ಗದಗ | ಡೊನೇಷನ್ ಹಾವಳಿ ತಡೆಗಟ್ಟುವಂತೆ ದಲಿತ ವಿದ್ಯಾರ್ಥಿ ಪರಿಷತ್ ಬೃಹತ್ ಪ್ರತಿಭಟನೆ.

Date:

“ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದ್ದು ಕೂಡಲೇ ಡೊನೇಷನ್ ಹಾವಳಿ ತಡೆಗಟ್ಟಬೇಕು. ಬಡ ವಿದ್ಯಾರ್ಥಿಗಳ ಜೀವನದ ಜೊತೆ ಚಲ್ಲಾಟವಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ದ ಕ್ರಮ ಜರುಗಿಸಬೇಕು” ಎಂದು ಡಿ.ವಿ.ಪಿ ಮುಖಂಡರು ಒತ್ತಾಯಿಸಿದರು.

- Advertisement -

ಗದಗ ಜಿಲ್ಲೆಯ ರೋಣ ಪಟ್ಟಣದ ಸೂಡಿ ಕ್ರಾಸ್ ಬಳಿ ಮಾನವ ಸರಪಳಿ ನಿರ್ಮಿಸಿ ಖಾಸಗಿ ಶಿಕ್ಷಣ ಸಂಸ್ಥೆ ಡೊನೇಷನ್‌ ಹಾವಳಿ ತಡೆಗಟ್ಟುವಂತೆ ದಲಿತ ವಿದ್ಯಾರ್ಥಿ ಪರಿಷತ ವತಿಯಿಂದ ಮುಖಂಡರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರಕಾರದ ವಿರುದ್ದ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿಯಿಂದಾಗಿ ಬಡವರು ಕೂಲಿ ಕಾರ್ಮಿಕರು ಅಸಂಘಟಿತ ಕಾರ್ಮಿಕರ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದುಕೊಳ್ಳುವದು ಮರೀಚಿಕೆಯಾಗಿದೆ. ಶೈಕ್ಷಣೀಕ ಕ್ಷೇತ್ರ ಉಳ್ಳವರ ಪಾಲಾಗಿ ವ್ಯಾಪಾರೀಕರಣವಾಗಿ ಮಾರ್ಪಟ್ಟಿದೆ. ದಿನದಿಂದ ದಿನಕ್ಕೆ ಸಾಕಷ್ಟು ಖಾಸಗೀ ಶಿಕ್ಷಣ ಸಂಸ್ಥೆಗಳು ತಲೆ ಎತ್ತಿ ನಿಂತಿವೆ. ಇದರಿಂದಾಗಿ ಸರ್ಕಾರಿ ಶಾಲೆ ಮುಚ್ಚುವಂತಹ ಪರುಸ್ಥಿತಿ‌ ನಿರ್ಮಾಣವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕೂಡಲೇ ಸರ್ಕಾರ ಸರ್ಕಾರಿ ಆದೇಶದ ಪ್ರಕಾರ ನಿಯಮಿತ ಸರ್ಕಾರಿ ಶುಲ್ಕವನ್ನು ಪಡೆದುಕೊಂಡು ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಬೇಕು. ರಾಜ್ಯದ ಎಲ್ಲಾ  ಶಾಲಾ ಕಾಲೇಜುಗಳಲ್ಲಿ ಪ್ರವೇಶಾತಿ ಶುಲ್ಕದ ದರಪಟ್ಟಿಯನ್ನು ನೋಟೀಸ್ ಬೋರ್ಡ್‌ಗೆ ಲಗತ್ತಿಸಬೇಕು” ಎಂದು ಒತ್ತಾಯಿಸಿರು.

IMG 20250627 070813

“ರಾಜ್ಯದ ವಿವಿಧ ವಸತಿ‌ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳು ಶೌಚಾಲಯ. ಶುದ್ದ ಆಹಾರ. ಅಭ್ಯಾಸಕ್ಕೆ ಪೂರಕವಾದ ಸುಸಜ್ಜಿತ ಕೂಠಡಿಗಳನ್ನು ನಿರ್ಮಿಸಬೇಕು. ಬಡ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ದೊರೆಯುವಂತೆ ಸರ್ಕಾರ ಕ್ರಮ ಜರುಗಿಸಬೇಕು” ಎಂದು ರೋಣ ತಹಶಿಲ್ದಾರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ| ಗುತ್ತಿಗೆದಾರನ ಕೊಲೆ ಪ್ರಕರಣ ಆರೋಪಿಗಳ ಕಾಲಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ವಾಯ್.ಚಲವಾದಿ, ಜಿಲ್ಲಾ ದಲಿತ ಯುವ ಮುಖಂಡ ವಿಜಯಕುಮಾರ ಚಲವಾದಿ, ಡಿಎಸ್ಎಸ್ ಭೀಮವಾದ ತಾಲೂಕಾಧ್ಯಕ್ಷ ಹನಮಂತ ಚಲವಾದಿ, ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಮುಳ್ಳಾಳ, ಚಲವಾದಿ ಮಹಾಸಭಾ ರೋಣ ತಾಲೂಕಾ ಉಪಾಧ್ಯಕ್ಷ ಅಶೋಕ ತಾಳದವರ, ದಲಿತ ವಿದ್ಯಾರ್ಥಿ ಪರಿಷತ್ ರೋಣ ತಾಲೂಕಾಧ್ಯಕ್ಷ ರಮೇಶ ನಂದಿ, ಉಪಾಧ್ಯಕ್ಷ ಅಂದಪ್ಪ ಮಾದರ, ಪ್ರಧಾನ ಕಾರ್ಯದರ್ಶಿ ಅಭಿಷೇಕ ಕೊಪ್ಪದ, ದಲಿತ ವಿದ್ಯಾರ್ಥಿ ಪರಿಷತ್ ವಿಜಯನಗರ ಜಿಲ್ಲಾಧ್ಯಕ್ಷ ಹನಮೇಶ ರಾಮ್, ಜೈಭೀಮ್ ಸೇನಾ ರಾಜ್ಯ ಉಪಾಧ್ಯಕ್ಷ  ಮೈಲಾರಪ್ಪ ಚಳ್ಳಮರದ, ಜಿಲ್ಲಾ ದಲಿತ ಮುಖಂಡರು ಡಿ.ಜಿ.ಕಟ್ಟಿಮನಿ, ಮಂಜುನಾಥ ಬುರಡಿ, ಮಾರುತಿ ಹಾದಿಮನಿ, ಚಂದ್ರಶೇಖರ ಮಾದರ, ವೀರಪ್ಪ ತೆಗ್ಗಿನಮನಿ,  ಮಲ್ಲು ಮಾದರ, ಮಂಜುನಾಥ ದೊಡ್ಡಮನಿ, ಮಾಲತೇಶ ಮಾದರ, ಬಸವರಾಜ ಕಾಳೆ, ಭೀಮಶಿ‌ ಮಾದರ, ಮಹೇಶ ಕುರುಬನಾಳ, ಫಕ್ಕೀರಪ್ಪ ಮಾದರ, ಚಂದ್ರು ಮಾದರ, ಪ್ರಕಾಶ ಮಾದರ, ಯಲ್ಲಪ್ಪ ಹಿರೇಮನಿ, ಸಿದ್ದು ದೊಡ್ಡಮನಿ, ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...