ಗದಗ | ಬಾಬಾ ಸಾಹೇಬರನ್ನು ಕಳೆದುಕೊಂಡ ಭಾರತ ಅನಾಥವಾಗಿದೆ: ಮಂಜು ಬುರುಡಿ

Date:

ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಅನುಪಮ ಕೊಡುಗೆ ನೀಡಿದ ಭಾರತೀಯ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕಳೆದುಕೊಂಡ ಭಾರತ ಅನಾಥವಾಗಿದೆ ಎಂದು ಡಾ ಬಾಬು ಜಗಜೀವನರ ಆದಿಜಾಂಬವ  ಯುವ ಬ್ರಿಗೇಡ್ ಬೆಳಗಾವಿ ವಿಭಾಗ ಸಂಚಾಲಕ ಮಂಜು ಬುರಡಿ ಬೇಸರ ವ್ಯಕ್ತಪಡಿಸಿದರು.

- Advertisement -

ಗದಗ ಜಿಲ್ಲೆಯ ರೋಣ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪರಿವೀಕ್ಷಣಾ ಮಂದಿರದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆಯ ನಿಮಿತ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಸಲ್ಲಿಸಿ ಮೇಣದ ಬತ್ತಿ ಹಚ್ಚುವುದರ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಶಿಕ್ಷಣ ಸಂಘಟನೆ ಹೋರಾಟದ ಮಾರ್ಗದಲ್ಲಿ ಸಮಾಜದ ಕಟ್ಟಕಡೆ ವ್ಯಕ್ತಿಗೂ ನ್ಯಾಯ ಒದಗಿಸಿದ ಮಹಾತ್ಮ ಯಾರಾದರೂ ಇದ್ದರೆ, ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್. ಅವರು ಬರೆದ ಸಂವಿಧಾನವು ‘ಸರ್ವ ಧರ್ಮಗಳಿಗೂ ಸಮಭಾವ’ ಎಂಬ ಸಂದೇಶ ಸಂವಿಧಾನದ ಮುಖ್ಯ ಧ್ಯೇಯವಾಗಿದೆ. ಸಮಾನತೆ ಸ್ವಾತಂತ್ರ್ಯಕ್ಕಾಗಿ ಅನೇಕ ನೋವುಗಳನ್ನು ಸಹಿಸಿಕೊಂಡು  ಭಾರತ ದೇಶಕ್ಕೆ ಉತ್ತಮವಾದ ಸಂವಿಧಾನ ಬರೆದುಕೊಟ್ಟ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕಳೆದುಕೊಂಡ ಭಾರತ ಅನಾಥವಾಗಿದೆ” ಎಂದರು.

“ಸಮಾಜದಲ್ಲಿ ಎಲ್ಲ ಯುವಕರು ಡಾ. ಬಿ ಆರ್ ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟದ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವುದರಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿದೆ”
ಎಂದು ಮಂಜು ಬುರುಡಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮನರೇಗಾ ಮಾನವ ದಿನ 200ಕ್ಕೆ ಹೆಚ್ಚಿಸಲು ಗ್ರಾಕೂಸ್‌ ಆಗ್ರಹ

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಯಲ್ಲಪ್ಪ ಹಿರೇಮನಿ, ಪ್ರಕಾಶ ಜಗಳೂರು, ಶರಣಪ್ಪ ಮಾದರ, ಭೀಮಪ್ಪ ಮಾದರ, ಮಂಜುನಾಥ ಮಾದರ, ಅನಿಲ ದಂಡಿನ, ಎಲ್ಲಪ್ಪ ಪೂಜಾರ, ಶಿವು ಪೂಜಾರ, ಶರಣು ಮಾದರ, ಅರುಣ್ ಕುಮಾರ ಚೆನ್ನದಾಸರ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...