ಗದಗ | ಹಾಸ್ಟೆಲ್‌ಗಳಲ್ಲಿ ಮೆರಿಟ್, ಕೌನ್ಸಲಿಂಗ್ ಹೆಸರಿನ ಆಯ್ಕೆ ಪ್ರಕ್ರಿಯೆ ಕೈಬಿಡಲು ಆಗ್ರಹ

Date:

ಗದಗ ಜಿಲ್ಲೆಯ ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗಳಲ್ಲಿ ಮೆರಿಟ್, ಕೌನ್ಸಲಿಂಗ್‌ ಅಧಾರದಲ್ಲಿ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆಯನ್ನು ಕೈಬಿಡಬೇಕು. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ಗಳಲ್ಲಿ ಪ್ರವೇಶ ನೀಡಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸಿದೆ.

- Advertisement -

ಹಾಸ್ಟೆಲ್‌ಗಳಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಸ್‌ಎಫ್‌ಐ ಗಜೇಂದ್ರಗಢ ತಾಲೂಕಿನ ಅಧ್ಯಕ್ಷ ಚಂದ್ರು ರಾಠೋಡ, “ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಮೆರಿಟ್, ಕೌಲ್ಸಿಂಗ್ ಮೂಲಕ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಿಗೆ ಆಯ್ಕೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ವಸತಿ ಮತ್ತು ಶಿಕ್ಷಣದಿಂದ ಗ್ರಾಮೀಣ ವಿದ್ಯಾರ್ಥಿಗಳನ್ನು ವಂಚಿತಗೊಳಿಸುವ ಹುನ್ನಾರವಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

“ರಾಜ್ಯ ಸರ್ಕಾರ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ನೂತನವಾಗಿ ಆನ್‌ಲೈಲ್‌ ನಲ್ಲಿ ಅರ್ಜಿಗಳನ್ನು ಕರೆದು ಅರ್ಜಿ ಸಲ್ಲಿಸಿದ ನಂತರ ಜಿಲ್ಲಾವಾರು ಹಾಸ್ಟೇಲ್‌ಗಳಿಗೆ ವಿದ್ಯಾರ್ಥಿಗಳ ಮೆರಿಟ್ ಮತ್ತು ಕೌಲ್ಸಿಂಗ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತಿದೆ. ಅದು ವಿದ್ಯಾರ್ಥಿಗಳಿಗೆ ತುಂಬಾ ಆತಂಕವನ್ನುಂಟುಮಾಡಿದೆ. ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಹಾಸ್ಟೇಲ್ ಬಯಸಿ ತಮ್ಮ ಹತ್ತಿರದ ಪ್ರದೇಶಗಳಲ್ಲಿ ಅರ್ಜಿ ಸಲ್ಲಿಸಿ, ಶೈಕ್ಷಣಿಕ ಭವಿಷ್ಯದ ಕನಸು ಹೊಂದಿರುತ್ತಾರೆ. ಆದರೆ, ಮೆರಿಟ್, ಕೌನ್ಸಲಿಂಗ್ ಪ್ರಕ್ರಿಯೆಯಿಂದಾಗಿ ಹಾಸ್ಟೆಲ್‌ಗಳಲ್ಲಿ ಹಲವು ವಿದ್ಯಾರ್ಥಿಗಳಿಗೆ ಪ್ರವೇಶ ಸಿಗದೆ, ದೂರದ ಜಿಲ್ಲೆಗಳಿಗೆ ಹೋಗಿ ವಸತಿ ಪಡೆದು ಶಿಕ್ಷಣ ಪಡೆಯಲಾಗದೆ ಶಿಕ್ಷಣದಿಂದ ದೂರ ಉಳಿಯುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪಸಂಖ್ಯಾತ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳ ಅಡಿಯಲ್ಲಿ ನಡೆಸುತ್ತಿರುವ ಎಲ್ಲ ವಸತಿ ನಿಲಯಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಯಾವುದೇ ರೀತಿಯಲ್ಲಿ ಮೆರಿಟ್ ಮತ್ತು ಕೌನ್ಸಲಿಂಗ್ ಮೂಲಕ ಆಯ್ಕೆ ಎಂಬ ನೆಪ ಹೇಳಬಾರದು. ಎಲ್ಲರಿಗೂ ಪ್ರವೇಶ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಕೊಡಗು ವಿವಿ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್‌ಗೆ ಪ್ರತಿಷ್ಠಿತ ‘ದಿ AGRI100-2026’ ಪ್ರಶಸ್ತಿ

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್ ಅವರು ಭಾರತದ...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...