ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಜನೆವರಿ 27ರಂದು ನೇರ ಸಂದರ್ಶನ ನಡೆಯಲಿದೆ.
ಗದಗ ಜಿಲ್ಲೆಯ ಮುಂಡರಗಿ, ರೋಣ, ನರಗುಂದ ಹಾಗೂ ಶಿರಹಟ್ಟಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಅಪಘಾತ ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಸುತ್ತೋಲೆ ಪ್ರಕಾರ ಮಂಜೂರಾದ ಹುದ್ದೆಗಳನ್ನು ತಾತ್ಕಾಲಿಕವಾಗಿ ಅಥವಾ ಕ್ರಮಬಧ್ದವಾಗಿ ನೇಮಕ ಆಗುವವರೆಗೆ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸಂದರ್ಶನ ಮೂಲಕ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೊಠಡಿ ಸಂ-101, ಜಿಲ್ಲಾಡಳಿತ ಭವನ, ಹುಬ್ಬಳ್ಳಿ ರಸ್ತೆ, ಗದಗ ವಿಳಾಸಕ್ಕೆ ತಮ್ಮ ಬಯೋಡೆಟಾ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳ ದ್ವಿಪ್ರತಿಗಳೊಂದಿಗೆ ಜನೆವರಿ 27 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ʼಸಮುದಾಯದ ಆರೋಗ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮುಖ್ಯʼ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.
