ಗದಗ | ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಡಿಎಸ್ಎಸ್ ಆಗ್ರಹ

Date:

ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡ ಸೋಮಪ್ಪ ಐತಾಪುತ ಅವರು ಮಂಡರಗಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

- Advertisement -

ಗದಗ ಜಿಲ್ಲೆಯ ಮುಂಡರಗಿಯಲ್ಲಿ ತಹಶೀಲ್ದಾರ್‌ ಕಚೇರಿಗೆ ತೆರಳಿ, ಹಕ್ಕೊತ್ತಾಯ ಪತ್ರ ಸಲ್ಲಿಸಿದ ಅವರು, “ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣ ಪತ್ರ ಕೊಡಬಾರದೆಂದು ಸರ್ಕಾರಿ ಆದೇಶ ಇದೆ. ಆದರೂ, ಮುಂಡರಗಿ ತಾಲೂಕಿನ ಬಿದರಳ್ಳಿ, ಹಾರೊಗೇರಿ, ಹಮ್ಮಿಗಿ, ಡಂಬಳ ಗ್ರಾಮ ಪಂಚಾಯಿತಿಗಳಲ್ಲಿ ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ಕೊಡುತ್ತಿರುವುದು ಕಂಡುಬಂದಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಜಾತಿ ಕಾಲಮ್‌ಅನ್ನು ತಾಲೂಕು ದಂಡಾಧಿಕಾರಿಗಳು ಪರಿಶೀಲಿಸಿ ಜಾತಿ ಪ್ರಮಾಣಪತ್ರ ನೀಡಬೇಕು. ಮಡ್ಡಿ ಜನಾಂಗಕ್ಕೆ ಸೇರಿದವರಿಗೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದು” ಎಂದು ಆಗ್ರಹಿಸಿದರು.

ಡಿಎಸ್ಎಸ್ ಮುಖಂಡ ದುರುಗಪ್ಪ ಹರಿಜನ ಮಾತನಾಡಿ, “ಮಡ್ಡಿ ಜನಾಂಗದ ಕೆಲವರು ಸರ್ಕಾರಿ ಸೌಲಭ್ಯಗಳಿಗಾಗಿ ಭೋವಿ ಜನಾಂಗಕ್ಕೆ ಸೇರಿದವರೆಂದು ಪ್ರಮಾಣಪತ್ರ ಪಡೆಯುತ್ತಿದ್ದಾರೆ. ಹೀಗಾಗಿ, ತಾಲೂಕು ದಂಡಾಧಿಕಾರಿಗಳು ಕೊಟ್ಟಿ ಜಾತಿ ಪ್ರಮಾಣ ಪತ್ರವನ್ನು ಕೊಡಬಾರದು. ಒಂದುವೇಳೆ, ಮುಂದಿನ ದಿನಗಳಲ್ಲಿ ಕೊಟ್ಟಿ ಜಾತಿ ಪ್ರಮಾಣ ಪತ್ರ ಕೊಟ್ಟಲ್ಲಿ ಹೋರಾಟ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ, ಡಿಎಸ್ಎಸ್ ಮುಖಂಡ ಕೊಟ್ರೇಶಿ, ಬಿ.ಎಸ್ ಪುಜಾರ್, ಫಕೀರೇಶ ಮಾದರ ಹಾಗೂ ವಿ ಟಿ ತಿಮ್ಮಾಪುರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...