ಗದಗ | ಮೌಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಸ್ಪೀಕರ್ ಯು.ಟಿ. ಖಾದರ್‌

Date:

“ಜನಪ್ರತಿನಿಧಿಗಳಿಂದ ಸಮಾಜದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವುದರಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ. ಬರಹಗಾರರು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕೇ ವಿನಹಃ ಒಡೆಯುವ ಕೆಲಸ ಮಾಡಬಾರದು” ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಹೇಳಿದರು.

- Advertisement -

ಅವರು ಗಜೇಂದ್ರಗಡದಲ್ಲಿ ಮುಸ್ಲಿಮ್‌ ಲೇಖಕರ ಸಂಘವು ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಹಾಗೂ ಕನ್ನಡ ಮತ್ತು ಉರ್ದು ಕವಿಗೋಷ್ಠಿಯಲ್ಲಿ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಗಜೇಂದ್ರಗಡದ ಶ್ರೀ ಜಗದ್ಗುರು ತೋಂಟದಾರ್ಯ ಸಿಬಿಎಸ್‌ಇ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಐ.ಜೆ. ಮ್ಯಾಗೇರಿ (ಕೃತಿ: ʼಜೈಲ್‌ ಡೈರಿʼ) ಪ್ರಶಸ್ತಿ ಸ್ವೀಕರಿಸಿದರು.

ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್.‌ ಪಾಟೀಲ್‌ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಐ.ಜೆ. ಮ್ಯಾಗೇರಿ ಅವರ ಧರ್ಮಪತ್ನಿ ಫರೀದಾ ಬೇಗಂ ಡಾಲಾಯತ್, ಗಜೇಂದ್ರಗಡದ ಅಂಜುಮನ್‌ ಇಸ್ಲಾಮ್‌ ಕಮಿಟಿ ಅಧ್ಯಕ್ಷ ಹಸನಸಾಬ ತಟಗಾರ, ಹಿರಿಯ ಸಾಹಿತಿ ಬಿ.ವಿ. ಕೆಂಚರೆಡ್ಡಿ, ಗಜೇಂದ್ರಗಡ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎ.ಪಿ. ಗಾಣಗೇರ, ಯೂಸುಫ್‌ ಗೋಡೆಕಾರ ಉಪಸ್ಥಿತರಿದ್ದರು. ಮುಸ್ಲಿಮ್‌ ಲೇಖಕರ ಸಂಘದ ಅಧ್ಯಕ್ಷ ಉಮರ್‌ ಯು.ಹೆಚ್.‌ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಮತ್ತು ಉರ್ದು ಕವಿಗೋಷ್ಠಿಯಲ್ಲಿ ಕವಿಗಳಾದ ಎ. ಎಸ್.‌ ಮಕಾನದಾರ, ಡಾ. ಹಸೀನಾ ಖಾದ್ರಿ, ಶಿಲ್ಪಾ ಮ್ಯಾಗೇರಿ, ಮೊಹಮ್ಮದ್‌ ಅರ್ಶದ್‌ ಹಿರೇಹಾಳ, ಮುರ್ತುಜಾ ಬೇಗಂ ಕೊಡಗಲಿ, ಅನ್ವರ್ ಅಹ್ಮದ್‌ ವಣಗೇರಿ ಮತ್ತು ಖಾಝಿ ಶಬ್ಬೀರ್‌ ಅಹ್ಮದ್‌ ಶಬ್ಬೀರ್‌ ಮನ್ಸೂರಿ ಕವನ ವಾಚಿಸಿದರು. ಮುಸ್ಲಿಮ್‌ ಲೇಖಕರ ಸಂಘದ ಕಾರ್ಯದರ್ಶಿ ಸಲೀಂ ಬೋಳಂಗಡಿ ಸ್ತುತಿಗೀತೆ ಹಾಡಿದರು.

ಇದನ್ನು ಓದಿದ್ದೀರಾ? ಹೆಸರು ಬೇಟಿ ಬಚಾವೋ, ರಕ್ಷಣೆ ಅತ್ಯಾಚಾರಿಗೆ; ಇದೇ ಮೋದಿ ಭಾರತ

ಮುಸ್ಲಿಮ್‌ ಲೇಖಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಏ.ಕೆ. ಕುಕ್ಕಿಲ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್‌ ಅಲಿ ಕಾರ್ಯಕ್ರಮ ನಿರೂಪಿಸಿ, ಮಾಜಿ ಅಧ್ಯಕ್ಷ ಎ. ಸಈದ್‌ ಇಸ್ಮಾಯಿಲ್ ಧನ್ಯವಾದವಿತ್ತರು. ಕಾರ್ಯಕಾರಿ ಸಮಿತಿ ಸದಸ್ಯರಾದ ಯಾಕೂಬ್‌ ಕಲ್ಲರ್ಪೆ ಮತ್ತು ಹುಸೈನ್‌ ಕಾಟಿಪಳ್ಳ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...