ಗದಗ | ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ: ಜಿಲ್ಲಾಧಿಕಾರಿ ವೈಶಾಲಿ 

Date:

ಗದಗ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಜಿಲ್ಲಾ ಟಾಸ್ಕ್‌ಫೋರ್ಸ(ಗಣಿ) ಸಮಿತಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ ನಿಯಂತ್ರಣ ಮತ್ತು ಪರವಾನಗಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ತಾಲೂಕು ತಹಶೀಲ್ದಾರ್‌ಗಳು ತಮಗಿರುವ ದಂಡಾಧಿಕಾರಿ ಅಧಿಕಾರವನ್ನು ಬಳಸಿಕೊಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರಿಗೆ ಅಧಿಕ ಪ್ರಮಾಣದ ದಂಡ ವಿಧಿಸಲು ಅವಕಾಶವಿದ್ದು, ಅದನ್ನು ಚಲಾಯಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡುವವರನ್ನು ಸರಿದಾರಿಗೆ ತರಬೇಕು” ಎಂದು ಸೂಚನೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದಂಡ ವಿಧಿಸಿದ ನಂತರ ಅದನ್ನು ಸಂಬಂಧಿಸಿದ ವ್ಯಕ್ತಿಯ ಖಾತೆಯಲ್ಲಿ ಭೋಜಾ ದಾಖಲಿಸಬೇಕು. ಪದೇಪದೆ ತಪ್ಪೆಸಗಿದಲ್ಲಿ ಅವರನ್ನು ಗಡಿಪಾರಿಗೆ ಶಿಕ್ಷೆಗೆ ಒಳಪಡಿಸಲು ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗಬೇಕು” ಎಂದು ಸೂಚಿಸಿದರು.

“ಕಂದಾಯ, ಅರಣ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ತಮಗಿರುವ ಅಧಿಕಾರವನ್ನು ಚಲಾಯಿಸುವ ಮೂಲಕ ಅಕ್ರಮ ಮರಳು, ಕಲ್ಲು ಗಣಿಗಾರಿಕೆ ತಡೆಗೆ ಮುಂದಾಗಬೇಕು. ಈ ಮೂಲಕ ಸಾರ್ವಜನಿಕ ಆಸ್ತಿ ಸಂರಕ್ಷಣೆ ಮಾಡಬೇಕು ಹಾಗೂ ಸಾರ್ವಜನಿಕರ ವಿಶ್ವಾಸಾರ್ಹತೆ ಉಳಿಸಿಕೊಳ್ಳಬೇಕು” ಎಂದು ತಿಳಿಸಿದರು.

“ಅಕ್ರಮ ಗಣಿಗಾರಿಕೆ ಕುರಿತು ಮಾಧ್ಯಮದಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಂಬಂಧಿತ ಇಲಾಖೆಯ ಅಧಿಕಾರಿಗಳು ನೈಜತೆ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಬೇಕು” ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ‌ ಎಸ್ ನೇಮಗೌಡ ಮಾತನಾಡಿ, “ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರ ಮೇಲೆ ನಿರಂತರ ನಿಗಾ ವಹಿಸಬೇಕು. ವಾಹನಗಳ ತಪಾಸಣೆಯನ್ನು ನಿಯಮಿತವಾಗಿ ಸಾರಿಗೆ ಅಧಿಕಾರಿಗಳು ಮಾಡಬೇಕು. ಓವರ್‌ಲೋಡ್ ವಾಹನಗಳಿಗೆ ನಿಯಮಾನುಸಾರ ದಂಡ ವಿಧಿಸುವ ಮೂಲಕ ಪ್ರಕರಣ ದಾಖಲಿಸಬೇಕು” ಎಂದು ಸೂಚಿಸಿದರು.

“ಇಲಾಖಾಧಿಕಾರಿಗಳು ಜಂಟಿ ಸಮೀಕ್ಷೆ, ಸ್ಥಳ ಪರಿಶೀಲನೆಗೆ ತೆರಳುವ ಸಂದರ್ಭದಲ್ಲಿ ಪೊಲೀಸ್ ಇಲಾಖಾಧಿಕಾರಿಗಳ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು” ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, “ಸರ್ಕಾರದ ಮಾರ್ಗಸೂಚಿಗಳನ್ವಯ ಗಣಿಗಾರಿಕೆ ಮಾಡುವವರಿಗೆ ಅವಕಾಶ ನೀಡಬೇಕು. ಮಾರ್ಗಸೂಚಿ ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮ ತಪ್ಪಿದ್ದಲ್ಲ ಎಂಬುದನ್ನು ಮನವರಿಕೆ ಮಾಡಿಸುವ ಕಾರ್ಯವನ್ನು ಇಲಾಖಾಧಿಕಾರಿಗಳು ಮಾಡಬೇಕು” ಎಂದರು.

ಸಭೆಯಲ್ಲಿ ಹೊಳೆ, ನದಿಗಳ ಪಾತ್ರದಲ್ಲಿನ ಗುರುತಿಸಿರುವ ಮರಳು ಬ್ಲಾಕ್‍ಗಳನ್ನು ವಿಲೇವಾರಿ, ಕಪ್ಪತಗುಡ್ಡ ವನ್ಯಜೀವಿ ಧಾಮದಿಂದ ಒಂದು ಕಿಮೀ ವ್ಯಾಪ್ತಿಯೊಳಗೆ ಬರುವ ಕ್ರಶರ್ ಘಟಕಗಳ ಪರವಾನಗಿಗಳನ್ನು ಸ್ಥಗಿತಗೊಳಿಸುವುದು, ಕ್ರಶರ್ ಘಟಕಗಳ ಹೊಸದಾಗಿ ಮಂಜೂರು ಮಾಡುವುದು, ಕಪ್ಪತಗುಡ್ಡ ವನ್ಯಜೀವಿ ಧಾಮದಿಂದ ಹತ್ತು ಕಿಮೀ ವ್ಯಾಪ್ತಿಯಲ್ಲಿರುವ ಕಟ್ಟಡ ಕಲ್ಲು, ಮರಳು, ಮಣ್ಣು ಗಣಿಗಾರಿಕೆ ಮತ್ತು ಕ್ರಶರ್ ಘಟಕಗಳ ಚಟುವಟಿಕೆಗಳನ್ನು ನಿಷೇಧಿಸುವುದು ಹಾಗೂ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯೊಳಗೆ ಕಲ್ಲುಗಣಿ ಪರವಾನಿಗೆಗೆ ಹೊಸ ಅರ್ಜಿ ಕುರಿತಂತೆ ಚರ್ಚಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ನೇಮಕಾತಿಗೆ ಆಗ್ರಹ; ಕಾಲೇಜು ಶಿಕ್ಷಣ ಇಲಾಖೆಯ ಗೇಟ್ ಬಂದ್!

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ ವೆಂಕಟೇಶ ನಾಯ್ಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಚಿದಂಬರಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಫಲಿತಾಂಶಕ್ಕೂ ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

“ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ, ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ...

ರಾಯಚೂರು | ಉತ್ತರ ಕರ್ನಾಟಕದ ಭಾಗದಲ್ಲಿ ಗಮಕ ಕಾವ್ಯವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು: ಡಾ ಎ ವಿ ಪ್ರಸನ್ನ

ಉತ್ತರ ಕರ್ನಾಟಕದ ಭಾಗದಲ್ಲಿ ಹುಟ್ಟಿಕೊಂಡಿದ್ದ ಗಮಕ ಕಾವ್ಯ ಇಂದು ದಕ್ಷಿಣ ಕರ್ನಾಟಕದಲ್ಲಿ ಬೆಳೆಯುತ್ತಿದೆ....

ಬೆಂಗಳೂರು | ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ; ಕೆ ಸೋಮಶೇಖರ್

"ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಸತ್ವಯುತ ಲೇಖನಗಳು, ಬರಹಗಳು ಸಮಾಜದ ಬದಲಾವಣೆಯಲ್ಲಿ ಅತ್ಯಂತ...

ವಿಜಯಪುರ | ಪೆಟ್ರೋಲ್ ಡಿಸೇಲ್ ದರ ಹೆಚ್ಚಳ; ದರ ಇಳಿಕೆಗೆ ಡಿವೈಎಫ್‌ಐ ಆಗ್ರಹ

ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನಸಾಮಾನ್ಯರಿಗೆ...