ಗದಗ | ವೈದ್ಯರ ನಿರ್ಲಕ್ಷ್ಯ ಆರೋಪ: ಅವಳಿ ಮಕ್ಕಳು, ಬಾಣಂತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

Date:

ವೈದ್ಯರ ನಿರ್ಲಕ್ಷ್ಯದ ಕಾರಣದಿಂದ ಅವಳಿ ಕಂದಮ್ಮಗಳ ಸಹಿತ ಬಾಣಂತಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಖಾಸಗಿ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ಗಜೇಂದ್ರಗಡ ಪಟ್ಟಣದ ಕಾರೊಡಗಿಮಠ ಆಸ್ಪತ್ರೆಯಲ್ಲಿ ಫೆಬ್ರವರಿ 2 ರಂದು ವಿರೂಪಾಪೂರ ಗ್ರಾಮದ‌ 28 ವರ್ಷದ ನಂದಿನಿ ಎಂಬುವವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಒಂದು ಗಂಡು, ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸಿಝೇರಿಯನ್ ಮೂಲಕ ವೈದ್ಯರು ಹೆರಿಗೆ ಮಾಡಿಸಿದ್ದರು. ಹೆರಿಗೆ ನಂತರ ಅವಳಿ ಮಕ್ಕಳು ಸಾವನ್ನಪ್ಪಿದ್ದವು. ನಂತರ ತೀವ್ರ ರಕ್ತಸ್ರಾವದಿಂದ ಬಾಣಂತಿಗೆ ಲೋ ಬಿಪಿ ಆಗಿತ್ತು.

ತಕ್ಷಣ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆ ಬದಾಮಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರೂ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸಿಝೇರಿಯನ್ ಹೆರಿಗೆ ವೇಳೆ ರಕ್ತದ ವ್ಯವಸ್ಥೆ ಮಾಡದೇ ಹೆರಿಗೆ ಮಾಡಿಸಿದ್ದಾರೆಂದು ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗಜೇಂದ್ರಗಢ ಪಟ್ಟಣ ಮೃತ ಬಾಣಂತಿ ನಂದಿನಿ ತವರೂರಾಗಿದ್ದರಿಂದ ವಿಷಯ ತಿಳಿದ ಕುಟುಂಬಸ ಸದಸ್ಯರು ಆಸ್ಪತ್ರೆಗೆ ಆಗಮಿಸಿ ಪ್ರತಿಭಟಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಆಸ್ಪತ್ರೆಗೆ ಗಜೇಂದ್ರಗಢ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಬಗ್ಗೆ ಪ್ರಕರಣ ಕೂಡ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಉದ್ರೇಕಕಾರಿ ಭಾಷಣ ಆರೋಪ: ಖ್ಯಾತ ಮುಸ್ಲಿಂ ವಾಗ್ಮಿ ಮುಫ್ತಿ ಸಲ್ಮಾನ್ ಅಝ್ಹರಿ ಬಂಧನ

ತಮ್ಮ ಮೇಲಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯರು, ನಮ್ಮದೇನೂ ತಪ್ಪಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ತನಿಖೆ ಬಳಿಕವಷ್ಟೇ ಬಾಣಂತಿ, ಅವಳಿ ಮಕ್ಕಳ ಸಾವಿನ ವಿವರ ತಿಳಿದು ಬರಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...

ಸಂಜೀವಿನಿ ನೌಕರರಿಗೆ ಸೇವಾ ಭದ್ರತೆ ಒದಗಿಸಲು ಆಗ್ರಹ

ಸಂಜೀವಿನಿ ನೌಕರರಿಂದ ಬಿಟ್ಟಿ ಜಾಕರಿ ಮಾಡಿಕೊಳ್ಳಲಾಗುತ್ತಿದೆ. ಕಡಿಮೆ ವೇತನ ನೀಡುತ್ತಿದ್ದು, ಘನತೆಯ...