ಗದಗ ಜಿಲ್ಲೆಯ ರೋಣ ಪಟ್ಟಣದ ಕೃಷಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಒನಕೆ ಓಬವ್ವ ಜಯಂತಿ ಆಚರಿಸದಿರುವುದನ್ನು ಖಂಡಿಸಿ ಡಿಎಸ್ಎಸ್ ಮುಖಂಡರು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಡಿಎಸ್ಎಸ್ ಮುಖಂಡ ಸಂಜೀವ್ ಮಾತನಾಡಿ, “ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೇಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಛಲವಾದಿ ಸಮುದಾಯದ ಕಹಳೆ ಮದ್ದಹನುಮಪ್ಪನ ಹೆಂಡತಿ. ಹೈದರ್ ಅಲಿಯು ಚಿತ್ರದುರ್ಗದ ಮೇಲೆ ಹಠಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಪ್ರಾಣವನ್ನು ಲೆಕ್ಕಿಸದೇ ಹೋರಾಡಿದ ವೀರ ಮಹಿಳೆ. ಅಂತಹದರಲ್ಲಿ ಒನಕೆ ಓಬವ್ವ ಜಯಂತಿ ಆಚರಣೆ ಮಾಡದಿರುವುದು ದುರಂತವೇ ಸರಿ” ಎಂದರು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇಮಕಾತಿಯಲ್ಲಿ ಅಕ್ರಮ; ಕ್ರಮಕ್ಕೆ ಆಗ್ರಹ
“ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಕೈಗೊಳ್ಳಲಾಗುವುದು” ಎಂದು ದಲಿತ ಮುಖಡರು ಎಚ್ಚರಿಕೆ ನೀಡಿದರು.