2023-2024 ಸಾಲಿನ ಅತ್ಯುತ್ತಮ ಎನ್.ಎಸ್.ಎಸ್ ಘಟಕ ಮತ್ತು ಅತ್ಯುತ್ತಮ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಆಗಿ ಸೇವೆ ಸಲ್ಲಿಸಿದ್ದಕ್ಕೆ ಡಾ. ಮಹಾದೇವ ವಡೇಕಾರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯವು ಡಾಕ್ಟರ್ ಡಿ ಸಿ ಪಾವಟೆ ಪ್ರಶಸ್ತಿ ಘೋಷಣೆ ಮಾಡಿದೆ.
ಡಾ. ಮಹಾದೇವ ವಡೇಕಾರ ಅವರು ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನಗಳ ಕೇಂದ್ರ ನರಗುಂದದಲ್ಲಿ ಸೇವೆ ಸಲ್ಲಿಸಿದ್ದನ್ನು ಗಮನಿಸಿ ಕವಿವಿ ಪ್ರಶಸ್ತಿ ಘೋಷಣೆ ಮಾಡಿದೆ.
ಸಧ್ಯ ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಗದಗನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ಘಟಕದ ಕಾರ್ಯಕ್ರಮ ಅಧಿಕಾರಿ ಹಾಗೂ ಸಮಾಜಶಾಸ್ತ್ರದ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
“ಕಾಲೇಜು ಎನ್ ಎಸ್ ಎಸ್ ಘಟಕ ಮತ್ತು ಕಾರ್ಯಕ್ರಮ ಅಧಿಕಾರಿಗೆ ಇದು ಉತ್ತರ ಕರ್ನಾಟಕದ ಹಳೆಯ ಮತ್ತು “ನ್ಯಾಕ್ A” ಮಾನ್ಯತೆ ಪಡೆದ ಪ್ರತಿಷ್ಠಿತ ಮಹಾವಿದ್ಯಾಲಯಕ್ಕೆ, ಕಾಲೇಜಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ದೊರೆತ ಪ್ರಶಸ್ತಿ” ಎಂದು ಬಣ್ಣಿಸಿದ್ದು, “ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಇಮ್ಮಡಿಗೊಳಿಸಿದೆ” ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು, ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ಎನ್ ಎಸ್ ಎಸ್ ಸ್ವಯಂ ಸೇವಕರು ಮತ್ತು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.