ಗದಗ | ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ಬರವಣಿಗೆ ಕಾರ್ಯಾಗಾರ

Date:

“ಪತ್ರಿಕಾ ವರದಿಗೆ ಉತ್ತಮ ಓದು, ಬರವಣಿಗೆಯ ಕೌಶಲ್ಯ, ಮತ್ತು ಸರಳ ಭಾಷೆಯಲ್ಲಿ ಬಳಸುವ ಕಲೆ ರೂಡಿಸಿಕೊಳ್ಳಬೇಕು” ಎಂದು ಜಿಲ್ಲಾ ಮಟ್ಟದ ಪತ್ರಿಕಾ ಬರವಣಿಗೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಶರಣಪ್ಪ ಸಂಗನಾಳ ಹೇಳಿದರು. 

- Advertisement -

ಗದಗ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಿನ್ನೆ ಸೋಮವಾರ ಆಯ್.ಕ್ಯೂ.ಎ.ಸಿ, ಎನ್.ಎಸ್.ಎಸ್ ಮತ್ತು ಈದಿನ.ಕಾಮ್ ಮಾಧ್ಯಮದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ಬರಹ ಕಾರ್ಯಗಾರವು ಪ್ರಾಂಶುಪಾಲರು ಪ್ರೊ. ಖಲಿಲ್ ಅಹಮ್ಮದ್ ಚಿಕ್ಕೇರೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಪ್ರತಿಭೆ ಯಾರ ಸೂತ್ತು ಅಲ್ಲ. ವಿದ್ಯಾರ್ಥಿಗಳು ಪಾಠ ಆಲಿಸುವಿಕೆ, ಸೃಜನಶೀಲ, ಕ್ರಿಯಾಶೀಲ ಮನಸ್ಸು ಯಾವಾಗಲು ಹೊಸ ಹುಡುಕಾಟದಲ್ಲಿ ಇರುತ್ತದೆ. ಸಂವಹನ ಕಲೆ ಬಹಳ ಮುಖ್ಯ. ಸಾಮಾಜಿಕ ಸಮಸ್ಯೆಗಳನ್ನು  ಪರಿಹರಿಸಲು ಪತ್ರಕೆ ಉತ್ತಮ ಸಾಧನವಾಗಿದ್ದು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದೆ” ಎಂದು ಶರಣಪ್ಪ ಸಂಗನಾಳ ಹೇಳಿದರು.

ಧಾರವಾಡ ಜಿಲ್ಲಾ ವರದಿಗಾರರು ಶರಣಪ್ಪ ಗೋಲ್ಲರ ಮಾತನಾಡಿ, “ನಮಗೆ ಪತ್ರಿಕಾ ಕ್ಷೇತ್ರದಲ್ಲಿ ಬರವಣಿಗೆ ಮೂಲಕ ಅನೇಕರು ಬದಲಾವಣೆ ತಂದವರು ಸಾಕಷ್ಟು ಪತ್ರಕರ್ತರು ಇದ್ದಾರೆ. ಅಂತವರು ನಮಗೆ ಮಾದರಿ. ಪ್ರತಿಯೂಬ್ಬರು ಸಮಾಜದ ಏಳ್ಗೆಯಲ್ಲಿ ಪತ್ರಿಕೆ ಪಾತ್ರ ದೂಡ್ಡದು” ಎಂದು ಹೇಳಿದರು.

ಆಯ್.ಕ್ಯೂ ಎ.ಸಿ.ಸಂಯೋಜಕರು ಡಾ. ಶಿವಪ್ಪ ಎಂ ಕುರಿ ಅವರು ವಿದ್ಯಾರ್ಥಿಗಳಿಗೆ ಉದ್ದೇಶಿಸಿ. ವಿದ್ಯಾರ್ಥಿಗಳಿಗೆ ನಿಮ್ಮ ಓದುವ ಹವ್ಯಾಸ, ಬರವಣಿಗೆಯ ಕಲೆ ಮತ್ತು ಅಭಿವ್ಯಕ್ತಿ ಕ್ರಮವನ್ನು ಉನ್ನತ ಮಟ್ಟಕ್ಕೆ ಒಯುತ್ತದೆ. ಹಾಗಾಗಿ ನಿರಂತರ ಓದು ಅತ್ಯವಶ್ಯ” ಎಂದು ಹೇಳಿದರು.

ಡಾ. ಮಹದೇವ ವಡೇಕರ ಅವರು ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮತ್ತು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ವಿದ್ಯಾರ್ಥಿಗಳು ಭವಿಷ್ಯದ ರೂವಾರಿಗಳು. ನೀವು ಬರವಣಿಗೆ ಮೂಲಕ ಸಮಾಜಕ್ಕೆ ಕನ್ನಡಿಯಾದರೆ ನಿಮ್ಮಿಂದ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ” ಎಂದು ಹೇಳಿದರು. 

ಕಾರ್ಯಕ್ರಮ ಆರಂಭದಲ್ಲಿ ಕು.ಸಂಧ್ಯಾ ಪ್ರಾರ್ಥನೆ ಹೇಳಿದರು. ಕಾರ್ಯಕ್ರಮದ ಅಧಿಕಾರಿಗಳಾದ ಡಾ. ಕಸ್ತೂರಿ ದಳವಾಯಿ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಡಾ.ರಾಮಚಂದ್ರ ಹೆಗಡೆ ವಂದನಾರ್ಪಣೆ ಹೇಳಿದರು. ಡಾ. ತಿಪ್ಪಣ್ಣಾ ಕೋಲ್ಕಾರ, ಶ್ರೀಮತಿ  ಉಮಾದೇವಿ ಕಣವಿ, ಡಾ. ಕವಿತಾ ಜಂಗವಾಡ, ಡಾ. ಪ್ರಭುರಾಜ ಕ್ಯಾರಕೂಪ್ಪ, ಡಾ. ತಿಪ್ಪೇಸ್ವಾಮಿ ಉಪಸ್ಥತರಿದ್ದರು.ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮ ಯಶಸ್ವಿಯಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...