ಗದಗ | ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಬಿಡುಗಡೆಗೆ ಆಗ್ರಹ

Date:

Advertisements

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಗದಗದಲ್ಲಿ ಕರವೇ ಪ್ರತಿಭಟನೆ ನಡೆಸಿದೆ. ಗದಗ ತಾಲೂಕು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ  ತಾಲೂಕು ಅಧ್ಯಕ್ಷ ನಾಗಪ್ಪ ಅಣ್ಣಿಗೇರಿ, “ಡಿಸೆಂಬರ್‌ 27 ರಂದು ನಡೆದ ಕನ್ನಡದ ನಾಮಫಲಕದ ಅಭಿಯಾನದ ವೇಳೆ ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆಗೆದು ಎಸೆಯುವ ಮೂಲಕ ಕನ್ನಡ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ಕರವೇ ರಾಜ್ಯಾಧ್ಯಕ್ಷ ಹಾಗೂ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಗದಗ ಜಿಲ್ಲಾದ್ಯಂತ ತೀವ್ರ ಪ್ರತಿಭಟನೆ ಮಾಡಲಾಗುವುದು. ಈ ಸಂದರ್ಭದಲ್ಲಿ ಹಾನಿ ಉಂಟಾದರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ” ಎಂದು ಎಚ್ಚರಿಕೆ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕನ್ನಡಪರ ಕಾರ್ಯಕರ್ತರ ಬಂಧನ ಖಂಡನೆ; ಕರವೇ ಆಕ್ರೋಶ 

ಈ ಸಂದರ್ಭದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಂಗನಗೌಡ ಮಾಲಿ ಪಾಟೀಲ್, ಗದಗ ತಾಲೂಕು ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಭೋವಿ, ತಾಲೂಕು ಉಪಾಧ್ಯಕ್ಷ ಈರಣ್ಣ ಹುರಕಡ್ಲಿ ತಾಲೂಕು ಸಂಚಾಲಕ ಅಲ್ಲಾ ಸಾಬ್ ನದಾಫ್, ಸಾಮಾಜಿಕ ಜಾಲತಾಣ ಸಂಚಾಲಕ ಮುಸ್ತಾಕ್, ದಾವಣಗೆರೆ ಪ್ರವೀಣ್ ಬನ್ನಿಗೊಳ್ಳ, ವೀರೇಶ್ ಕೊಣ್ಣೂರ್, ಫಾರೂಕ ಕನವಳ್ಳಿ, ಚಂದ್ರು ಮಣ್ಣೂರ್, ಮಂಜು ಕೊಣ್ಣೂರ್ ,ಶಿವು ಜಾಫರ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X