ಗದಗ | ಎಸ್‌ಎಫ್‌ಸಿ ವಿಶೇಷ ಅನುದಾನದ ಸಮರ್ಪಕ ಹಂಚಿಕೆಗೆ ಆಗ್ರಹ

Date:

ಎಸ್‌ಎಫ್‌ಸಿ ವಿಶೇಷ ಅನುದಾನವನ್ನು ಪಟ್ಟಣದ 23 ವಾರ್ಡ್‌ಗಳಿಗೆ ಸರಿಯಾಗಿ ಹಂಚಿಕೆ ಮಾಡಬೇಕು ಎಂದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಪುರಸಭೆ ಸದಸ್ಯ ಸಂತೋಷ್ ಹಿರೇಮನಿ ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಮುಂಡರಗಿ ಪುರಸಭೆಯ ಎಸ್‌ಎಫ್‌ಸಿ ವಿಶೇಷ ಅನುದಾನವನ್ನು 23 ವಾರ್ಡ್‌ಗಳಿಗೆ ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಈಗಾಗಲೇ ಎಸ್‌ಎಫ್‌ಸಿ ವಿಶೇಷ ಅನುದಾನ ಸುಮಾರು 2 ಕೋಟಿ ರೂ. ಮಂಜುರಾಗಿದ್ದು, ಅದರಲ್ಲಿ ₹67 ಲಕ್ಷ 22ನೇ ವಾರ್ಡಿಗೆ ಅತಿ ಹೆಚ್ಚು ಹಂಚಿಕೆಯಾಗಿದ್ದು, ಜಿಲ್ಲಾಧಿಕಾರಿ ಅನುಮೋದನೆಗೆ ಕಳುಹಿಸಲಾಗಿದ್ದು, ಮುಖ್ಯ ಅಧಿಕಾರಿಗಳು ಹಾಗೂ ಸಹಾಯಕ ಅಭಿಯಂತರರು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡುಬರುತ್ತದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ; ಹಕ್ಕುಪತ್ರದ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪುರಸಭೆ ಸದಸ್ಯರನ್ನು ಕರೆಯದೆ ತಾವೇ ಠರಾವ್‌ ಮಾಡಿಕೊಂಡಿದ್ದಾರೆ. ಇದರಿಂದ ಸಂಶಯ ವ್ಯಕ್ತವಾಗುತ್ತಿದೆ. ಯಾವುದೇ ಸದಸ್ಯರಿಗೂ ಕೂಡ ಸಭೆಯ ನೋಟಿಸ್‌ ಬಂದಿರುವುದಿಲ್ಲ ಅಧಿಕಾರಿಗಳೇ ಕ್ರಿಯಾ ಯೋಜನೆಯನ್ನು ಮಾಡಿರುವುದು ಕಂಡುಬಂದಿದ್ದು, ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್‌ಎಫ್‌ಸಿ ವಿಶೇಷ ಅನುದಾನವನ್ನು ಪಟ್ಟಣದ 23ನೇ ವಾರ್ಡ್‌ಗೆ ಸರಿಯಾಗಿ ಹಂಚಿಕೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪುರಸಭೆ ಎದುರು ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...