ಗದಗ | ಅರ್ಹರೆಲ್ಲರೂ ಮೇ 7ರಂದು ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಬೇಕು; ಜಿಲ್ಲಾಧಿಕಾರಿ ಸೂಚನೆ

Date:

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7ರಂದು ಮತದಾನ ಜರುಗಲಿದ್ದು, ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಜರುಗಿದ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸ್ವೀಪ್ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಪ್ರಜಾಪ್ರಭುತ್ವ ಬಲಿಷ್ಠಗೊಳಿಸಲು ಮತದಾನವು ಪ್ರಮುಖ ಪಾತ್ರ ವಹಿಸಲಿದ್ದು, ಈ ನಿಟ್ಟಿನಲ್ಲಿ ಅರ್ಹ ಮತದಾರರು ಮತದಾನ ಮಾಡಲು ಹೆಚ್ಚಿನ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣ, ರೇಲ್ವೆ, ಬ್ಯಾಂಕ್, ಆಸ್ಪತ್ರೆಗಳು ಸೇರಿದಂತೆ ವಿವಿಧ ಪ್ರಮುಖ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಮತದಾನದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಜರುಗುವ ಜಾತ್ರೆ, ಉತ್ಸವ, ಸಂತೆಗಳಲ್ಲಿಯೂ ಕೂಡಾ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಒಟ್ಟಾರೆಯಾಗಿ ಎಲ್ಲ ಅರ್ಹ ಮತದಾರರೂ ಕಡ್ಡಾಯವಾಗಿ ಮತದಾನ ಮಾಡಲು ಕ್ರಮ ವಹಿಸಬೇಕು” ಎಂದು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಬಿ ಎಸ್ ನೇಮಗೌಡ ಮಾತನಾಡಿ, “ಜಿಲ್ಲೆಯಿಂದ ವಲಸೆ ಹೋದವರ ಕುರಿತು ಮಾಹಿತಿ ಸಂಗ್ರಹಿಸಿ ಅವರೂ ಕೂಡ ಕಡ್ಡಾಯವಾಗಿ ಮತದಾನ ಮಾಡಲು ಅವರನ್ನು ಪ್ರೋತ್ಸಾಹಿಸಬೇಕು” ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, “ಅರ್ಹರ ಪ್ರತಿಯೊಂದು ಮತವೂ ಅತ್ಯಮೂಲ್ಯವಾಗಿದ್ದು, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಮತದಾನದ ಮಹತ್ವ ಕುರಿತು ಬ್ಯಾನರ್ ಅಳವಡಿಸುವುದು ಹಾಗೂ ವಾಹನಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಲು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ʼಬಿಜೆಪಿ ಹಠಾವೋ, ದೇಶ್ ಬಚಾವೋʼ ಘೋಷದೊಂದಿಗೆ ಸಿಪಿಐ ರಾಜಕೀಯ ಸಮಾವೇಶ

ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್ ಎಸ್ ನೀಲಗುಂದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎ ರಡ್ಡೇರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...