ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಆಕ್ರೋಶ ವ್ಯಕ್ತಪಡಿಸಿದೆ.
ಗದಗ ಜಿಲ್ಲೆಯ ರೋಣ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಡಿವಿಪಿ ಕಾರ್ಯಕರ್ತರು, “ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗೆ ಬಳಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು” ಎಂದು ಒತ್ತಾಯಿಸಿದ್ದಾರೆ.
ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ತಾಲೂಕು ಅದ್ಯಕ್ಷ ರಮೇಶ ನಂದಿ, “ಎಸ್‌ಸಿ/ಎಸ್‌ಟಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದನ್ನು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಗ್ಯಾರಂಟಿ ಯೋಜನೆಗಳಿಗೆ ಬಳಸುವುದು ಸರಿಯಲ್ಲ. ಎಸ್‌ಸಿ/ಎಸ್‌ಟಿ ಅನುದಾನವನ್ನು ಅದೇ ಸಮುದಾಯಗಳ ಅಭಿವೃದ್ಧಿಗೆ ಮಾತ್ರವೇ ಬಳಸಬೇಕು” ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ SC/ST ಸಮುದಾಯಗಳಿಗೆ ಮೀಸಲು ಇರುವ 13 ಸಾವಿರ ಕೋಟಿ ಅನುದಾನವನ್ನು ಬಳಕೆ ಮಾಡದೇ ಸಮುದಾಯದ ಅಭಿವೃದ್ಧಿಗೆ ಬಳಸಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ರೋಣ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಿವಿಪಿ ಉಪಾಧ್ಯಕ್ಷ ಹಣಮಂತ ಛಲವಾದಿ. ಪ್ರಧಾನಕಾರ್ಯದರ್ಶಿ ಅಭಿಷೇಕ್ ಕೊಪ್ಪದ ಸಂಘಟನಾ ಕಾರ್ಯದರ್ಶಿ ಮುತ್ತು ಕಡಬಿನ. ಮತ್ತು ರಮೇಶ ನಡುವಿನಮನಿ ಉಪಸ್ಥಿತರಿದ್ದರು.