ಗದಗ | ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ

Date:

Advertisements

“ದೇಶದಲ್ಲಿ ಯುದ್ದದ ಸನ್ನಿವೇಶ ಇರುವುದರಿಂದ ಅಧಿಕಾರಿಗಳು ಯುದ್ಧ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸರ್ವ ಸನ್ನದ್ಧರಾಗಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಕರೆ ನೀಡಿದರು.

ಗದಗ ಪಟ್ಟಣದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ದೇಶದಲ್ಲಿ ಯುದ್ದ ಸನ್ನಿವೇಶದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ತುರ್ತು ಮುಂಜಾಗ್ರತಾ ಕ್ರಮಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಅಧಿಕಾರಿ ಹಾಗೂ ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದು, ಪರಿಸ್ಥಿತಿಗನುಗುಣವಾಗಿ ಜವಾಬ್ದಾರಿಯುತವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಪ್ರಮುಖ ಸ್ಥಳಗಳು, ದೇವಾಲಯ, ಮಸೀದಿ , ಚರ್ಚ, ಜನಸಂದಣಿ ಇರುವ ಪ್ರದೇಶಗಳಲ್ಲಿ ಒಂದು ವೇಳೆ ಅಹಿತಕರ ಘಟನೆ ನಡೆದರೆ ಪೂರ್ವ ತಯಾರಿಯಾಗಿ ಸಾರ್ವಜನಿಕರ ರಕ್ಷಣಾ ಕಾರ್ಯದ ಕಡೆ ನಿಗಾ ವಹಿಸಬೇಕು” ಎಂದು ಹೇಳಿದರು.

Advertisements

“ತಾಲೂಕು ಮಟ್ಟದಲ್ಲಿಯೂ ಸಹ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪೊಲೀಸ ಇಲಾಖೆಯ ಸಮನ್ವಯತೆಯಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ಜರುಗಿಸಬೇಕು” ಎಂದು ಸೂಚಿಸಿದರು.

“ಜಿಲ್ಲಾಡಳಿತದೊಂದಿಗೆ ತುರ್ತು ಪರಿಸ್ಥಿತಿಯಲ್ಲಿ ವಿವಿಧ ಇಲಾಖೆಗಳಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಹಂಚಿಕೆಯನ್ನು ಮಾಡಲಾಗಿದೆ. ಮಾಜಿ ಸೈನಿಕರು ಎನ್ಸಿಸಿ, ಎನ್ಎಸ್ಎಸ್ , ಪೊಲೀಸ ಇಲಾಖೆಯವರು ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಯಾವುದೇ ಕಾರಣಕ್ಕೂ ಕರ್ತವ್ಯದಲ್ಲಿ ನಿರ್ಲಕ್ಷತೋರಬಾರದು” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, “ಯುದ್ದ ಸನ್ನಿವೇಶದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಮಾರ್ಗಸೂಚಿಗಳ ಪಾಲನೆ ಅವಶ್ಯವಾಗಿದೆ. ಆರೋಗ್ಯ ಇಲಾಖೆಯವರು ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಔಷಧಿಗಳ ಸರಬರಾಜು, ವೈದ್ಯಕೀಯ ಸೇವೆ, ಆಕ್ಸಿಜನ್, ಆಂಬ್ಯುಲನ್ಸ್ ಗಳ ಸಿದ್ಧತೆ ಮಾಡಿಟ್ಟುಕೊಳ್ಳಬೇಕು. ಅಗತ್ಯಕ್ಕನುಗುಣವಾಗಿ ಸಾರ್ವಜನಿಕರ ರಕ್ಷಣೆಗಾಗಿ ಅಗ್ನಿ ಶಾಮಕ, ಕಂದಾಯ, ಯುವಜನ ಸೇವೆ, ಲೋಕೋಪಯೋಗಿ, ಅಹಾರ , ಶಿಕ್ಷಣ , ಸಾರಿಗೆ , ಹೆಸ್ಕಾಂ, ಪೊಲೀಸ ಇಲಾಖೆಯವರು ಕಾರ್ಯನಿರ್ವಹಣೆಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಬೇಕು” ಎಂದು ಹೇಳಿದರು.

“ನಿವೃತ್ತ ಸೈನಿಕರಿಗೂ ಸಹ ಪ್ರತ್ಯೇಕ ಜವಾಬ್ದಾರಿಯನ್ನು ಕೊಡಲಾಗುತ್ತದೆ. ಜಿಲ್ಲೆಯಲ್ಲಿನ ವಸತಿ ನಿಲಯಗಳ ರಕ್ಷಣೆ ಕಡೆ ನಿಗಾ ವಹಿಸಬೇಕು. ತಾಲೂಕು ಮಟ್ಟದಲ್ಲಿಯೂ ಸಭೆ ನಡೆಸಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಮಾಕ್ ಡ್ರಿಲ್ ಕಾರ್ಯಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿನ ಜಲ ಸ್ಥಾವರಗಳು, ಶಾಪಿಂಗ್ ಮಾಲ್, ಆಸ್ಪತ್ರೆ, ಕೈಗಾರಿಕೆ, ಧಾರ್ಮಿಕ ಕೇಂದ್ರಗಳು, ಜನಸಂದಣಿ ಇರುವ ಪ್ರಮುಖ ಸ್ಥಳಗಳಲ್ಲಿ ರಕ್ಷಣಾ ಕಾರ್ಯದ ಕುರಿತು ನಿಗಾ ವಹಿಸಬೇಕು. ವೈರ್ಲೆಸ್ ಕಂಟ್ರೋಲ್ ರೂಮ್ ನಿರ್ಮಾಣವಾಗಬೇಕು” ಎಂದು ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ಬಿ.ಎಸ್.ನೇಮಗೌಡ ತಿಳಿಸಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ “ಯುದ್ಧ ನಡೆದಾಗ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ನಾಗರಿಕರ ರಕ್ಷಣೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನಿರ್ಲಕ್ಷ ವಹಿಸದೇ ಕೆಲಸ ನಿರ್ವಹಿಸಬೇಕು. ಏನಾದರೂ ಸಮಸ್ಯೆ ಉಂಟಾದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ನೊಂದಿಗೆ ನೇರ ಸಂಪರ್ಕದಲ್ಲಿರಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಪಡೆಗಳು, ಎನ್ಸಿಸಿ, ಎನ್ಎಸ್ಎಸ್ ,ಹೋಮ್ ಗಾರ್ಡ್ಸ , ನಾಗರಿಕ ಸೇವಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಸಭೆಯ ಪ್ರಮುಖ ಅಂಶಗಳು :
• ಜಿಲ್ಲೆಯ ಹಮ್ಮಗಿ ಡ್ಯಾಂ ಹಾಗೂ ಡಂಬಳ ರಸ್ತೆಯಲ್ಲಿರುವ ಕೆ.ಇ.ಬಿ. ಗ್ರಿಡ್ ಮತ್ತು ಜಿಮ್ಸ್ ಆಸ್ಪತ್ರೆಗೆ ವಿಶೇಷ ಸೂಕ್ತ ಬಂದೋಬಸ್ತ್ ಗಾಗಿ ಪೊಲೀಸ ನಿಯೋಜನೆ
• ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ ಮಾಡುವ ಕುರಿತು ಯೋಜನೆ ಸಿದ್ಧಗೊಳಿಸಿ
• ತಾಲೂಕಾ ಮಟ್ಟದಲ್ಲಿ ಇದ್ದ ಪರಿಸ್ಥಿತಿ ನಿರ್ವಹಣೆಗೆ ಸಭೆ ಜರುಗಿಸಲು ಸೂಚನೆ
• ಜನಸಾಮಾನ್ಯರಲ್ಲಿ ಆತ್ಮಸ್ಥೆöÊರ್ಯ ತುಂಬಲು ಜಾಗೃತಿ ಕಾರ್ಯಕ್ರಮ ಆಯೋಜಿಸಿ
• ಸುಳ್ಳು ಸುದ್ದಿಗಳ ಕುರಿತು ಜನಸಾಮಾನ್ಯರು ಪ್ರತಿಕ್ರಯಿಸದಿರಲು ಸೂಚನೆ
• ವಿವಿಧ ಇಲಾಖೆಗಳಿಗೆ ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ
• ಜನಸಾಮಾನ್ಯರಿಗೆ ಪೊಲೀಸ ಹಾಗೂ ಸ್ಥಳೀಯ ಸಂಸ್ಥೆಗಳ ವಾಹನಗಳ ಮೂಲಕ ಸೈರನ್ ಸೂಚನೆ
• ಜಿಲ್ಲಾಡಳಿತದಲ್ಲಿ ಕಂಟ್ರೋಲ್ ರೂಂ ಆರಂಭಿಸಲು ಕ್ರಮ
• ಇಂಟರ್ ನೆಟ್ ಸಂಪರ್ಕ ಸುಸ್ಥಿತಿಯಲ್ಲಿಟ್ಟುಕೊಳ್ಳಲು ಸೂಚನೆ
• ತುರ್ತು ಪರಿಸ್ಥಿತಿಯಲ್ಲಿ ಮಾಧ್ಯಮಗಳಿಗೆ ಅಧಿಕೃತ ಸುದ್ದಿ ಬಿಡುಗಡೆಗೆ ನೋಡಲ್ ಅಧಿಕಾರಿ ನೇಮಕ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X