ಗದಗ | ಕುಡಿಯುವ ನೀರು ಪೂರೈಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ

Date:

Advertisements

ಮುಂಗಾರು ಆರಂಭ ಆಗುವವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಮುಂಗಾರು ಪೂರ್ವ ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸೋಮವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಮತ್ತು ಪಟ್ಟಣ ಪ್ರದೇಶ ಸೇರಿದಂತೆ ಯಾವ ಕಡೆಯೂ ಸಹ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

Advertisements

ಗದಗ, ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ನರಗುಂದ, ಲಕ್ಷ್ಮೇಶ್ವರ ತಾಲೂಕು ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಇಒಗಳು ಹಾಗೂ ಸಂಬಂಧಪಟ್ಟ ಎಂಜನಿಯರ್‍ಗಳು ಮಾಹಿತಿ ನೀಡಿ ಮೇ 15ರವರೆಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ಸಮಸ್ಯೆ ಉಂಟಾಗದಂತೆ ಗಮನ ಹರಿಸಲಾಗುವುದು ಎಂದು ಮಾಹಿತಿ ನೀಡಿದರು.

ಜಾನುವಾರುಗಳಿಗೆ ಮೇವನ್ನು ಸರಿಯಾಗಿ ಪೂರೈಸಬೇಕು. ಮೇವು ಕೊರತೆಯಾಗದಂತೆ ದಾಸ್ತಾನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ನಿರ್ದೇಶನ ನೀಡಿದರು.

ಜಿ.ಪಂ ಸಿಇಒ ಎಸ್.ಭರತ್ ಅವರು ಮಾತನಾಡಿ ಕುಡಿಯುವ ನೀರು ಪೂರೈಕೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಉಪ ವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಜಿ.ಪಂ. ಉಪ ಕಾರ್ಯದರ್ಶಿ ಸಿ.ಬಿ.ದೇವರಮನಿ, ತಹಸೀಲ್ದಾರ ಶ್ರೀನಿವಾಸ ಕುಲಕರ್ಣಿ, ತಾ.ಪಂ.ಇ.ಒಗಳು, ನೋಡಲ್ ಅಧಿಕಾರಿಗಳು ಇತರರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X