ಗದಗ | ಮನೆ ಬಾಗಿಲಿಗೆ ಅಂಚೆ ಸೇವೆ ನೂತನ ಗ್ರಾಹಕರ ಸೇವಾ ಕೇಂದ್ರ ಆರಂಭ

Date:

ಗದಗ ನಗರದ ಕುಮಾರವ್ಯಾಸ ವ್ಯಾಪಾರ ಮಳಿಗೆ ಸಂಕೀರ್ಣದಲ್ಲಿ ಗುರುವಾರ ಮನೆ ಬಾಗಿಲಿಗೆ ಅಂಚೆ ಸೇವೆ ನೂತನ ಗ್ರಾಹಕರ ಸೇವಾ ಕೇಂದ್ರ ಆರಂಭಸಿ ಗದಗ ವಿಭಾಗೀಯ ಅಂಚೆ ಅಧೀಕ್ಷಕರಾದ ಎಸ್.ಎಸ್.ಶಿರಹಟ್ಟಿ ಚಾಲನೆ ನೀಡಿದರು.

- Advertisement -

ಈ ವೇಳೆ ಮಾತನಾಡಿದ ಅವರು, “ಅಂಚೆ ಇಲಾಖೆ ಗ್ರಾಹಕರಿಗೆ ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ನೂತನ ಅಂಚೆ ಸೇವಾ ಕೇಂದ್ರವನ್ನು ಆರಂಭಿಸಲಾಗಿದೆ. ಈ ಕೇಂದ್ರದ ಮೂಲಕ ಗ್ರಾಹಕರಿಗೆ ಅಗತ್ಯ ಅಂಚೆ ಸೇವೆಗಳು ಮತ್ತಷ್ಟು ಸುಲಭವಾಗಿ ಮತ್ತು ವೇಗವಾಗಿ ದೊರೆಯಲು ಸಹಕಾರಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಗ್ರಾಹಕರಿಗೆ  ಸುಲಭ ಸೇವೆಗೆ ಅನುಕೂಕಲ ನೀಡುವ ಸಲುವಾಗಿ ಗದಗ ನಗರದ ಹೃದಯ ಭಾಗದಲ್ಲಿ ನೂತನ ಅಂಚೆ ಫ್ರಾಂಚೈಸಿ/ಗ್ರಾಹಕ ಸೇವಾ ಕೇಂದ್ರಗಳಿಗೆ ಸಮ್ಮತಿ ನೀಡಿದೆ. ಇನ್ನೂ, ಅಂಚೆ ಇಲಾಖೆ ಇಂದು ಕೇವಲ ಪತ್ರಗಳನ್ನು ತಲುಪಿಸುವ ಸಂಸ್ಥೆಯಾಗಿರದೆ, ಜನರ ಅಗತ್ಯಗಳಿಗೆ ಸ್ಪಂದಿಸುವ ಸಮಗ್ರ ಸೇವಾ ಸಂಸ್ಥೆಯಾಗಿ ರೂಪಾಂತರಗೊಂಡಿದೆ” ಎಂದರು.

“ತಂತ್ರಜ್ಞಾನ ಹಾಗೂ ಹೊಸ ಸೇವಾ ಕೇಂದ್ರಗಳ ಮೂಲಕ ಅಂಚೆ ಸೇವೆಗಳು ಈಗ ಗ್ರಾಹಕರ ಮನೆ ಬಾಗಿಲಿಗೆ ಇನ್ನಷ್ಟು ಹತ್ತಿರವಾಗುತ್ತಿವೆ. ಗದಗ ನಗರದ ನಾಗರಿಕರು ಈ ನೂತನ ಕೇಂದ್ರಗಳ ಸೌಲಭ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು” ಎಂದರು.

ಪ್ರಧಾನ ಅಂಚೆ ಪಾಲಕರಾದ ಲಕ್ಷ್ಮಣ ಅಸುಂಡಿ, ಅಂಚೆ ಸಹಾಯಕರಾದ ಎಂ.ಟಿ.ಕರಿಗಾರ,ಮಧು ಶಿರೂರ, ವೆಂಕಟೇಶ ಆಕಳವಾಡಿ ಮತ್ತಿತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌| ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆ ಆರಂಭಿಸುವಂತಿಲ್ಲ: ರೈತರು ಆಗ್ರಹ

"ಕಬ್ಬಿಗೆ ದರ ನಿಗದಿ‌ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ...

ಬೀಳಗಿ | ಕಬ್ಬಿಗೆ ರೂ.5,000 ದರ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ...

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...