ಗದಗ | ಡಾ. ಐ.ಜೆ. ಮ್ಯಾಗೇರಿ ಅವರ ʼಜೈಲ್‌ ಡೈರಿʼ ಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

Date:

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೆಎಎಸ್‌ ಅಧಿಕಾರಿ, ಸಾಹಿತಿ ಡಾ. ಎ.ಜೆ. ಮ್ಯಾಗೇರಿ ಅವರ ʼಜೈಲ್‌ ಡೈರಿ (ಕೈದಿಗಳ ನೈಜ ಕಥನ)ʼ ಕೃತಿ ಆಯ್ಕೆಯಾಗಿದೆ.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದ ಇಮಾಮಸಾಬ್‌ ಜೀವನಸಾಬ್‌ ಮ್ಯಾಗೇರಿ ಧಾರವಾಡದ ಕರ್ನಾಟಕ ವಿವಿಯ ಕನ್ನಡ ಅಧ್ಯಯನ ಪೀಠದಿಂದ ಎಂ.ಎ. ಸ್ನಾತಕೋತ್ತರ ಪದವಿ ಪಡೆದು,  ಹಂಪಿ ಕನ್ನಡ ವಿವಿಯಲ್ಲಿ ಎಂ.ಫಿಲ್. ಹಾಗೂ ‘ವಸಾಹತುಶಾಹಿ ಅನುಭವ ಹಾಗೂ ಕನ್ನಡ ಕಾದಂಬರಿಗಳು’ ವಿಷಯದ ಮೇಲೆ ಪಿಎಚ್‌ಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

2005ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಯಾಗಿ ಕರ್ನಾಟಕ ಕಾರಾಗೃಹಗಳ ಇಲಾಖೆಯ ಸೇವೆಗೆ ಸೇರಿರುವ ಇವರು ಕರ್ನಾಟಕದ ಅನೇಕ ಕಾರಾಗೃಹಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಬೆಂಗಳೂರು ಪ್ರಧಾನ ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆಯಲ್ಲಿದ್ದಾರೆ.

2014ರಲ್ಲಿ ಭಾರತ ಸರ್ಕಾರದಿಂದ ಇಂಗ್ಲೆಂಡ್ ಮತ್ತು ಸ್ಯಾಟಲ್ಯಾಂಡ್ ದೇಶಗಳಿಗೆ ಅಧ್ಯಯನ ಪ್ರವಾಸಕ್ಕೆ ಏಕೈಕ ಅಧಿಕಾರಿಯಾಗಿ ಆಯ್ಕೆಗೊಂಡು ಅಲ್ಲಿಯ ಕಾರಾಗೃಹಗಳ ಸುಧಾರಣೆ ಮತ್ತು ಅಪರಾಧಿಗಳ ಮನಃಪರಿವರ್ತನೆಯ ಕಾರ್ಯಕ್ರಮಗಳನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಂಡು ಬಂಧಿಗಳ ಸುಧಾರಣೆಗಾಗಿ ಶ್ರಮಿಸುತ್ತಿದ್ದಾರೆ.

ಇವರ ಕರ್ತವ್ಯ ನಿಷ್ಠೆ ಮತ್ತು ಕಾರಾಗೃಹ ಆಡಳಿತದಲ್ಲಿ ಕೈಗೊಂಡ ಸುಧಾರಣಾ ಕ್ರಮಗಳಿಗಾಗಿ 2021ರಲ್ಲಿ ಕರ್ನಾಟಕ ಸರ್ಕಾರದಿಂದ ಮುಖ್ಯಮಂತ್ರಿಗಳ ಚಿನ್ನದ ಪದಕ ದೊರೆತಿದೆ. ‘ಹಿಂಸಾಕಾರಣ’, ಇವರ ಇನ್ನೊಂದು ಪ್ರಕಟಿತ ಕೃತಿ. ಇವರ ಬರಹಗಳು ಬೆಂಗಳೂರು ಮತ್ತು ತುಮಕೂರು ವಿವಿಗಳ ಪದವಿ ತರಗತಿಗೆ ಪಠ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಸಿಎಂಗೆ ಅಲೆಮಾರಿ ಸಮುದಾಯದ ಗುಡಿಸಲು ಕಾಣದಂತೆ ಮರೆ ಮಾಡಿದ ಜಿಲ್ಲಾಡಳಿತ

ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ನೀಡಲಾಗುವ ʼಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿʼಯು ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದೆ. ಪ್ರಶಸ್ತಿಗೆ 22 ಕೃತಿಗಳು ಬಂದಿದ್ದು, ಸಾಹಿತಿ ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು, ಲೇಖಕಿ ಮತ್ತು ಪ್ರಾಧ್ಯಾಪಕಿ ಶಮೀಮಾ ಕುತ್ತಾರ್‌ ಹಾಗೂ ಪತ್ರಕರ್ತ, ಸಾಹಿತಿ ಹಂಝ ಮಲಾರ್ ತೀರ್ಪುಗಾರರಾಗಿ ಸಹಕರಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 27 ರಂದು ಗಜೇಂದ್ರಗಡದಲ್ಲಿ ನಡೆಯಲಿದೆ ಎಂದು ಮುಸ್ಲಿಮ್‌ ಲೇಖಕರ ಸಂಘದ ಅಧ್ಯಕ್ಷ ಉಮರ್‌ ಯು. ಹೆಚ್.‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...