ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ತೋಂಟದಾರ್ಯ ಪುರಸ್ಕಾರ ಸಮಿತಿಯು ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ನೆನಪಿನಲ್ಲಿ ನೀಡುವ ರಾಜ್ಯಮಟ್ಟದ ‘ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ’ಕ್ಕೆ ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ ಮತ್ತು ಟಿವಿ9 ವಾಹಿನಿಯ ಇನ್‌ಪುಟ್ ಮುಖ್ಯಸ್ಥ ವಿಲಾಸ್ ನಾಂದೋಡ್ಕರ್ ಆಯ್ಕೆಯಾಗಿರುವುದಾಗಿ ಪ್ರಶಸ್ತಿ ಆಯ್ಕೆ ಸಮಿತಿ ತಿಳಿಸಿದೆ.
ಈ ಪ್ರಶಸ್ತಿಯು ₹5 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಗದಗ ನಗರದ ತೋಂಟದಾರ್ಯ ಮಠದಲ್ಲಿ ಜುಲೈ ಮೂರನೇ ವಾರದಲ್ಲಿ ನಡೆಯುವ ಶಿವಾನುಭವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕ ಡಾ. ಶಶಿಧರ್ ತೋಡ್ಕರ್ ತಿಳಿಸಿದ್ದಾರೆ.
