ಗದಗ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹ

Date:

ನಾಗೇಂದ್ರಗಡ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್‌ ಆಕಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಫಕ್ರುಸಾಬ ಕೊತವಾಲೆ ನೇತೃತ್ವದಲ್ಲಿ ಸ್ಥಳೀಯರು ಗದಗ ಜಿಲ್ಲೆಯ ಗಜೇಂದ್ರಗಡ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

- Advertisement -

ಸಾಮಾಜಿಕ ಹೋರಾಟಗಾರ ಫಕ್ರುಸಾಬ ಕೊತವಾಲೆ ಮತನಾಡಿ, “ಕುಡಿತದ ಚಟದಿಂದಾಗಿ ಬಡ ಕುಟುಂಬಗಳ ನೆಮ್ಮದಿಯೇ ಹಾಳಾಗುತ್ತಿದೆ. ಯುವಕರು ಇದರ ಹಿಂದೆ ಬಿದ್ದಿದ್ದು, ತಮ್ಮ ಜೀವನವನ್ನು ಹಾಳಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಅಕ್ರಮ ಸಾರಾಯಿ ಮಾರಾಟವನ್ನು ಸ್ಥಗಿತಗೊಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಬರಗಾಲದಿಂದಾಗಿ ಬೆಳೆಯಿಲ್ಲದೆ, ಹಳ್ಳಿಯಲ್ಲಿ ಕುಡಿಯುವ ನೀರು ಸೇರಿದಂತೆ ಒಂದೊತ್ತಿನ ಊಟಕ್ಕೂ ಸಮಸ್ಯೆ ಎದುರಾಗಿದೆ. ಇದರ ನಡುವೆ ಅಕ್ರಮ ಮದ್ಯ ಮಾರಾಟಕ್ಕೆ ಮಾತ್ರ ಯಾವುದೇ ಕೊರಗು ಇಲ್ಲದೆ ರಾಜಾರೋಷವಾಗಿ ಕೆಲವರು ಗ್ರಾಮದಲ್ಲಿ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಕೆಲವರು ಇದನ್ನೇ ನಿತ್ಯ ದಂಧೆ ಮಾಡಿಕೊಂಡಿರುವುದರಿಂದ ಹಳ್ಳಿಗಳಲ್ಲಿ ಸಾರಾಯಿ ಸೇವೆನೆಯಲ್ಲಿ ಯುವಕರು ಮಗ್ನರಾಗಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು ಹಾಗೂ ಗ್ರಾಮಕ್ಕೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಾಹೀರಾತು ಬಿತ್ತರಿಸಿ: ರಾಜಕೀಯ ಪಕ್ಷಗಳಿಗೆ ಸೂಚನೆ

“ಕೂಲಿ ಮಾಡಿ ಹೊಟ್ಟೆ ಹೊರೆದುಕೊಳ್ಳುವ ಜನರನ್ನು ಮದ್ಯದ ವ್ಯಸನಿಗಳನ್ನಾಗಿ ಮಾಡಿ ತಾವು ಮಾತ್ರ ಜೇಬು ತುಂಬಿಸಿಕೊಳ್ಳುತ್ತಿರುವ ಅಕ್ರಮ ಸಾರಾಯಿ ಅಂಗಡಿಗಳ ಮೇಲೆ ಕೂಡಲೇ ಅಬಕಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಅಕ್ರಮ ಸಾರಾಯಿ ಮಾರಾಟಕ್ಕೆ ಬ್ರೇಕ್ ಹಾಕಬೇಕು” ಎಂದು  ತಹಶೀಲ್ದಾರರ ಮೂಲಕ ಅಬಕಾರಿ ಇಲಾಖೆಯ ಅಧಿಕಾರಿಗಳಿಗೂ ಮನವಿ ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...