ಗದಗ | ಈ ದಿನ ವರದಿಯ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು: ಮೂಲ ಸ್ವರೂಪಕ್ಕೆ ತಿರುಗಿದ ಇಟಗಿ ಬಸ್ ನಿಲ್ದಾಣ

Date:

Advertisements

ಗದಗ ಜಿಲ್ಲೆಯ ರೋಣ ತಾಲೂಕಿನ ಇಟಗಿ ಬಸ್ ನಿಲ್ದಾಣವು ಅಧಿಕಾರಿಗಳ ನಿರ್ಲಕ್ಷದಿಂದ ಸ್ವಚ್ಛತೆಯಿಲ್ಲದೇ ಹಾಳಾಗಿತ್ತು. ಅನೈತಿಕ ಚಟುವಟಿಕೆಗಳು ಹಾಗೂ ಬಸ್ ನಿಲ್ದಾಣ ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟಿತ್ತು. ಇದನ್ನು ಗಮನಿಸಿದ ಈ ದಿನ ಡಾಟ್ ಕಾಮ್ “ಅಧಿಕಾರಿಗಳ ನಿರ್ಲಕ್ಷ : ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟ ಇಟಗಿ ಬಸ್ ನಿಲ್ದಾಣ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ವರದಿಯನ್ನು ಡಿಸೆಂಬರ್ 11ರಂದು ಪ್ರಕಟಿಸಿತ್ತು.

ವರದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಗದಗ ವಿಭಾಗದ ಅಧಿಕಾರಿಗಳು, 24 ಗಂಟೆಯೊಳಗೆ ಸ್ವಚ್ಛ ಮಾಡಿಸಿದ್ದಲ್ಲದೇ, ಇಟಗಿ ಬಸ್ ನಿಲ್ದಾಣವನ್ನು ಸಾರ್ವಜನಿಕರ ಅನುಕೂಲವಾಗುವಂತೆ ವ್ಯವಸ್ಥೆ ಮಾಡಿದ್ದಾರೆ.

ಸರ್ಕಾರ ಪ್ರಯಾಣಿಕರ ಅನುಕೂಲಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಣೆ ಮಾಡಲು ನಿರಾಸಕ್ತಿ ತೋರುತ್ತಿರುವುದರಿಂದ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಡುತ್ತಿದೆ. ಸಾರ್ವಜನಿಕರ ಉಪಯೋಗಕ್ಕೆಂದು ಬಸ್ ನಿಲ್ದಾಣ ನಿರ್ಮಿಸಿದರೆ, ಅದು ಉಪಯೋಗಕ್ಕೆ ಬಾರದ ಸ್ಥಿತಿಗೆ ತಲುಪಿತ್ತು. ಬಸ್ ನಿಲ್ದಾಣ ಅವ್ಯವಸ್ಥೆ ಆಗಿರುವುದರಿಂದ ಬೇರೆ ಕಡೆ ಬಸ್ಸುಗಳು ನಿಲ್ಲುತ್ತಿದ್ದವು. ಬಸ್ ನಿಲ್ದಾಣದ ಆವರಣದಲ್ಲಿ ಎಲ್ಲೆಂದರಲ್ಲಿ ಕಸ ಕಡ್ಡಿ ಬೆಳೆದು ನಿಂತಿದ್ದವು. ಬಸ್ ನಿಲ್ದಾಣ ಉಪಯೋಗಕ್ಕೆ ಬಾರದೆ ಇರುವುದರಿಂದ ರೈತರು ಉಳ್ಳಾಗಡ್ಡಿ ಹಾಕಿದ್ದಾರೆ. ದನಕರುಗಳು ಬಿಡು ಬಿಟ್ಟಿರುತ್ತವೆ. ದುರ್ವಾಸನೆ ಬಿರುತ್ತಿತ್ತು. ಇದರಿಂದ ಬಸ್ ನಿಲ್ದಾಣ ಹಾಳು ಕೊಂಪೆಯಾಗಿತ್ತು.

Advertisements
ಇಟಗಿ1

ಸರಿಯಾದ ನಿರ್ವಹಣೆ ಇಲ್ಲದೇ ಇರುವುದರಿಂದ ಈ ಬಸ್ ನಿಲ್ದಾಣ ಕುಡುಕರ ತಾಣವಾಗಿತ್ತು. ರಾತ್ರಿಯಾದರೆ ಕುಡುಕರು ಬಸ್ ನಿಲ್ದಾಣಕ್ಕೆ ಬಂದು ಕುಡಿಯುತ್ತಾರೆ. ಇದರಿಂದ ಎಲ್ಲೆಂದರಲ್ಲಿ ಸಾರಾಯಿ ಪಾಕೇಟುಗಳು, ಬಾಟಲಿಗಳು, ಪೌಚುಗಳು ಕಾಣುತ್ತಿದವು.

ಈ ದಿನ ಡಾಟ್ ಕಾಮ್ ಇಟಗಿ ಬಸ್ ನಿಲ್ದಾಣ ಅವ್ಯವಸ್ಥೆ ಕುರಿತು ವಿಸ್ತ್ರತ ವರದಿ ಪ್ರಕಟಿಸಿದ ಬೆನ್ನಲ್ಲೆ, ಸಂಬಂಧಪಟ್ಟ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಗದಗ ವಿಭಾಗದ ಅಧಿಕಾರಿಗಳ ಗಮನಕ್ಕೂ ತಂದಿತ್ತು. ಇದಕ್ಕೆ ಸ್ಪಂದಿಸಿರುವ ಅಧಿಕಾರಿಗಳು, ಡಿ.12ರಂದು ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿದ್ದಾರೆ. ಹೊರಗಡೆಯೇ ನಿಲ್ಲುತ್ತಿದ್ದ ಪ್ರತಿಯೊಂದು ಬಸ್ಸುಗಳು ಈಗ ಬಸ್ ನಿಲ್ದಾಣದೊಳಗೆ ಬಂದು ಹೋಗುತ್ತಿವೆ. ಬಸ್ ನಿಲ್ದಾಣ ಸ್ವಚ್ಛಗೊಳಿಸಿರುವ ಫೋಟೋಗಳನ್ನು ಕೂಡ ಈ ದಿನ ಡಾಟ್ ಕಾಮ್ ಕಚೇರಿಗೂ ಕಳುಹಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ ಅಧಿವೇಶನ | ಚರ್ಚೆಗೆ ಬಾರದ ಗಡಿ ವಿವಾದ: ಎಂಇಎಸ್ ತಕರಾರಿಗೆ ಪರಿಹಾರ ಯಾವಾಗ?

ಈ ಬಗ್ಗೆ ಈ ದಿನ ಡಾಟ್ ಕಾಮ್‌ನೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ಸಿದ್ದಪ್ಪ ಮಾತನಾಡಿ, “ಈ ಹಿಂದೆ ಬಸ್ಸುಗಳು ಬಸ್ ನಿಲ್ದಾಣದ ಒಳಗಡೆಯೇ ಹಾದು ಹೋಗುತ್ತಿದ್ದವು. ಸರಿಯಾದ ನಿರ್ವಹಣೆ ಇಲ್ಲದೆ ಕಸ ಕಂಟಿ, ಬೆಳೆದು ಕುಡುಕರ ಅಡ್ಡವಾಗಿ ಮಾರ್ಪಟ್ಟಿತ್ತು. ಈ ದಿನ ಡಾಟ್ ಕಾಮ್‌ ವರದಿ ಬೆನ್ನಲೇ ಅಧಿಕಾರಿಗಳು ಎಚ್ಚೆತ್ತು ಇಡೀ ಬಸ್ ನಿಲ್ದಾಣವನ್ನು ಸ್ವಚ್ಛತೆಗೊಳಿಸಿ ಮೊದಲಿನಂತೆಯೇ ಆಗಿದೆ. ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನಕ್ಕೆ ತಂದಿದ್ದಕ್ಕೆ ಈ ದಿನ ಡಾಟ್ ಕಾಮ್‌ಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಬಸ್ 16
ಬಸ್1 1
WhatsApp Image 2024 12 10 at 3.00.26 PM 1
ಬಸ್ ನಿಲ್ದಾಣ ಮೊದಲಿಗೆ ಇದ್ದ ಸ್ಥಿತಿ
SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X