ. ಕಾರ್ಮಿಕರು, ವಿದ್ಯಾರ್ಥಿಗಳು ರೋಣ ತಾಲೂಕ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸುವು ಮೂಲಕ ಕರ್ನಾಟಕ ರಾಜ್ಯ ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ಸ್ವಾಗತ ಮಾಡುತ್ತೇವೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಸಂಕಪ್ಪ ಕುರಹಟ್ಟಿ ಅವರು ಮಾತನಾಡಿ, 2021 ರಿಂದ 2023 ರ ವರೆಗೆ ಬಾಕಿ ಇರುವ ಕಾರ್ಮಿಕ ಮಕ್ಕಳ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಆದಷ್ಟು ಬೇಗನೆ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ ಕಾರ್ಮಿಕರಿಗೆ ವಂಚನೆ ಮಾಡಿದೆ ಶೈಕ್ಷಣಿಕ ಸಹಾಯಧನ ನೀಡದೆ ಸತಾಯಿಸುತ್ತಿದ್ದಾರೆ. ಇದನ್ನು ವಿರೋಧಿಸಿ ನ್ಯಾಯಾಲಯದ ಮೊರೆ ಹೋಗಿ ದಾವೆಯನ್ನು ಹೂಡಿ ಇವತ್ತು ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದೆ. ಅದಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಸ್ವಾಗತಿಸುತ್ತದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ಸಭೆ; ಸ್ಥಳೀಯ ವ್ಯಾಪಾರಿಗಳ ರಕ್ಷಣೆಗೆ ಆಗ್ರಹ

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ಹನಮಂತ ತಾಳಿ,ಚಾಂದಸಾಬ್ ಕೌಜಗೇರಿ , ಮುಸ್ತಾಕ್ ಯಲಿಗಾರ, ಪ್ರವೀಣ್ ದಾನಿ, ಖಾಜೇಸಾಬ್ ಮುಲ್ಲಾ , ಹುಸೇನ್ ಸಾಬ್ ಮುಲ್ಲಾ, ಶೇಖಪ್ಪ ಬಡಿಗೇರ್, ಮಂಜುನಾಥ ಮಾದರ, ಷಣ್ಮುಖ ಕುರಿ, ಮಹಾಲಿಂಗಪ್ಪ ಬಡಿಗೇರ್ , ಬೆಳ್ಳಪ್ಪ ಕಿರಟಗೇರಿ , ದ್ಯಾಮಣ್ಣ ಬಡಿಗೇರ್, ಮಮ್ಮದಸಾಬ್ ಮುಲ್ಲಾ, ವಿಜಯ ಕಮ್ಮಾರ್,ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...