ಗದಗ | ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಡಿ.ವಾಯ್.ಎಫ್.ಐ ಮನವಿ

Date:

“ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳು  ಮುಂದಾಗಬೇಕು , ನಗರ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಜಾರಿಗೊಳಿಸಬೇಕು ವಾರ್ಡಿನಲ್ಲಿ ಎಲ್ಲಾ ಸಮಸ್ಯೆಗಳು ಸರಿಪಡಿಸಲು ಮಾನ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕು” ಎಂದು ಎಸ್ ಎಫ್ ಐ ರಾಜ್ಯ ಉಪಾಧ್ಯಕ್ಷರು ಗಣೇಶ ರಾಠೋಡ ಒತ್ತಾಯಿಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಉಣಚಗೇರಿ 23ನೇ ವಾರ್ಡಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ವತಿಯಿಂದ  ಪುರಸಭೆ ಸಿಬ್ಬಂದಿ ಜಿ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಾಗಯ್ಯ ಹೀರೆಮಠ್ ಮಾತನಾಡಿ, “ಸುಮಾರು ದಿನಗಳಿಂದ ಉಣಚಗೇರಿ ವಾರ್ಡಿನಲ್ಲಿ ಸಮಸ್ಯೆಗಳಿಂದ ಬಳಲುತ್ತಿದೆ. ಆದರೂ ಈವರೆಗೂ ಯಾವುದೇ ಅಧಿಕಾರಿಗಳು ಅಥವಾ ವಾರ್ಡಿನ ಸದಸ್ಯರು ಅದನ್ನು ಬಗೆಹರಿಸಲು ಮುಂದಾಗಿಲ್ಲ. ಮುಂದಿನ ದಿನಗಳಲ್ಲಿ ಅವರನ್ನು ಮನೆಗೆ ಕಳುಹಿಸುತ್ತೆವೆಂದು ಹೇಳಿದರು.

ಪ್ರಮುಖ ಬೇಡಿಕೆಗಳು: 1) ವಾರ್ಡಿನ ಎಲ್ಲಾ ಪ್ರಮುಖ ಓಣಿಗಳಲ್ಲಿ ವಿದ್ಯುತ್ ದಿಪ ಅಳವಡಿಸಬೇಕು. 2) ನಗರದ ಚೆನ್ನಮ್ಮ ವೃತ್ತದಲ್ಲಿ ಬರುವ ಸ್ಥಳದಲ್ಲಿ ಕಸ ರಸ್ತೆಬದಿ ಬಂದಿದ್ದೆ ಅದನ್ನು ವೀಲೆವಾರಿ ಮಾಡಬೇಕು. 3)  ವಾರ್ಡಿನಲ್ಲಿ ಸಿ ಸಿ ರಸ್ತೆ ನಿರ್ಮಾಣ ಮಾಡಬೇಕು. 4) ಮಹಿಳೆಯರ ಶೌಚಾಲಯ ನಿರ್ಮಿಸಬೇಕು. 5) ಒಳಚರಂಡಿಗಳನ್ನು ಸ್ವಚ್ಛಗೊಳಿಸಬೇಕು, ಬ್ಲಾಕ್ ಆಗಿರುವ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. 6)  ನಗರ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿಡಬೇಕು. 7)  ಉಣಚಗೇರಿ ವಾರ್ಡಿನಲ್ಲಿ ಬಸ್ ನಿಲ್ದಾಣವಾಗಬೇಕು.

ಈ ಸುದ್ದಿ ಓದಿದ್ದೀರಾ? ಕಾಲ್ತುಳಿತ | ಆರ್‌ಸಿಬಿ ಮತ್ತು ಡಿಎನ್‌ಎ ಪದಾಧಿಕಾರಿಗಳಿಗೆ ಮಧ್ಯಂತರ ಜಾಮೀನು

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರು ಚಂದ್ರು ರಾಠೋಡ, ಮಹೇಶ್ ಬೆನ್ನೂರ, ಲೋಹಿತ ಪಾಟೀಲ್, ಮುತ್ತು ಪಾಟೀಲ್, ರವಿ ತಳವಾರ, ರಾಜು ಪಾಟೀಲ್ , ಧರಮಣ್ಣ ಗದ್ಧಿ,ವಿಜಯ ಕಲಾಲಬಂಡಿ, ಪ್ರಶಾಂತ್ ಪಾಟೀಲ್, ಆಸೀಫ್ ನದಾಫ, ಯಮನೂರಪ್ಪ ನಧಾಪ, ಕನಕರಾಯ, ಅಭಿಲಾಷ್ ರಾಠೋಡ, ಅನಿಲ್ ರಾಠೋಡ, ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...